ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿ ವಿಲಾಸಪುರ ಬಳಿ ಇರುವ ‘ವಾಣಿವಿಲಾಸ ಜಲಾಶಯ’ ಹಾಗೂ ಜವನಗೊಂಡನಹಳ್ಳಿ ಹೋಬಳಿಯ ಕರಿಯಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಯಿತ್ರಿ ಜಲಾಶಯಕ್ಕೆ ಮೈಸೂರು ರಾಜವಂಶಸ್ಥರಾದ ಯದುವೀರ್ ಮತ್ತು ಪತ್ನಿ ತ್ರಿಷಿಕಾ ಕುಮಾರಿ ಅವರು ಭಾನುವಾರ ಭೇಟಿ ನೀಡಿ ಡ್ಯಾಂ ವೀಕ್ಷಿಸಿ ಕಣ್ತುಂಬಿಕೊಂಡರು.
Advertisement
ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ ಈ ಎರಡು ಜಲಾಶಯವನ್ನು ನಿರ್ಮಾಣ ಮಾಡಲಾಗಿದ್ದು, ಜಯಚಾಮರಾಜ ಒಡೆಯರ್ ಅವರು ಮನೆತನದ ಹೆಣ್ಣು ಮಗಳಾದ ಗಾಯಿತ್ರಿ ದೇವಿಯ ನೆನಪಿಗಾಗಿ ಜಲಾಶಯ ನಿರ್ಮಿಸಿದ್ದರು. ಗಾಯಿತ್ರಿ ಡ್ಯಾಂಗೆ ಹಾಗೂ ವಿವಿ ಸಾಗರ ಜಲಾಶಯಕ್ಕೆ ಕೆಂಪರಾಜಮ್ಮಣಿ ಹೆಸರನ್ನು ನಾಮಕರಣ ಮಾಡಲಾಗಿದೆ. ಅಜ್ಜಿಯ ಹೆಸರಿನ ಎರಡು ಜಲಾಶಯಗಳನ್ನು ಮೊಮ್ಮಗ ಯದುವೀರ್ ವೀಕ್ಷಣೆ ಮಾಡಿ ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ನೈಟ್‍ಕ್ಲಬ್‍ನಲ್ಲಿ 20 ಯುವಕರ ನಿಗೂಢ ಸಾವು
Advertisement
Advertisement
ಯದುವೀರ್ ಮತ್ತು ತ್ರಿಷಿಕಾ ಕುಮಾರಿ ಅವರು ಜಲಾಶಯ ವೀಕ್ಷಿಸಿದ ಬಳಿಕ ಫೋಟೋ ತೆಗೆಸಿಕೊಂಡಿದ್ದಾರೆ. ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳಿಂದ ಜಲಾಶಯದ ವಿಸ್ತೀರ್ಣ, ನೀರಿನ ಸಾಮರ್ಥ್ಯ ಮತ್ತು ಉಪಯೋಗದ ಬಗ್ಗೆ ಮಾಹಿತಿ ಪಡೆದು ಕೊಂಡಿದ್ದಾರೆ.
Advertisement
ಈ ಸಂದರ್ಭದಲ್ಲಿ ರಾಜಮಾತೆ ಪ್ರಮೋದಾ ದೇವಿ, ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯರು ಜೊತೆಗಿದ್ದರು. ಹಿರಿಯೂರು ತಾಲೂಕಿನ ರೈತಾಪಿ ವರ್ಗದ ಕೃಷಿಗೆ ಅನುಕೂಲವಾಗುವಂತೆ ಹಿರಿಯೂರು ತಾಲೂಕಿನಲ್ಲಿ ಎರಡು ಜಲಾಶಯಗಳನ್ನು ನಿರ್ಮಿಸಲಾಗಿದೆ. ಇದನ್ನೂ ಓದಿ: ಬೈಕ್‍ಗೆ ಲಾರಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು, ಒಬ್ಬನಿಗೆ ಗಂಭೀರ ಗಾಯ
ವೇದಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಡ್ಯಾಂ
ಚಿಕ್ಕಮಗಳೂರಿನ ಗಿರಿ ಕಂದಕಗಳಲ್ಲಿ ಹುಟ್ಟುವ ವೇದಾವತಿ ನದಿಗೆ ಅಡ್ಡಲಾಗಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿವಿಲಾಸಪುರದ ಬಳಿ ಮಾರಿಕಣಿವೆ ಅಥವಾ ವಾಣಿವಿಲಾಸಸಾಗರ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ. ವಾಣಿವಿಲಾಸ ಸಾಗರವನ್ನು ಆರ್ಕಿಟೆಕ್ಚರಲ್ ಮಾಸ್ಟರ್‌ಪೀಸ್ ಎಂದು ಗುರುತಿಸಲಾಗಿದೆ.
Live Tv