ಯಾದಗಿರಿ: ಜಿಲ್ಲೆಯ ಪ್ರತಿಯೊಬ್ಬ ಅರ್ಹ ರೈತರಿಗೂ ಬೆಳೆ ವಿಮೆಯ ರಕ್ಷಣೆ ಸಿಗುವಂತಾಗಲು ಕೃಷಿ ಇಲಾಖೆ ಅಧಿಕಾರಿಗಳು ಜಾಗೃತಿ ಮೂಡಿಸಬೇಕು ಮತ್ತು ಗರಿಷ್ಠ ಪ್ರಮಾಣದಲ್ಲಿ ವಿಮೆ ನೋಂದಣಿ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಅವರು ಆದೇಶ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೃಷಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹವಾಮಾನ ವೈಪರೀತ್ಯ ಹಾಗೂ ಮಳೆ ಕೊರತೆಯಿಂದಾಗಿ ರೈತರು ನಷ್ಟ ಅನುಭವಿಸುವುದನ್ನು ತಪ್ಪಿಸಲು ಬೆಳೆ ವಿಮೆ ಪ್ರಮುಖ ಅಸ್ತ್ರವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಹಳ್ಳಿಗಳಿಗೆ ಭೇಟಿ ನೀಡಿ ರೈತರ ಮನವೊಲಿಸಬೇಕು ಎಂದರು.ಇದನ್ನೂ ಓದಿ: ಹೊಸ ಮನೆ, ಹೊಸ ಬದುಕಿನ ಕನಸು ಭಗ್ನ – ಪ್ರೀತಿಸಿ ಮದುವೆಯಾಗಲು ಸಜ್ಜಾಗಿದ್ದ ಜೋಡಿ ಲಕ್ನೋ ಅಗ್ನಿ ದುರಂತಕ್ಕೆ ಬಲಿ
ಬೆಳೆ ಹಾನಿ ಹಾಗೂ ಇಳುವರಿ ಅಂದಾಜಿಸುವ ಪ್ರಕ್ರಿಯೆ ಪಾರದರ್ಶಕವಾಗಿರಲು ಕೃಷಿ ಮತ್ತು ಸಾಂಖ್ಯಿಕ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಕ್ಷೇತ್ರ ಮಟ್ಟದ ಪರಿಶೀಲನೆ ನಡೆಸಬೇಕು. ಇದರೊಂದಿಗೆ ಸೂಕ್ಷ್ಮ ನೀರಾವರಿ ಯೋಜನೆಗಳಾದ ಹನಿ ಮತ್ತು ತುಂತುರು ನೀರಾವರಿ ಸೌಲಭ್ಯಗಳನ್ನು ಜಿಲ್ಲೆಯ ರೈತರಿಗೆ ತಲುಪಿಸಲು ಆದ್ಯತೆ ನೀಡಬೇಕು ಎಂದು ಸೂಚಿಸಿದರು.
ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಹತ್ತಿಯ ಉತ್ಪಾದಕತೆ ಹೆಚ್ಚಿಸಲು ರೈತರಿಗೆ ಸಕಾಲದಲ್ಲಿ ಮಾರ್ಗದರ್ಶನ ನೀಡಬೇಕು. ನಕಲಿ ಬೀಜಗಳ ಮಾರಾಟ ತಡೆಯಲು ಮಾರುಕಟ್ಟೆಗಳ ಮೇಲೆ ನಿರಂತರ ನಿಗಾ ಇಡಬೇಕು ಹಾಗೂ ಕೃಷಿ ಅಭಿಯಾನಗಳ ಮೂಲಕ ಸುಧಾರಿತ ತಂತ್ರಜ್ಞಾನವನ್ನು ರೈತರಿಗೆ ತಲುಪಿಸಬೇಕು ಎಂದು ನಿರ್ದೇಶನ ನೀಡಿದರು.ಇದನ್ನೂ ಓದಿ: ತಪ್ಪು ತಿಳುವಳಿಕೆಯಿಂದ ವಿಡಿಯೋ ಮಾಡಿದ್ದೇವೆ – ಕ್ಷಮೆ ಕೇಳಿದ ನಿವೇದಿತಾ ಗೌಡ
