ಯಶ್ ನಟನೆ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾದ ಸೆನ್ಸಾರ್ ಆಗುತ್ತಿದ್ದಂತೆಯೇ ರಾಕಿಭಾಯ್ ಅಂಡ್ ಟೀಮ್ ಬೇರೆ ಬೇರೆ ರಾಜ್ಯಗಳ ಪ್ರವಾಸ ಕೈಗೊಂಡಿದೆ. ಐದಾರು ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿರುವುದರಿಂದ ಅಷ್ಟೂ ರಾಜ್ಯಗಳ ಪ್ರಮುಖ ನಗರಗಳಿಗೆ ನಟ ಯಶ್, ನಿರ್ದೇಶಕ ಪ್ರಶಾಂತ್ ನೀಲ್, ನಾಯಕಿ ಮತ್ತು ಚಿತ್ರತಂಡದ ಹಲವರು ಖಾಸಗಿ ವಿಮಾನದಲ್ಲಿ ಇಂದಿನಿಂದ ಪ್ರಯಾಣ ಬೆಳೆಸಿದ್ದಾರೆ. ಒಟ್ಟು ಒಂದು ವಾರಗಳ ಕಾಲ ಬೇರೆ ಬೇರೆ ರಾಜ್ಯಗಳಲ್ಲಿ ಸಿನಿಮಾ ಪ್ರಚಾರ ಮಾಡಲಿದೆ ತಂಡ. ಇದನ್ನೂ ಓದಿ : ಸೆನ್ಸಾರ್ ಪಾಸ್ ಆದ ರಾಕಿಭಾಯ್ : ಕೆಜಿಎಫ್ 1 ಗಿಂತ ಕೆಜಿಎಫ್ 2 ಸಿನಿಮಾ 13 ನಿಮಿಷ ಉದ್ದ
Advertisement
ಅಂದಹಾಗೆ ಇಂದು ಕೆಜಿಎಫ್ ಚಾಪ್ಟರ್ 2ಕ್ಕೆ ಸೆನ್ಸಾರ್ ಆಗಿದ್ದು, ಪ್ರಾದೇಶಿಕ ಚಲನಚಿತ್ರ ಪ್ರಮಾಣಪತ್ರ ಮಂಡಳಿಯು ಯು/ಎ ಸರ್ಟಿಫಿಕೇಟ್ ನೀಡಿದೆ. ಹಾಗಾಗಿ ಮಕ್ಕಳು ಕೂಡ ತಮ್ಮ ಪಾಲಕರ ಜತೆ ಈ ಸಿನಿಮಾವನ್ನು ನೋಡಬಹುದಾಗಿದೆ. ಸೆನ್ಸಾರ್ ಮಂಡಳಿಯು ನೀಡಿರುವ ಪ್ರಮಾಣ ಪತ್ರದಲ್ಲಿ ನಮೂದಾಗಿರುವಂತೆ ಕಳೆದ ಕೆಜಿಎಫ್ 1 ಚಿತ್ರಗಿಂತಲೂ ಚಾಪ್ಟರ್ 2 ಸಿನಿಮಾ ಹದಿಮೂರು ನಿಮಿಷಗಳ ಕಾಲ ಹೆಚ್ಚಿದೆ. ಕೆಜಿಎಫ್ 1 ಚಿತ್ರ 2 ಗಂಟೆ 35 ನಿಮಿಷಗಳ ಕಾಲಾವಧಿಯಲ್ಲಿತ್ತು. ಚಾಪ್ಟರ್ 2 ಸಿನಿಮಾ 2 ಗಂಟೆ 48 ನಿಮಿಷದ್ದಾಗಿದೆ. ಈ ಪ್ರಮಾಣ ಪತ್ರದಲ್ಲಿ ಇನ್ನೂ ಹಲವು ಇಂಟ್ರಸ್ಟಿಂಗ್ ಸಂಗತಿಗಳಿವೆ. ಅವು ಏನು ಅನ್ನುವುದನ್ನೂ ನೀವೇ ಸೂಕ್ಷ್ಮವಾಗಿ ಗಮನಿಸಿ. ಇದನ್ನೂ ಓದಿ : ಏಪ್ರಿಲ್ 2ಕ್ಕೆ ಗಣೇಶ್ ನಟನೆಯ ಹೊಸ ಸಿನಿಮಾದ ಟೈಟಲ್ ಲಾಂಚ್
Advertisement
Advertisement
ಯಶ್ ನಟನೆಯ ‘ಕೆಜಿಎಫ್ 2’ ರಿಲೀಸ್ ಗೆ ಭರದಿಂದ ಸಿದ್ಧತೆ ನಡೆದಿದೆ. ಹಲವು ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿರುವುದರಿಂದ ಆಯಾ ಭಾಷೆಯ ಅಭಿಮಾನಿಗಳು ಸಿನಿಮಾವನ್ನು ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಏಪ್ರಿಲ್ 14ರಂದು ವಿಶ್ವದಾದ್ಯಂತ ಈ ಸಿನಿಮಾ ರಿಲೀಸ್ ಆಗುತ್ತಿದೆ. ಇದನ್ನೂ ಓದಿ : ನನ್ನ ಹತ್ತಿರ ಡೇಂಜರ್ಸ್ ಹುಡುಗೀರು ಇದ್ದಾರೆ- ರಾಜಮೌಳಿಗೆ ರಾಮ್ ಗೋಪಾಲ್ ವರ್ಮಾ ಹೀಗಂದಿದ್ಯಾಕೆ..?
Advertisement
ಕೆಜಿಎಫ್ 2 ಸಿನಿಮಾ ಕನ್ನಡ, ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಆಗುತ್ತಿದ್ದು ವಿಶ್ವದಾದ್ಯಂತ ಏಳು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಮಾಡಲಾಗಿದೆ ಅಂತಾರೆ ನಿರ್ಮಾಪಕ ವಿಜಯ್ ಕಿರಗಂದೂರು. ಕರ್ನಾಟಕದಲ್ಲೇ 450ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆದರೆ, ತಮಿಳಿನಲ್ಲಿ ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕೆಜಿಎಫ್ 2 ಪ್ರದರ್ಶನ ಕಾಣಲಿದೆ. ಹಾಗೆಯೇ ವಿವಿಧ ಭಾಷೆಯ ಚಿತ್ರಮಂದಿರಗಳಲ್ಲಿ ಸಾವಿರ ಸಾವಿರ ಥಿಯೇಟರ್ ನಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿರುವುದು ವಿಶೇಷ.