ಬೆಂಗಳೂರು: ರಾಜ್ಯದಲ್ಲಿ ಸಹಕಾರಿ ಕ್ಷೇತ್ರದ ರೈತರಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುವ ಯಶಸ್ವಿನಿ ಯೋಜನೆ (Yeshasvini Scheme) ಅಕ್ಟೋಬರ್ 2 ರಿಂದ ಜಾರಿಯಾಗಲಿದೆ ಅಂತ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ (S.T. Somashekhar) ತಿಳಿಸಿದ್ದಾರೆ.
ವಿಧಾನ ಪರಿಷತ್ (Legislative Council) ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ (Congress) ಸದಸ್ಯ ಮಧು ಮಾದೇಗೌಡರ (Madhu Madegowda) ಪ್ರಶ್ನೆಗೆ ಉತ್ತರಿಸಿದ ಸಚಿವರು, ನಮ್ಮ ಸರ್ಕಾರ ಯಶಸ್ವಿನಿ ಯೋಜನೆ ಮರು ಜಾರಿ ಮಾಡುತ್ತಿದೆ. ಸಿಎಂ ಬೊಮ್ಮಾಯಿ (Basavaraj Bommai) ಅವರು ಬಜೆಟ್ ಭಾಷಣದಲ್ಲಿ (Budget Speech) ಘೋಷಣೆ ಮಾಡಿದಂತೆ ಯಶಸ್ವಿನಿ ಯೋಜನೆ ಜಾರಿ ಮಾಡಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಕಣ್ಣಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಪುಟ್ಟ ಕಂದಮ್ಮನ ನೆರವಿಗೆ ನಿಂತ ಸಚಿವೆ ಜೊಲ್ಲೆ
Advertisement
Advertisement
ಈಗಾಗಲೇ ಯೋಜನೆಗಾಗಿ 300 ಕೋಟಿ ಹಣ ಒದಗಿಸಲಾಗಿದೆ. ಯೋಜನೆ ಅನುಷ್ಠಾನಕ್ಕೆ ಈಗಾಗಲೇ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಅಕ್ಟೋಬರ್ 2 ರಿಂದ ಯೋಜನೆ ಪ್ರಾರಂಭಕ್ಕೆ ನಿರ್ಧಾರ ಮಾಡಲಾಗಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆ ನಡೆಯುತ್ತಿದೆ. ಈ ಯೋಜನೆ ರಾಜ್ಯದ ಎಲ್ಲಾ ರೈತರಿಗೆ ಅನ್ವಯ ಆಗುವುದಿಲ್ಲ. ಸಹಕಾರಿ ಸಂಸ್ಥೆಗಳ ಸದಸ್ಯರಿಗೆ ಮಾತ್ರ ಈ ಯೋಜನೆ ಅನ್ವಯ ಆಗಲಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಹಿಜಬ್ ವಿದ್ಯಾರ್ಥಿನಿಯರ ಪ್ರತಿಭಟನೆ ಹಿಂದೆ PFI ಪಿತೂರಿ: ಸಾಲಿಸಿಟರ್ ಜನರಲ್ ಮೆಹ್ತಾ ವಾದ