ಬೆಂಗಳೂರು: ರಾಕಿಂಗ್ ದಂಪತಿ ಯಶ್ ಹಾಗೂ ರಾಧಿಕಾ ಪಂಡಿತ್ ತಮ್ಮ ಮುದ್ದು ಮಗಳು ಐರಾ ಜೊತೆ ಸೇರಿ ದೀಪಾವಳಿ ಹಬ್ಬಕ್ಕೆ ಶುಭ ಕೋರಿದ್ದಾರೆ.
ಯಶ್ ಹಾಗೂ ರಾಧಿಕಾ ಐರಾ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಸೆಲ್ಫಿ ಫೋಟೋವನ್ನು ಅವರು ತಮ್ಮ ಇನ್‍ಸ್ಟಾಗ್ರಾಂ ಮತ್ತು ಫೇಸ್‍ಬುಕ್‍ನಲ್ಲಿ ಹಂಚಿಕೊಂಡು ಅದಕ್ಕೆ, “ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು” ಎಂದು ಬರೆದುಕೊಂಡಿದ್ದಾರೆ.
Advertisement
Advertisement
ಇತ್ತ ಯಶ್ ಅವರು ಕೂಡ ವಿಡಿಯೋ ಮೂಲಕ ಹಬ್ಬಕ್ಕೆ ಶುಭ ಕೋರಿದ್ದಾರೆ. ವಿಡಿಯೋದಲ್ಲಿ ಯಶ್, ಐರಾಳನ್ನು ಎತ್ತಿಕೊಂಡಿದ್ದು, ರಾಧಿಕಾ ಪಕ್ಕದಲ್ಲಿ ಕುಳಿತುಕೊಂಡಿದ್ದಾರೆ. ಮೊದಲಿಗೆ ಹ್ಯಾಪಿ ದೀಪಾವಳಿ ಮಗಳೇ ಎಂದು ಯಶ್ ಶುಭಾಶಯ ತಿಳಿಸಿದ್ದಾರೆ. ಇದೇ ವೇಳೆ ರಾಧಿಕಾ ಅವರು ಶುಭಾಶಯ ತಿಳಿಸಿದ್ದಾರೆ. ಆಗ ಐರಾ ತನ್ನದೇ ಭಾಷೆಯಲ್ಲಿ ಮಾತನಾಡಿದ್ದಾರೆ. ನಂತರ ಮತ್ತೆ ಯಶ್, ಎಲ್ಲರಿಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು” ಎಂದು ಶುಭ ಕೋರಿದ್ದಾರೆ.
Advertisement
ಈ ವಿಡಿಯೋವನ್ನು ಯಶ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ, “ಇದು ನಮ್ಮ ಪುಟ್ಟ ಕಂದಮ್ಮನ ಮೊದಲ ದೀಪಾವಳಿ. ಇದಕ್ಕಿಂತ ವಿಶೇಷವಾಗಿ ಇರಲು ಸಾಧ್ಯವಿಲ್ಲ. ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು. ಐರಾ ನಿಮಗಾಗಿ ವಿಶೇಷವಾಗಿ ಹೇಳಿದ್ದಾಳೆ. ಸುರಕ್ಷಿತವಾಗಿ ಹಬ್ಬವನ್ನು ಆಚರಿಸಿ” ಎಂದು ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ.
Advertisement