ಯಾದಗಿರಿ: ಅಪಘಾತಕ್ಕೀಡಾಗಿದ್ದ ಗಾಯಾಳುಗಳನ್ನು ಸ್ವಂತ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಸ್ವತಃ ತಾವೇ ಚಿಕಿತ್ಸೆ ನೀಡಿ ಸಂಸದ ಉಮೇಶ್ ಜಾಧವ್ ಮಾನವೀಯತೆ ಮೆರೆದಿದ್ದಾರೆ.
ಯಾದಗಿರಿ ನಗರದ ಕೆಎಸ್ಆರ್‌ಟಿಸಿ ಕಾರ್ಯಾಗಾರ ಬಳಿ ಬೈಕ್ ಮತ್ತು ಟಾಟಾ ಏಸ್ ವಾಹನದ ನಡುವೆ ಅಪಘಾತ ನಡೆದಿತ್ತು. ಈ ಘಟನೆಯಲ್ಲಿ ಗುರಮಿಠಕಲ್ ತಾಲೂಕಿನ ಕೆ.ಅರಕೇರಿ ಗ್ರಾಮದ ರಾಠೋಡ ಹಾಗೂ ನರೇಶ್ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದರು.
Advertisement
ಆದೇ ದಾರಿಯಲ್ಲಿ ರೈಲು ಕಾರ್ಯಾಗಾರ ವೀಕ್ಷಿಸಲು ತೆರಳುತಿದ್ದ ಉಮೇಶ್ ಜಾಧವ್ ಅವರು ವಾಪಸ್ ಬರುತ್ತಿರುವಾಗ ಘಟನೆ ತಿಳಿದು ತಕ್ಷಣ ಸಹಾಯಕ್ಕೆ ಬಂದಿದ್ದಾರೆ. ಅಂಬುಲೆನ್ಸ್ ಬರುವುದು ತಡವಾಗುತ್ತದೆ ಎಂದು ಬೈಕಿನಲ್ಲಿ ಅಪಘಾತಕ್ಕೀಡಾಗಿದ್ದ ಇಬ್ಬರು ಯುವಕರನ್ನು ತಮ್ಮ ಕಾರಿನಲ್ಲೇ ಹತ್ತಿರದ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದ್ದಾರೆ ಮತ್ತು ಇಷ್ಟೇ ಅಲ್ಲದೇ ಜಾಧವ್ ಅವರು ಸ್ವತಃ ವೈದ್ಯರಾಗಿರುವುದರಿಂದ ತಾವೇ ಚಿಕಿತ್ಸೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
Advertisement
Advertisement
ಇದಾದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಜಾಧವ್ ಅವರು, ರಸ್ತೆಯಲ್ಲಿ ಅಪಘಾತವಾದ ಸಂದರ್ಭದಲ್ಲಿ ಮೊದಲು ಕರೆದುಕೊಂಡು ಹೋಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಬೇಕು. ಪ್ರಚಾರಕ್ಕಾಗಿ ಫೋಟೋ ತೆಗದುಕೊಳ್ಳುವುದನ್ನು ಮಾಡಬಾರದು ಎಂದು ಮನವಿ ಮಾಡಿದರು.
Advertisement
ನಂತರ ಆಸ್ಪತ್ರೆಗೆ ಬಂದ ಯಾದಗಿರಿ ನಗರ ಟ್ರಾಫಿಕ್ ಪೋಲೀಸರು ಗಾಯಾಳುಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ.