ಲಕ್ನೋ: ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರಿಗಾಗಿ ಯಮರಾಜ ಕಾಯುತ್ತಿದ್ದಾನೆ ಎಂದು ಕಿಡೆಗೇಡಿಗಳಿಗೆ ಉತ್ತರ ಪ್ರದೇಶದ (Uttar Pradesh) ಸಿಎಂ ಯೋಗಿ ಆದಿತ್ಯನಾಥ್ (Yogi Adityanth) ಎಚ್ಚರಿಕೆ ನೀಡಿದ್ದಾರೆ.
ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಗಳ ವಿಚಾರವಾಗಿ ಅವರು ಗುಡುಗಿದ್ದಾರೆ. ಇತ್ತೀಚೆಗೆ ಅಲ್ಲಿನ ಅಂಬೇಡ್ಕರ್ ನಗರದಲ್ಲಿ ಮೂವರು ಕಿಡಿಗೇಡಿಗಳು ಸೈಕ್‍ಲ್‍ನಲ್ಲಿ ತೆರಳುತ್ತಿದ್ದ ಬಾಲಕಿಯರ ದುಪ್ಪಟ್ಟಾ ಎಳೆದು ಕೆಡವಿ ಇಬ್ಬರ ಸಾವಿಗೆ ಕಾರಣರಾಗಿದ್ದರು. ಇದನ್ನು ಉಲ್ಲೇಖಿಸಿ ಅವರು ಮಾತನಾಡಿದ್ದಾರೆ. ಈ ವೇಳೆ ಮಹಿಳೆಯರಿಗೆ ತೊಂದರೆ ಕೊಡುವವರಿಗೆ ಯಮ ಅಂತವರಿಗೆ ಕಾದು ಕುಳಿತಿದ್ದಾನೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ಕಾರಿನ ಟೈಯರ್ ಬ್ಲಾಸ್ಟ್ – ಅಪಘಾತದಲ್ಲಿ ಮೂವರು ಸಾವು
ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಬಲವಾದ ಕಾನೂನಿನ ಅಗತ್ಯವಿದೆ. ಮಹಿಳೆಯರಿಗೆ ತೊಂದರೆ ಕೊಡುವ ಯಾರೇ ಆದರೂ ಅಂತವರನ್ನು ಸುಮ್ಮನೆ ಬಿಡಲು ಸಾಧ್ಯವಿಲ್ಲ. ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಅಂಬೇಡ್ಕರ್ ನಗರದಲ್ಲಿ ನಡೆದ ಪ್ರಕರಣದಲ್ಲಿ ಪಿಯುಸಿ ವಿದ್ಯಾರ್ಥಿನಿಯರಿಬ್ಬರು ಸೈಕಲ್‍ನಲ್ಲಿ ತೆರಳುತ್ತಿದ್ದಾಗ ಕಿಡಿಗೇಡಿಗಳು ಹಿಂದಿನಿಂದ ವೇಗವಾಗಿ ಬೈಕ್‍ನಲ್ಲಿ ಬಂದು ಬಾಲಕಿಯರ ದುಪ್ಪಟ್ಟ ಎಳೆದಿದ್ದರು. ಇದರ ಪರಿಣಾಮ ಇಬ್ಬರೂ ಕೆಳಗೆ ಬಿದ್ದು ಬೈಕ್‍ಗೆ ಸಿಕ್ಕಿ ಸಾವನ್ನಪ್ಪಿದ್ದರು. ಇದು ಸಿಸಿಟಿವಿಯಲ್ಲಿ ದಾಖಲಾಗಿತ್ತು.
ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಲ್ಲಿ ಇಬ್ಬರ ಮೇಲೆ ಪೊಲೀಸರು (Police) ಗುಂಡು ಹಾರಿಸಿದ್ದು, ಒಬ್ಬನ ಕಾಲಿಗೆ ಬಲವಾದ ಪೆಟ್ಟಾಗಿದೆ. ಆರೋಪಿಗಳ ವಿರುದ್ಧ ಕೊಲೆ ಹಾಗೂ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಮೀನು ತಿಂದು ದೇಹದ ಅಂಗಾಂಗ ಕಳೆದುಕೊಂಡ ಮಹಿಳೆ!
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]