ಕೊಪ್ಪಳ: ಮೈಸೂರು ಸಂಸ್ಥಾನದ ರಾಜ ಯದುವೀರ್ ಒಡೆಯರ್ ಅವರು ಇಂದು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಬಳಿ ಇರುವ ಪೌರಾಣಿಕ ಹಾಗೂ ಐತಿಹಾಸಿಕ ಅಂಜನಾದ್ರಿಯ ಆಂಜನೇಯ ದೇವಸ್ಥಾನಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರು ಅವರು ಭೇಟಿ ನೀಡಿ ಆಂಜನೇಯ ಸ್ವಾಮಿ ದರ್ಶನ ಪಡೆದಿದ್ದಾರೆ.
Advertisement
Advertisement
ಸ್ಥಳೀಯ ಮುಖಂಡ ಸಂತೋಷ್ ಕೆಲೋಜಿ ಅವರೊಂದಿಗೆ ಆಗಮಿಸಿದ ಯದವೀರ್ ಅವರು 600ಕ್ಕೂ ಹೆಚ್ಚು ಮೆಟ್ಟಿಲುಗಳನ್ನು ಏರಿ ಆಂಜನೇಯನ ದರ್ಶನ ಪಡೆದುಕೊಂಡರು. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಪತ್ನಿ ಜಶೋಧಾ ಬೆನ್ ಹಾಗೂ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಅನೇಕ ನಾಯಕರು ಈ ದೇವಸ್ಥಾನಕ್ಕೆ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.
Advertisement
Advertisement
ಯದುವೀರ್ ಅವರು ಭಾನುವಾರ ಐತಿಹಾಸಿಕ ಹಂಪಿಗೆ ಭೇಟಿ ನೀಡಿ ಪ್ರಸಿದ್ಧ ಸ್ಮಾರಕಗಳನ್ನು ವೀಕ್ಷಣೆ ಮಾಡಿದ್ದರು. ಕಮಲಾಪುರ ಹಾಗೂ ತಳವಾರಘಟ್ಟ ರಸ್ತೆ ಮೂಲಕ ಆಗಮಿಸಿದ ಯದುವೀರ್ ಗೆಜ್ಜಲ ಮಂಟಪ, ಕುದುರೆ ಗೊಂಬೆ ಮಂಟಪ, ವಿಠಲ ಬಜಾರ್, ಪುಷ್ಕರಣಿ, ಪ್ರಸಿದ್ಧ ವಿಜಯವಿಠಲ ದೇವಸ್ಥಾನದಲ್ಲಿ ಕಲ್ಲಿನ ರಥ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದರು. ಒಡೆಯರ್ ಅವರನ್ನು ನೋಡಿ ಪ್ರವಾಸಿಗರು ಅವರ ಜೊತೆ ಫೋಟೋ, ಸೆಲ್ಫಿ ತಗೆದುಕೊಂಡಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv