– ಮತ್ತೊಂದು ಮೈಲುಗಲ್ಲು ಸಾಧಿಸುವತ್ತ ಜೈಸ್ವಾಲ್
ಧರ್ಮಶಾಲಾ: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಅರ್ಧಶತಕ ಸಿಡಿಸುವ ಮೂಲಕ ಯಶಸ್ವಿ ಜೈಸ್ವಾಲ್ (Yashasvi Jaiswal), ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರ ಹೆಸರಲ್ಲಿದ್ದ ಅಪರೂಪದ ದಾಖಲೆಯನ್ನ ನುಚ್ಚುನೂರು ಮಾಡಿದ್ದಾರೆ.
ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ (England) ತಂಡ 218 ರನ್‌ಗಳಿಗೆ ಆಲೌಟ್ ಆಯಿತು. ಬಳಿಕ ತನ್ನ ಸರದಿಯ ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತ 30 ಓವರ್‌ಗಳಲ್ಲಿ 1 ವಿಕೆಟ್ ಕಳೆದುಕೊಂಡು 135 ರನ್‌ಗಳಿಗೆ ಮೊದಲ ದಿನದಾಟ ಅಂತ್ಯಗೊಳಿಸಿತು. ಇದನ್ನೂ ಓದಿ: ಮೊದಲ ಪಂದ್ಯದಲ್ಲೇ ಶತಕ ಸಿಡಿಸಿ ಹಲವು ದಾಖಲೆ ಮುರಿದ ಯಶಸ್ವಿ ಜೈಸ್ವಾಲ್
Advertisement
Advertisement
ಹಿಟ್‌ಮ್ಯಾನ್ (Rohit Sharma) ಜೊತೆಗೆ ಕ್ರೀಸ್ ಆರಂಭಿಸಿದ ಯುವ ಬ್ಯಾಟರ್ ಯಶಸ್ವಿ ಜಸ್ವಾಲ್ ಮತ್ತೊಮ್ಮೆ ಸ್ಫೋಟಕ ಪ್ರದರ್ಶನ ನೀಡಿದರು. ಆಕರ್ಷಕ ಅರ್ಧಶತಕ ಗಳಿಸುವ ಜೊತೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 1 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದರು. ಹಾಗೂ ಸಚಿನ್ ತೆಂಡೂಲ್ಕರ್ ಬಳಿಕ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟರ್ ಹಾಗೂ ಸರಣಿಯೊಂದರಲ್ಲಿ ಅತಿಹೆಚ್ಚು ರನ್ ಗಳಿಸಿದ 3ನೇ ಭಾರತೀಯ ಎಂಬ ವಿಶೇಷ ಸಾಧನೆಗೆ ಪಾತ್ರರಾದರು. ಸಚಿನ್ 25 ಸಿಕ್ಸರ್ ಸಿಡಿಸಿದ್ದರೆ, ಯಶಸ್ವಿ ಜೈಸ್ವಾಲ್ 26 ಸಿಕ್ಸರ್ ಸಿಡಿಸಿದ್ದಾರೆ.
Advertisement
Advertisement
5ನೇ ಟೆಸ್ಟ್ ಪಂದ್ಯದ ಮೊದಲನೇ ದಿನದಾಟದಲ್ಲಿ 58 ಎಸೆತಗಳಲ್ಲಿ 57 ರನ್ (5 ಬೌಂಡರಿ, 3 ಸಿಕ್ಸರ್) ಗಳಿಸಿದ ಯಶಸ್ವಿ ಜೈಸ್ವಾಲ್ ಪ್ರಸಕ್ತ ಸರಣಿಯಲ್ಲಿ 712 ರನ್ ಗಳಿಸಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್‌ನ ಸರಣಿಯೊಂದರಲ್ಲಿ 692 ರನ್ ಗಳಿಸಿದ್ದ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ನುಚ್ಚುನೂರು ಮಾಡಿದರು. 2014-15ರ ಸಾಲಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ 692 ರನ್ ಗಳಿಸಿದ್ದರು. ಈ ಮೂಲಕ ಸರಣಿಯೊಂದರಲ್ಲಿ ಹೆಚ್ಚು ರನ್ ಗಳಿಸಿದ್ದ 2ನೇ ಭಾರತೀಯ ಎಂಬ ಖ್ಯಾತಿ ಗಳಿಸಿದ್ದರು. ಇದೀಗ ವಿರಾಟ್ ಅವರ ದಾಖಲೆಯನ್ನು ಹಿಂದಿಕ್ಕಿರುವ ಯಶಸ್ವಿ ಜೈಸ್ವಾಲ್, ಸುನೀಲ್ ಗವಾಸ್ಕರ್ ಅವರ 774 ರನ್‌ಗಳ ದಾಖಲೆ ಮುರಿಯುವ ಸನಿಹದಲ್ಲಿದ್ದಾರೆ. ಇದನ್ನೂ ಓದಿ: India vs England, 5th Test Day 1: ಕುಲ್ದೀಪ್‌ಗೆ 5 ವಿಕೆಟ್; 218 ರನ್‌ಗಳಿಗೆ ಇಂಗ್ಲೆಂಡ್ ಆಲೌಟ್
ಸ್ಪಿನ್ ಮಾಂತ್ರಿಕರ ದಾಳಿಗೆ ನೆಲಕಚ್ಚಿದ ಇಂಗ್ಲೆಂಡ್:
ಈಗಾಗಲೇ ಸರಣಿಯನ್ನು ಸೋತಿರುವ ಇಂಗ್ಲೆಂಡ್ ತಂಡ ಅಂತಿಮ ಟೆಸ್ಟ್ ಪಂದ್ಯದಲ್ಲಾದರೂ ಸುಧಾರಿತ ಪ್ರದರ್ಶನ ನೀಡುವ ಉತ್ಸಾಹದಲ್ಲಿ ಕಣಕ್ಕಿಳಿದಿತ್ತು. ಆದ್ರೆ ಭಾರತೀಯ ಸ್ಪಿನ್ ಮಾಂತ್ರಿಕರ ದಾಳಿಗೆ ತತ್ತರಿಸಿಹೋದರು. 57 ಓವರ್‌ಗಳಲ್ಲೇ 218 ರನ್ ಗಳಿಸಿ ಇಂಗ್ಲೆಂಡ್ ಆಲೌಟ್ ಆಯಿತು. ಭಾರತದ ಪರ ಸ್ಪಿನ್ ದಾಳಿ ನಡೆಸಿದ ಕುಲ್ದೀಪ್ ಯಾದವ್ 5 ವಿಕೆಟ್ ಕಿತ್ತರೆ, 100ನೇ ಟೆಸ್ಟ್ ಪಂದ್ಯವನ್ನಾಡಿದ ಅಶ್ವಿನ್ 4 ವಿಕೆಟ್ ಪಡೆದು ಮಿಂಚಿದರು. ರವೀಂದ್ರ ಜಡೇಜಾ 1 ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.
ಟೆಸ್ಟ್ ಸರಣಿಯೊಂದರಲ್ಲಿ ಅತಿಹೆಚ್ಚು ರನ್ ಗಳಿಸಿದ ಟಾಪ್-5 ಲಿಸ್ಟ್
* ಡಾನ್ ಬ್ರಾಡ್ಮನ್ – 974 ರನ್ (5 ಪಂದ್ಯ, 7 ಇನ್ನಿಂಗ್ಸ್)
* ವಾಲಿ ಹ್ಯಾಮಂಡ್ – 905 ರನ್ (5 ಪಂದ್ಯ, 9 ಇನ್ನಿಂಗ್ಸ್)
* ರಾಸ್ ಟೇಲರ್ – 839 ರನ್ (6 ಪಂದ್ಯ, 11 ಇನ್ನಿಂಗ್ಸ್)
* ನೀಲ್ ಹಾರ್ವೆ – 834 ರನ್ (5 ಪಂದ್ಯ, 9 ಇನ್ನಿಂಗ್ಸ್)
* ವಿವ್ ರಿಚರ್ಡ್ಸ್ – 829 (4 ಪಂದ್ಯ, 7 ಇನ್ನಿಂಗ್ಸ್)
ಟೆಸ್ಟ್ ಸರಣಿಯೊಂದರಲ್ಲಿ ಅತಿಹೆಚ್ಚು ರನ್ ಗಳಿಸಿದ ಭಾರತೀಯರು
* ಸುನೀಲ್ ಗವಾಸ್ಕರ್ – 774 (4 ಪಂದ್ಯ, 8 ಇನ್ನಿಂಗ್ಸ್) – 1970-71
* ಸುನೀಲ್ ಗವಾಸ್ಕರ್ – 732 (6 ಪಂದ್ಯ, 9 ಇನ್ನಿಂಗ್ಸ್) – 1978/79
* ಯಶಸ್ವಿ ಜೈಸ್ವಾಲ್ – 712 – (5 ಪಂದ್ಯ, 9 ಇನ್ನಿಂಗ್ಸ್) – 2024
* ವಿರಾಟ್ ಕೊಹ್ಲಿ – 692 – (4 ಪಂದ್ಯ, 8 ಇನ್ನಿಂಗ್ಸ್) – 2014/15