ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತಕ್ಕೆ ಮೈಸೂರು ಮಹಾರಾಜರಾದ ಯದುವೀರ್ ಒಡೆಯರ್ ಮತ್ತು ಶ್ರೀಮತಿ ತ್ರಿಶಿಕಾ ಕುಮಾರಿಯವರು ಭೇಟಿ ನೀಡಿದ್ದರು.
Advertisement
ಹನುಮ ಹುಟ್ಟಿದ ಸ್ಥಳ ಎಂದೇ ಹೆಸರುವಾಸಿಯಾಗಿರುವ ಅಂಜನಾದ್ರಿ ಪರ್ವತಕ್ಕೆ ದಂಪತಿ ಸಮೇತ ಆಗಮಿಸಿದ ಯದುವೀರ್ ಅವರು ಹನುಮನಿಗೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಯದುವೀರ್ ಕುಟುಂಬ ಹಂಪಿ ಪ್ರವಾಸಕ್ಕೆ ಆಗಮಿಸಿದ ಹಿನ್ನಲೆ ಅಂಜನಾದ್ರಿ ಬೆಟ್ಟದ ೫೭೫ ಮೆಟ್ಟಿಲೇರಿ ಹನುಮನ ದರ್ಶನ ಪಡೆದರು. ಇದನ್ನೂ ಓದಿ: ಡಿಸಿ ಕಚೇರಿ ಆವರಣದಲ್ಲಿ ಮೃತದೇಹ ಇಟ್ಟು ಪ್ರತಿಭಟನೆ
Advertisement
Advertisement
ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನುಮ ಹುಟ್ಟಿದ ಸ್ಥಳಕ್ಕೆ ಎರಡನೇ ಬಾರಿ ಬರುತ್ತಿದ್ದೇನೆ. ಎಲ್ಲರಿಗೂ ಒಳ್ಳೆದಾಗಲಿ ಎಂದು ಪ್ರಾರ್ಥನೆ ಮಾಡಿದ್ದೇನೆ. ಇದೊಂದು ಅದ್ಭುತವಾದಂತಹ ಜಾಗ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇಂದಿನಿಂದ SSLC ಸಪ್ಲಿಮೆಂಟರಿ ಎಕ್ಸಾಂ – ಆಗಸ್ಟ್ ಮೊದಲ ವಾರದಲ್ಲಿ ರಿಸಲ್ಟ್