ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ತಮ್ಮ ಇನ್‍ಸ್ಟಾದಲ್ಲಿ ಮಗಳ ಹುಟ್ಟುಹಬ್ಬದ ಎಕ್ಸ್‌ಕ್ಲೂಸಿವ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಇತ್ತೀಚೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ತಮ್ಮ ಮಗಳ ಹುಟ್ಟುಹಬ್ಬವನ್ನು ಫನ್ ವರ್ಲ್ಡ್ ನಲ್ಲಿ ಅದ್ಧೂರಿಯಾಗಿ ಆಚರಿಸಿದ್ದರು. ಈ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಇಡೀ ತಾರಾಲೋಕವೇ ಒಂದೆಡೆ ಸೇರಿತ್ತು. ಅಲ್ಲದೆ ಐರಾಳ ಹುಟ್ಟುಹಬ್ಬದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಇದನ್ನೂ ಓದಿ: ಹುಟ್ಟುಹಬ್ಬದ ಸಂಭ್ರಮದಲ್ಲಿ ರಾಕಿಂಗ್ ದಂಪತಿಯ ಪುತ್ರಿ
ಇದೀಗ ಐರಾ ಹುಟ್ಟುಹಬ್ಬದ ಸಂತಸದ ಕ್ಷಣಗಳಿಂದ ಕೂಡಿರುವ ವಿಡಿಯೋವನ್ನು ಯಶ್ ತಮ್ಮ ಇನ್‍ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ, “ನಿಮ್ಮೆಲ್ಲರ ಮನವಿಗೆ ನಾನು ಹೇಗೆ ಇಲ್ಲ ಎಂದು ಹೇಳಲು ಸಾಧ್ಯ. ನಮ್ಮ ಪುಟ್ಟ ರಾಜಕುಮಾರಿಯ ಹುಟ್ಟುಹಬ್ಬದ ಝಲಕ್ ಇಲ್ಲಿದೆ. ಹಾಗೆಯೇ ಐರಾ ನಿಮ್ಮ ಪ್ರೀತಿ ಹಾಗೂ ಶುಭಾಶಯಕ್ಕೆ ಧನ್ಯವಾದ ತಿಳಿಸುತ್ತಿದ್ದಾಳೆ” ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಐರಾಳ ಹುಟ್ಟುಹಬ್ಬದ ಪಾರ್ಟಿಯಲ್ಲಿ ದರ್ಶನ್, ಪುನೀತ್
ಐರಾ ತನ್ನ ಮೊದಲ ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾಳೆ. ಐರಾಳ ಮೊದಲ ಹುಟ್ಟುಹಬ್ಬಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪವರ್ ಸ್ಟಾರ್ ಪುನೀತ್ ಸೇರಿದಂತೆ ಸ್ಯಾಂಡಲ್‍ವುಡ್‍ನ ಹಲವು ಕಲಾವಿದರು ಭಾಗಿಯಾಗಿದ್ದರು. ಐರಾಳ ಹುಟ್ಟುಹಬ್ಬಕ್ಕಾಗಿ ವಿಶೇಷವಾದ ದೊಡ್ಡ ಕೇಕ್ ತಯಾರಿಸಲಾಗಿತ್ತು. ಐರಾ ಈ ಕೇಕ್ ಅನ್ನು ಕಟ್ ಮಾಡಿ ತನ್ನ ಮೊದಲ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಳು.
ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ನಟಿ ಭಾರತಿ ವಿಷ್ಣುವರ್ಧನ್, ಸಂಸದೆ ಸುಮಲತಾ ಅಂಬರೀಶ್, ನಟರಾದ ದರ್ಶನ್, ಪುನೀತ್ ರಾಜ್‍ಕುಮಾರ್, ಧ್ರುವ ಸರ್ಜಾ, ಅನಿರುದ್ಧ, ಅಭಿಷೇಕ್ ಅಂಬರೀಶ್ ಹಾಗೂ ಉದ್ಯಮಿಯಾದ ಅಶೋಕ್ ಖೇಣಿ ಭಾಗಿಯಾಗಿದ್ದಾರೆ. ಇವರ ಹೊರತಾಗಿ ಐರಾ ಹುಟ್ಟುಹಬ್ಬಕ್ಕೆ ಯಶ್ ಹಾಗೂ ರಾಧಿಕಾ ಕುಟುಂಬಸ್ಥರು ಆಗಮಿಸಿದ್ದರು.