ಹಾಸನ: ಮಳೆಯಿಂದಾಗಿ ಹಾಸನ ಜಿಲ್ಲೆ, ಬೇಲೂರು ತಾಲೂಕಿನ ಯಗಚಿ ಜಲಾಶಯ ಭರ್ತಿಯಾಗಿದ್ದು, ಜಲಾಶಯದಿಂದ 500 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗ್ತಿದೆ.
Advertisement
3164.900 ಅಡಿ ಗರಿಷ್ಟ ಸಂಗ್ರಹ ಸಾಮರ್ಥ್ಯದ ‘ಯಗಚಿ’ ಜಲಾಶಯದಲ್ಲಿ 3164.06 ಅಡಿ ನೀರು ಸಂಗ್ರಹವಾಗಿರುವುದರಿಂದ ಅಣೆಕಟ್ಟೆನಿಂದ ನೀರು ಹೊರಬಿಡಲಾಗುತ್ತಿದೆ. ನದಿಪಾತ್ರದ ಜನ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಮತ್ತೊಂದೆಡೆ ಹಾಸನದಲ್ಲಿ ಮಳೆ ಇಂದು ಕೊಂಚ ಕಡಿಮೆಯಾಗಿದ್ದರೂ, ಮಳೆಯಿಂದಾದ ಅವಾಂತರ ಮಾತ್ರ ಮುಂದುವರಿದಿದೆ. ಇದನ್ನೂ ಓದಿ: ಬಾವನ ಮೇಲೆ ಸೇಡು ತೀರಿಸಿಕೊಳ್ಳಲು ಹುಸಿ ಬಾಂಬ್ ಕರೆ ಮಾಡಿದ ಭೂಪ
Advertisement
Advertisement
ನಿರಂತರ ಮಳೆಯಿಂದಾಗಿ ಅರಕಲಗೂಡು ತಾಲೂಕಿನ ಹೆಬ್ಬಾಲೆ ಕೊಪ್ಪಲು ಗ್ರಾಮದ ಸುರೇಶ್ ಅವರ ಮನೆ ಕುಸಿದು ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಸ್ಥಳಕ್ಕೆ ಹೆಬ್ಬಾಲೆ ಗ್ರಾಮಪಂಚಾಯ್ತಿ ಅಧ್ಯಕ್ಷೆ ನೇತ್ರಾವತಿ ಹರೀಶ್ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಸೂಕ್ತ ಪರಿಹಾರದ ಜೊತೆಗೆ ಮನೆ ನಿರ್ಮಿಸಿಕೊಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
Advertisement
ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಎಡೆಬಿಡದೆ ಸುರಿದ ಮಳೆಯಿಂದಾಗಿ ಹಲವು ಮನೆಗಳು ಕುಸಿಯುವ ಭೀತಿ ಎದುರಾಗಿದೆ.