ಬೆಂಗಳೂರು: ಯಾದಗಿರಿ ನಗರ ಠಾಣೆ ಪಿಎಸ್‌ಐ ಪರಶುರಾಮ್ (PSI Parashuram) ಸಾವು ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಕರಣದ ಹೆಚ್ಚಿನ ತನಿಖೆ ಸಲುವಾಗಿ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಕೂಲಂಕಷ ತನಿಖೆ ನಡೆಸುವಂತೆ ಸಿಐಡಿ ಡಿಜಿಪಿಗೆ ಗೃಹ ಇಲಾಖೆ ಪತ್ರ ಬರೆದಿದೆ. ಇದನ್ನೂ ಓದಿ: ಶಾಸಕರು ಹಣ ಕೇಳಿದ್ದಕ್ಕೆ ಒತ್ತಡದಿಂದ ಪಿಎಸ್‌ಐ ಸಾವು: ಇದು ಲೂಟಿ ಸರ್ಕಾರ ಎಂದ ಅಶೋಕ್
Advertisement
Advertisement
ಪಿಎಸ್‌ಐ ಪರಶುರಾಮ್ ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದರು. ಪಿಎಸ್‌ಐ ಸಾವು ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದೆ. ನಗರ ಪೊಲೀಸ್ ಠಾಣೆಯಲ್ಲೇ ಮುಂದುವರಿಸಲು 30 ಲಕ್ಷ ರೂ. ಹಣಕ್ಕಾಗಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ಅವರ ಪುತ್ರ ಪಂಪನಗೌಡ ಬೇಡಿಕೆ ಇಟ್ಟಿದ್ದರು ಎಂದು ಮೃತ ಪರಶುರಾಮ್ ಪತ್ನಿ ಶ್ವೇತಾ ಆರೋಪಿಸಿದ್ದಾರೆ.
Advertisement
ನನ್ನ ಪತಿ ಕಳೆದ 7 ತಿಂಗಳಿಂದ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈಗ ಮತ್ತೆ ಸೆನ್ ಠಾಣೆಗೆ ವರ್ಗಾವಣೆ ಮಾಡಿದ್ದರು. ನಗರ ಠಾಣೆಯಲ್ಲೇ ಮುಂದುವರಿಯಲು 30 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ನನ್ನ ಪತಿ ಮನನೊಂದಿದ್ದರು ಎಂದು ದೂರಿದ್ದಾರೆ. ಇದನ್ನೂ ಓದಿ: ಯಾದಗಿರಿ ಶಾಸಕರಿಂದ ಪೋಸ್ಟಿಂಗ್‌ಗೆ 30 ಲಕ್ಷ ರೂ ಬೇಡಿಕೆ? – ಪಿಎಸ್‌ಐ ಸಾವಿನ ಸುತ್ತ ಅನುಮಾನದ ಹುತ್ತ
Advertisement
ಪಿಎಸ್‌ಐ ಸಾವು ವಿಚಾರವಾಗಿ ದಲಿತಪರ ಸಂಘಟನೆಗಳು ಪ್ರತಿಭಟನೆಗಳು ನಡೆಸುತ್ತಿವೆ. ಪರಶುರಾಮ್ ಸಾವಿಗೆ ಕಾರಣರಾದವರನ್ನು ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.