– ಹಾವು ಏಣಿ ಆಟಕ್ಕೆ ಮುಂಗುಸಿ ಇಳಿದಿದೆ, ವರ್ಲ್ಡ್ ಈಸ್ ಮೈ ಟೆರಿಟರಿ
ಬೆಂಗಳೂರು: “ನಾನು ಹೆಜ್ಜೆ ಇಟ್ಟಾಗಿದೆ, ಆಟದ ರೇಂಜ್ ಚೇಂಜ್ ಆಗಿದೆ” ಎಂದು ಯಶ್ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾದ ಖಡಕ್ ಡೈಲಾಗ್ ಹೇಳುವ ಮೂಲಕ ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಒಂದು ದೊಡ್ಡ ಉಡುಗೊರೆ ಕೊಟ್ಟಿದ್ದಾರೆ.
ಹುಟ್ಟುಹಬ್ಬದ ದಿನ ಕೇಕ್ ಕಟ್ ಮಾಡಿದ ನಂತರ ಮಾತನಾಡಿದ ಯಶ್, ‘ಕೆಜಿಎಫ್ 2’ ಚಿತ್ರದ ಒಂದು ಡೈಲಾಗ್ ನಿಮಗೋಸ್ಕರ ಹೇಳುತ್ತೇನೆ. ಸಿನಿಮಾದಲ್ಲಿ ನೋಡಿದ್ದರೆ ಮಜಾ ಬಂದಿರೋದು. ಆದರೆ ನಿಮಗೋಸ್ಕರ ಸಣ್ಣದಾಗಿ ಹೇಳುತ್ತೇನೆ ಎಂದು ಚಿತ್ರದ ಡೈಲಾಗ್ ಹೇಳಿದ್ದಾರೆ.
Advertisement
Advertisement
“ಏನಂದೆ ಒಂದು ಹೆಜ್ಜೆ ಇಟ್ಕೊಂಡು ಬಂದೋನು ಅಂತ ಹೇಳ್ದ. ಕರೆಕ್ಟ್, ಗಡಿಯಾರದಲ್ಲಿ ಒಂದು ಗಂಟೆಯಾಗಬೇಕು ಅಂದರೆ ದೊಡ್ಡ ಮುಳ್ಳು 60 ಹೆಜ್ಜೆ ಇಡಬೇಕು. ಆದರೆ ಚಿಕ್ಕ ಮುಳ್ಳು ಒಂದು ಹೆಜ್ಜೆ ಇಟ್ಟರೆ ಸಾಕು. ನಾನು ಹೆಜ್ಜೆ ಇಟ್ಟಾಗಿದೆ, ಆಟದ ರೇಂಜ್ ಚೇಂಜ್ ಆಗಿದೆ. ನಿನ್ನ ಹಾವು ಏಣಿ ಆಟಕ್ಕೆ ಮುಂಗುಸಿ ಇಳಿದಿದೆ. ಇನ್ಮೇಲೆಯಿಂದ ಆ ಟೆರಿಟರಿ ನಂದು, ಈ ಟೆರಿಟರಿ ನಿಂದು ಅನ್ನೋದೆಲ್ಲ ಬಿಟ್ಟುಬಿಡಿ, ವರ್ಲ್ಡ್ ಈಸ್ ಮೈ ಟೆರಿಟರಿ” ಎಂದು ಸಿನಿಮಾದ ಖಡಕ್ ಡೈಲಾಗ್ ಹೇಳಿದರು. ಈ ಡೈಲಾಗ್ ಹೇಳುತ್ತಿದ್ದಂತೆ ಅಭಿಮಾನಿಗಳು ಚಪ್ಪಾಳೆ ತಟ್ಟಿ ಮೆಚ್ಚುಗೆ ಸೂಚಿಸಿದರು.
Advertisement
Advertisement
ನಟ ಯಶ್ ಹುಟ್ಟುಹಬ್ಬದ ದಿನ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾದ ಟೀಸರ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿತ್ತು. ಆದರೆ ಕಾರಣಾಂತರದಿಂದ ಅದು ಸಾಧ್ಯವಾಗಿಲ್ಲ. ಇದರಿಂದ ಅಭಿಮಾನಿಗಳು ನಿರಾಸೆಯಾಗಿದ್ದರು. ಹೀಗಾಗಿ ಯಶ್ ತಮ್ಮ ಅಭಿಮಾನಿಗಳು ನಿರಾಸೆಯಾಗಬಾರದೆಂದು ‘ಕೆಜಿಎಫ್ 2’ ಚಿತ್ರ ಡೈಲಾಗ್ ಹೇಳುವ ಮೂಲಕ ಅಭಿಮಾನಿಗಳಿಗೆ ರಾಕಿಭಾಯ್ ಬರ್ತ್ ಡೇ ಗಿಫ್ಟ್ ಕೊಟ್ಟಿದ್ದಾರೆ.
ಬೆಂಗಳೂರಿನ ನಾಯಂಡಹಳ್ಳಿ ಸಿಗ್ನಲ್ ಬಳಿ ನಂದಿ ಲಿಂಕ್ ಗ್ರೌಂಡ್ನಲ್ಲಿ ನಡೆದ ಯಶ್ ಬರ್ತ್ ಡೇಗೆ 5000 ಸಾವಿರ ಕೆ.ಜಿ ಕೇಕ್ ತಯಾರು ಮಾಡಲಾಗಿತ್ತು. ಪತ್ನಿ ರಾಧಿಕಾ ಪಂಡಿತ್ ಜೊತೆಗೆ ಆಗಮಿಸಿದ ನಟ ಯಶ್ 5000 ಕೆ.ಜಿ ಕೇಕ್ ಕಟ್ ಮಾಡಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.