ದುಬೈ: ರಾಜಸ್ಥಾನ ತಂಡದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಅವರಿಂದ ಬ್ಯಾಟ್ ಹಾಗೂ ಜೆರ್ಸಿಗೆ ಸಹಿ ಪಡೆದುಕೊಂಡು ಸಂಭ್ರಮಪಟ್ಟಿದ್ದಾರೆ.
14ನೇ ಆವೃತ್ತಿಯ ಐಪಿಎಲ್ನ 47ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ರಾಜಸ್ಥಾನ ತಂಡದ ಯುವ ಆರಂಭಿಕ ಆಟಗಾರ 50ರನ್(21 ಎಸೆತ, 6 ಬೌಂಡರಿ, 3 ಸಿಕ್ಸ್) ಬಾರಿಸಿ ಮಿಂಚಿದರು. ಈ ಪಂದ್ಯದಲ್ಲಿ ಸಿಎಸ್ಕೆ ವಿರುದ್ಧ ರಾಜಸ್ಥಾನ ತಂಡ ಗೆಲುವು ದಾಖಲಿಸಿತ್ತು. ಇದನ್ನೂ ಓದಿ: ಐಪಿಎಲ್ನಲ್ಲಿ ಮಿಂಚುತ್ತಿರುವ ಅನ್ ಕ್ಯಾಪ್ಡ್ ಪ್ಲೇಯರ್ಸ್
What a moment meeting the legendary @msdhoni sir and greatly elated by getting his signature on my bat. Always an inspiration! ???????? pic.twitter.com/pWsoxsFNzj
— Yashasvi Jaiswal (@ybj_19) October 3, 2021
ಪಂದ್ಯದ ಬಳಿಕ ಯಶಸ್ವಿ ಜೈಸ್ವಾಲ್ ಕೂಲ್ ಕ್ಯಾಪ್ಟನ್ ಧೋನಿ ಬಳಿ ಹೋಗಿ ತಮ್ಮ ಒಂದು ಜೆರ್ಸಿ ಮತ್ತು ತಾನು ಅರ್ಧಶತಕ ಸಿಡಿಸಿದ ಬ್ಯಾಟ್ಗೆ ಸಹಿ ಮಾಡಿಸಿಕೊಂಡು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡು ಖುಷಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ರೋಚಕ ಘಟ್ಟ ತಲುಪಿದ ಐಪಿಎಲ್ – ಪ್ಲೇ ಆಫ್ಗೆ ಏರಲು ಯಾವ ತಂಡ ಏನು ಮಾಡಬೇಕು?