ಏರೋ ಇಂಡಿಯಾ 2023 ಕಾರ್ಯಕ್ರಮದಲ್ಲಿ ಭಾಗಿಯಾಗಲು ನಿನ್ನೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ರಾತ್ರಿ ಅವರಿಗಾಗಿ ರಾಜಭವನದಲ್ಲಿ ವಿಶೇಷ ಔತಣಕೂಟವನ್ನು ರಾಜ್ಯಪಾಲರು ಏರ್ಪಡಿಸಿದ್ದರು. ಈ ಔತಣ ಕೂಟದಲ್ಲಿ ಸಿನಿಮಾ ರಂಗದ ನಾಲ್ವರು ಗಣ್ಯರು ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿದೆ. ಕೇವಲ ಸಿನಿಮಾ ಗಣ್ಯರು ಮಾತ್ರವಲ್ಲ, ಕ್ರಿಕೆಟ್ ರಂಗದ ದಿಗ್ಗಜರು ಮತ್ತು ಕೆಲ ಯುವ ಉದ್ಯಮಿಗಳನ್ನು ಆಹ್ವಾನಿಸಲಾಗಿತ್ತು ಎನ್ನುವ ಸುದ್ದಿಯಿದೆ.
Advertisement
ಸ್ಯಾಂಡಲ್ ವುಡ್ ಸಿನಿಮಾ ರಂಗದಿಂದ ನಟ ಯಶ್, ನಿರ್ದೇಶಕ, ನಟ ರಿಷಬ್ ಶೆಟ್ಟಿ ಹಾಗೂ ನಿರ್ಮಾಪಕರಾದ ಅಶ್ವಿನಿ ಪುನೀತ್ ರಾಜ್ ಕುಮಾರ್ ಮತ್ತು ವಿಜಯ್ ಕಿರಗಂದೂರು, ನಿರ್ದೇಶಕ ಪ್ರಶಾಂತ್ ನೀಲ್ ಔತಣಕೂಟದಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಕೆಲವು ಫೋಟೋಗಳು ಕೂಡ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಕೆಜಿಎಫ್ 2 ಹಾಗೂ ಕಾಂತಾರ ಸಿನಿಮಾದ ಯಶಸ್ಸಿನ ಕಾರಣದಿಂದಾಗಿ ಇವರಿಗಷ್ಟೇ ಆಹ್ವಾನ ನೀಡಲಾಗಿದೆ ಎನ್ನುವ ಸುದ್ದಿಯಿದೆ. ಇದನ್ನೂ ಓದಿ: ಆನಂದ್ ಮಹಿಂದ್ರಾ ಜೊತೆ `ನಾಟು ನಾಟು’ ಹಾಡಿಗೆ ಹೆಜ್ಜೆ ಹಾಕಿದ ರಾಮ್ ಚರಣ್
Advertisement
Advertisement
ಇಂದು ಬೆಳಗ್ಗೆ 9.30ಕ್ಕೆ ಪ್ರಧಾನಿಗಳು ಏರೋ ಇಂಡಿಯಾ ಕಾರ್ಯಕ್ರಮವನ್ನು ಉದ್ಘಾಟನೆ ಮಾಡುತ್ತಿದ್ದಾರೆ. ಅದಕ್ಕೂ ಮುನ್ನ ಅವರು ನಿನ್ನೆಯೇ ಬೆಂಗಳೂರಿಗೆ ಬಂದಿಳಿದಿದ್ದರು. ಔತಣಕೂಟದ ನೆಪದಲ್ಲಿ ಕರ್ನಾಟಕದ ಗಣ್ಯರನ್ನು ಪ್ರಧಾನಿಯವರೊಂದಿಗೆ ಮುಖಾಮುಖಿ ಮಾಡಿಸಲಾಗಿದೆ. ಸಿನಿಮಾ ರಂಗದ ಗಣ್ಯರ ಜೊತೆ ಕ್ರಿಕೆಟಿಗರಾದ ಜಾವಗಲ್ ಶ್ರೀನಾಥ್, ಮನೀಶ್ ಪಾಂಡೆ, ಅನಿಲ್ ಕುಂಬ್ಳೆ, ಮರ್ಯಾಂಕ್ ಅಗರ್ವಾಲ್ ಮುಂತಾದವರು ಭಾಗಿಯಾಗಿದ್ದರು.
Advertisement
ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಈ ಔತಣಕೂಟ ಕೂಡ ಮಹತ್ವ ಪಡೆದುಕೊಂಡಿದೆ. ಯಶ್ ಮತ್ತು ರಿಷಬ್ ಶೆಟ್ಟಿ ಈಗ ಕೇವಲ ಸ್ಯಾಂಡಲ್ ವುಡ್ ನಟರಾಗಿ ಮಾತ್ರ ಉಳಿದುಕೊಂಡಿಲ್ಲ. ಪ್ಯಾನ್ ಇಂಡಿಯಾ ಸ್ಟಾರ್ ಆಗಿಯೂ ಬೆಳೆದಿದ್ದಾರೆ. ಅವರ ಸಿನಿಮಾಗಳು ಬಾಕ್ಸ್ ಆಫೀಸಿನಲ್ಲಿ ಕೋಟಿ ಕೋಟಿ ಹಣವನ್ನು ಸಂಪಾದನೆ ಮಾಡಿವೆ. ಈ ಕಾರಣದಿಂದಾಗಿಯೇ ಪ್ರಧಾನಿಯ ಭೇಟಿ ಮಹತ್ವ ಪಡೆದುಕೊಂಡಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k