ಮೈಸೂರು: ಲೋಕಸಭಾ ಕ್ಷೇತ್ರದ ಚುನಾವಣಾ ಅಖಾಡ ರಂಗೇರಿದ್ದು, ಮೈಸೂರು-ಕೊಡಗು ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಬಿರುಸುಗೊಂಡಿದೆ. ಬಿಜೆಪಿ ಅಭ್ಯರ್ಥಿಐೂ ಆಗಿರುವ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar) ಅವರು ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಹಾಲಿ ಸಂಸದ ಪ್ರತಾಪ್ ಸಿಂಹ ಸಹ ಯದುವೀರ್ ಅವರೊಂದಿಗೆ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
ಚುನಾವಣಾ ಪ್ರಚಾರ (Election Campaign) ಸಂಬಂಧ ಸೋಮವಾರ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಮಾಧ್ಯಮಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಯದುವೀರ್ ಮಾತನಾಡಿದ್ದಾರೆ. ಇದನ್ನೂ ಓದಿ: ಕಣದಿಂದ ಹಿಂದೆ ಸರಿಯಬೇಡಿ – ಈಶ್ವರಪ್ಪಗೆ ಅಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್‌ನ ಗೋಪಾಲ್ ಜೀ ಬೆಂಬಲ
ಸಂಸದ, ಪ್ರತಿನಿಧಿ ಹೇಗೆ ಬೇಕಾದರೂ ಕರೆಯಿರಿ:
ನಮ್ಮ ತಂದೆ ನಾಲ್ಕು ಬಾರಿ ಸಂಸದರಾಗಿದ್ದರು. ನಮಗೆ ಎಲ್ಲ ಪಕ್ಷದವರೊಂದಿಗೆ ಸಂಬಂಧ ಇದೆ. ನನ್ನ ಪರಿಕಲ್ಪನೆಗೆ ಬಿಜೆಪಿಯೊಂದಿಗೆ ಹೊಂದಾಣಿಕೆ ಇದೆ. ಜನರಿಗೆ ಅರಮನೆ ಬಗ್ಗೆ ಭಾವನಾತ್ಮಕ ಸಂಬಂಧ ಇದೆ. ಸಂವಿಧಾನದ (Constitution) ಅಡಿಯಲ್ಲಿ ಎಲ್ಲರೂ ಸಮಾನರು. ನಾನೂ ಸಹ ಸಾಮಾನ್ಯ ಸಂಸದನ ರೀತಿ ಕೆಲಸ ಮಾಡುತ್ತೇನೆ. ಆಧುನಿಕ ತಂತ್ರಜ್ಞಾನದ ಮೂಲಕ ಸಂಪರ್ಕ ಇಟ್ಟುಕೊಳ್ಳಬಹುದು. ನೀವು ಅರಮನೆಗೆ ಬರಬೇಕಿಲ್ಲ, ನಾನೇ ಅರಮನೆಯಿಂದ ಹೊರಗೆ ಬರುತ್ತೇನೆ. ನಾನು ರಾಜ ಅಂತ ಇದನ್ನು ಹೇಳಿಲ್ಲ. ಅರಮನೆಗೆ ಒಂದು ಪರಂಪರೆ ಇದೆ. ಅದನ್ನು ಹೊರತುಪಡಿಸಿ ನಾನು ಸಾಮಾನ್ಯನಾಗಿ ಇರುತ್ತೇನೆ. ನನ್ನನ್ನು ಸಂಸದ, ಪ್ರತಿನಿಧಿ ಹೇಗೆ ಬೇಕಾದರೂ ಕರೆಯಿರಿ ಎಂದು ಹೇಳಿದ್ದಾರೆ.
ನನ್ನ ತಾಯಿ ಪ್ರಚಾರಕ್ಕೆ ಬರಬೇಕಿಲ್ಲ:
ಇನ್ನೂ ನನ್ನ ತಾಯಿ (ಪ್ರಮೋದಾ ದೇವಿ ಒಡೆಯರ್) ನನ್ನ ಪರವಾಗಿ ಪ್ರಚಾರಕ್ಕೆ ಬರುವ ಅಗತ್ಯ ಇಲ್ಲ. ತಾಯಿ ಆಶೀರ್ವಾದದಿಂದಲೇ ನಾನು ಇಲ್ಲಿಗೆ ಬಂದಿದ್ದೇನೆ. ಅವರು ನನ್ನ ಪರವಾಗಿ ಹೇಳಿಕೆ ಕೊಡಬೇಕೆಂಬುದು ಏನು ಇಲ್ಲ. ಅವರ ಸಹಕಾರ ನನ್ನ ಮೇಲೆ ಸದಾ ಇರುತ್ತದೆ ಎಂದು ಯದುವೀರ್ ತಿಳಿಸಿದ್ದಾರೆ. ಇದನ್ನೂ ಓದಿ: ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ರಾಜೀನಾಮೆ – ಬಿಜೆಪಿಯಿಂದ ಕಣಕ್ಕೆ?
ಪಕ್ಷಕ್ಕೆ ದ್ರೋಹ ಬಗೆಯಲ್ಲ:
ಇದೇ ವೇಳೆ ಸಂಸದ ಪ್ರತಾಪ್ ಸಿಂಹ (Pratap Simha) ಸಹ ಮಾತನಾಡಿ, ನಾನು ಪಕ್ಷಕ್ಕೂ ದ್ರೋಹ ಮಾಡಲ್ಲ, ಪಕ್ಕದಲ್ಲಿರುವವರಿಗೂ ದ್ರೋಹಮಾಡಲ್ಲ. 2014ರಲ್ಲಿ ನನಗೆ ಯಾಕೆ ಟಿಕೆಟ್ ಕೊಟ್ಟರು ಅಂತ ಹೈಕಮಾಂಡ್ ಹೇಳಿರಲಿಲ್ಲ. ನಾನು ಸಹ ಯಾಕೆ ಕೊಟ್ರಿ ಅಂತ ಕೇಳಿರಲಿಲ್ಲ. ಈಗಲೂ ಅಷ್ಟೇ ಯಾಕೆ ತಪ್ಪಿಸಿದ್ದೀರಿ ಅಂತಾನೂ ಕೇಳಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಇಡಿ ಬಂಧನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ತೆಲಂಗಾಣ ಮಾಜಿ ಸಿಎಂ ಪುತ್ರಿ ಕವಿತಾ
ಮೋದಿ ಪರವಾಗಿ ಕೈ ಎತ್ತಲು ಒಬ್ಬ ವ್ಯಕ್ತಿ ಬೇಕು:
ಕಾಂಗ್ರೆಸ್ ಪಕ್ಷದಿಂದ ಆಫರ್ ಇತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರತಾಪ್ ಸಿಂಹ, ಈಗ ಅದು ಪ್ರಸ್ತುತ ಅಲ್ಲ. ನಮಗೆ ಯದುವೀರ್ ಅವರನ್ನು ಗೆಲ್ಲಿಸುವುದಷ್ಟೇ ಮುಖ್ಯ. ದೇಶಕ್ಕೆ ಮೋದಿ ಬೇಕು, ಮೋದಿ (PM Modi) ಪರವಾಗಿ ಕೈ ಎತ್ತಲು ಮೈಸೂರಿನಿಂದ ಒಬ್ಬ ವ್ಯಕ್ತಿ ಬೇಕು ಇದಷ್ಟೇ ನಮಗೆ ಮುಖ್ಯ. ಪಕ್ಷ ನನಗೆ ತಾಯಿ ಇದ್ದ ಹಾಗೆ. ಇದು ಬರಿ ಬಾಯಿ ಮಾತಲ್ಲ, ಇದು ನನ್ನ ಮನಸಿನ ಮಾತು ಎಂದು ನುಡಿದಿದ್ದಾರೆ.