ಯಶ್ ತಾಯಿ ನಿರ್ಮಾಣದ ಸಿನಿಮಾದಲ್ಲಿ ಪೃಥ್ವಿ ಅಂಬರ್- ‌’ಕೊತ್ತಲವಾಡಿ’ ಚಿತ್ರದ ಪೋಸ್ಟರ್‌ ಔಟ್

Public TV
2 Min Read
PRUTHVI AMBAAR

ರಾಕಿಂಗ್ ಸ್ಟಾರ್ ಯಶ್ (Yash) ತಾಯಿ ಪುಷ್ಪ ಅರುಣ್ ಕುಮಾರ್ (Pushpa Arun Kumar) ಹೊಸದೊಂದು ಸಿನಿಮಾ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅದಕ್ಕೆ PA Productions ಎಂದು ಹೆಸರಿಟ್ಟಿದ್ದಾರೆ. P ಅಂದ್ರೆ ಪುಷ್ಪ A ಅಂದ್ರೆ ಅರುಣ್ ಕುಮಾರ್ ಎಂದರ್ಥ. ಯಶ್ ಅಪ್ಪ ಮತ್ತು ಅಮ್ಮನ ಹೆಸರು ಇರೋ ಈ ಪ್ರೊಡಕ್ಷನ್ ಹೌಸ್‌ ಮೂಲಕ ಚೊಚ್ಚಲ ಚಿತ್ರ ನಿರ್ಮಾಣವಾಗುತ್ತಿದೆ. ಅಕ್ಷಯ ತೃತೀಯ ದಿನವಾದ ಇಂದು (ಏ.30) ಚಿತ್ರತಂಡ ಟೈಟಲ್ ಹಾಗೂ ಫಸ್ಟ್ ಲುಕ್ ರಿಲೀಸ್ ಮಾಡಿದೆ.

PA Productions ಮೊದಲ ಪ್ರಯತ್ನಕ್ಕೆ ‘ಕೊತ್ತಲವಾಡಿ’ ಎಂಬ (Kothalavadi) ಶೀರ್ಷಿಕೆ ಇಡಲಾಗಿದೆ. ಈ ಚಿತ್ರಕ್ಕೆ ಶ್ರೀರಾಜ್ ಎಂಬುವವರು ನಿರ್ದೇಶನ ಮಾಡುತ್ತಿದ್ದಾರೆ. ಹಿರಿಯ ನಿರ್ದೇಶಕರಾದ ಕೆವಿ ರಾಜು, ರವಿ ಶ್ರೀವತ್ಸ ಗರಡಿಯಲ್ಲಿ ಕೆಲಸ ಮಾಡಿರುವ ಶ್ರೀರಾಜ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೆಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಇದನ್ನೂ ಓದಿ:ಯಶ್ ತಾಯಿ ನಿರ್ಮಾಣದ ಸಿನಿಮಾ ಬಗ್ಗೆ ಹೊರಬಿತ್ತು ಬಿಗ್ ನ್ಯೂಸ್

ಕನ್ನಡದ ಪ್ರತಿಭಾನ್ವಿತ ನಾಯಕ ಪೃಥ್ವಿ ಅಂಬರ್ ನಾಯಕನಾಗಿ ನಟಿಸುತ್ತಿದ್ದು, ಕಿರುತೆರೆ ನಟಿ ಕಾವ್ಯಾ ಶೈವ (Kavya Shaiva) ನಾಯಕಿಯಾಗಿ ನಟಿಸುತ್ತಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ ಅವರಂತಹ ಅನುಭವಿ ತಾರಾಬಳಗ ಚಿತ್ರದಲ್ಲಿದೆ. ಇಲ್ಲಿಯವರೆಗೂ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೃಥ್ವಿ ‘ಕೊತ್ತಲವಾಡಿ’ ಚಿತ್ರದಲ್ಲಿ ಕಂಪ್ಲೀಟ್ ಮಾಸ್ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಫಸ್ಟ್ ಲುಕ್ ಪೋಸ್ಟರ್‌ನಲ್ಲಿಯೂ ಪೃಥ್ವಿ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಉಗ್ರರ ದಾಳಿ ಖಂಡಿಸಿದ ಶ್ರೀನಿಧಿ ಶೆಟ್ಟಿ

pruthvi ambaar 3

PA ಪ್ರೊಡಕ್ಷನ್ಸ್ ಪ್ರಮುಖ ಉದ್ದೇಶ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕೆಂಬ ನಿಟ್ಟಿನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣ ಸಂಸ್ಥೆಯನ್ನು ಶುರು ಮಾಡಿದ್ದಾರೆ. ಅದರಂತೆ ‘ಕೊತ್ತಲವಾಡಿ’ ಚಿತ್ರದಲ್ಲಿಯೂ ಹೊಸ ಪ್ರತಿಭೆಗಳಿಗೆ ಅವಕಾಶ ದೊರೆತಿದೆ. ಯುವ ನಿರ್ದೇಶಕರ ಜೊತೆಗೆ ಹಿನ್ನೆಲೆ ಸಂಗೀತ ಕೊಟ್ಟಿರುವ ಅಭಿನಂದನ್ ಕಶ್ಯಪ್, ಸಾಹಸ ನಿರ್ದೇಶಕ ಸಾಗರ್ ಕೂಡ ಹೊಸಬರೇ.

ಹಳ್ಳಿ ಹಿನ್ನೆಲೆಯಲ್ಲಿ ಸಾಗುವ ಕಥೆಯಲ್ಲಿ ಪೃಥ್ವಿ ಅಂಬರ್ ಆ್ಯಕ್ಷನ್ ಹೀರೋ ಆಗಿ ಅಬ್ಬರಿಸಲಿದ್ದಾರೆ. ಕಾರ್ತಿಕ್ ಎಸ್ ಕ್ಯಾಮೆರಾ ಕೈಚಳಕ, ವಿಕಾಸ್ ವಸಿಷ್ಠ ಅವರ ಸಂಗೀತ, ರಘು ನಿಡುವಳ್ಳಿ ಅವರ ಸಂಭಾಷಣೆ, ಡಾ.ವಿ.ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್ ಹಾಗೂ ಪ್ರಮೋದ್ ಮರವಂತೆ ಅವರ ಸಾಹಿತ್ಯ ‘ಕೊತ್ತಲವಾಡಿ’ ಸಿನಿಮಾಗೆ ಇದೆ.

Share This Article