ಯಾದಗಿರಿ: ಒಂದು ತಿಂಗಳ ಹಿಂದೆ ಯಾದಗಿರಿಯಲ್ಲಿ ಶೇ.38 ರಷ್ಟಿದ್ದ ವ್ಯಾಕ್ಸಿನೇಷನ್, ಇಂದು ಶೇ.85 ರಷ್ಟಾಗಿದ್ದು, ಜನರಲ್ಲಿನ ಮೂಢನಂಬಿಕೆ ಹೋಗಲಾಡಿಸುವಲ್ಲಿ ಜಿಲ್ಲಾಡಳಿತ ಯಶಸ್ಸು ಕಂಡಿದೆ.
Advertisement
ಲಸಿಕೆ ನೀಡಲು ಮನೆಗೆ ತೆರಳಿದ ಅಧಿಕಾರಿಗಳ ಮೇಲೆ ದರ್ಪ, ಲಸಿಕೆ ಬಗ್ಗೆ ಮೂಢನಂಬಿಕೆ ಹೀಗೆ ತಮ್ಮ ಅಜ್ಞಾನದಿಂದ ಲಸಿಕೆ ಬಗ್ಗೆ ಯಾದಗಿರಿ ಜನ ಒಂದು ರೀತಿಯ ಅಭಿಪ್ರಾಯಕ್ಕೆ ಒಳಗಾಗಿದ್ದರು, ಇದನ್ನು ಚಾಲೆಂಜ್ ಆಗಿ ತೆಗೆದುಕೊಂಡ ಯಾದಗಿರಿ ಜಿಲ್ಲಾಡಳಿತ ಒಂದು ತಿಂಗಳಲ್ಲಿ ವ್ಯಾಕ್ಸಿನ್ ಚಿತ್ರಣವನ್ನೇ ಬದಲಾಯಿಸಿದೆ. ಇದನ್ನೂ ಓದಿ: ಬಿಜೆಪಿಗರನ್ನು ಕಾಂಗ್ರೆಸ್ ಸಂಪರ್ಕಿಸುತ್ತಿರುವುದು ನಿಜ: ಯಡಿಯೂರಪ್ಪ
Advertisement
Advertisement
ಒಂದು ತಿಂಗಳ ಹಿಂದೆ ಯಾದಗಿರಿ ವ್ಯಾಕ್ಸಿನೇಷನ್ ಶೇ.38ರಷ್ಟಿತ್ತು. ಆದರೆ ಇಂದು ಶೇ.85ರಷ್ಟು ವ್ಯಾಕ್ಸಿನೇಷನ್ ಮಾಡುವ ಮೂಲಕ ಜಿಲ್ಲಾಡಳಿತ ಸಾಧನೆ ಮಾಡಿದೆ. ಲಸಿಕೆ ಬಗ್ಗೆ ಜನರಲ್ಲಿರುವ ಮೂಢನಂಬಿಕೆಯಿಂದಾಗಿ ಜಿಲ್ಲಾಡಳಿತ ಹೈರಾಣಾಗಿತ್ತು. ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಮತ್ತು ಡಿಎಚ್‍ಓ ಇಂದುಮತಿ ಪಾಟೀಲ್ ಮಾಡಿದ ಮಾಸ್ಟರ್ ಪ್ಲ್ಯಾನ್ ವರ್ಕೌಟ್ ಆಗಿದೆ.
Advertisement
ಏನು ಪ್ಲ್ಯಾನ್ ಮಾಡಿತ್ತು?: ವಾರದಲ್ಲಿ ಒಂದು ದಿನ ಬೃಹತ್ ಲಸಿಕಾ ಶಿಬಿರವನ್ನು ಹಮ್ಮಿಕೊಂಡು ಮನೆ ಮನೆಗೆ ಹೋಗಿ ಲಸಿಕೆ ಹಾಕುವುದು. ಲಸಿಕಾ ಎಕ್ಸ್‌ಪ್ರೆಸ್ ಕಾರು, ಬೀದಿ ನಾಟಕಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವುದು. ಹೀಗೆ ಜಿಲ್ಲಾ ಮಟ್ಟದ ಉನ್ನತ ಅಧಿಕಾರಿಗಳ ವಿಶೇಷ ಪ್ಲಾನ್ ಯಾದಗಿರಿಯಲ್ಲಿ ಸಕ್ಸಸ್ ಆಗಿದೆ. ಇದನ್ನೂ ಓದಿ: ಹಿಂದಿ ಹೇರಿಕೆ- ಭೂತ ದಹಿಸಿ ವಾಟಳ್ ಪ್ರತಿಭಟನೆ
ಇದರಿಂದಾಗಿ ಜಿಲ್ಲೆಯಲ್ಲಿ ಶೇ.85 ರಷ್ಟು ಜನರಿಗೆ ಮೊದಲನೇ ಡೋಸ್ ಸಂಪೂರ್ಣಗೊಂಡಿದೆ. ಜಿಲ್ಲಾಡಳಿತದ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಇನ್ನು ಕೆಲವೇ ದಿನಗಳಲ್ಲಿ ಶೇ.100 ರಷ್ಟು ವ್ಯಾಕ್ಸಿನೇಷನ್ ಮಾಡುವ ವಿಶ್ವಾಸವನ್ನು ಜಿಲ್ಲಾಡಳಿತ ವ್ಯಕ್ತಪಡಿಸಿದೆ.