CinemaDistrictsKarnatakaLatestMain PostSandalwood

ಯಶೋದಾ ಫಸ್ಟ್ ಗ್ಲಿಂಪ್ಸ್ ರಿಲೀಸ್: ಜೈ ಹೋ ಅಂದ ಸಮಂತಾ ಅಭಿಮಾನಿಗಳು

ಮಂತಾ ಅವರೇ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಯಶೋದಾ ಸಿನಿಮಾದ ಫಸ್ಟ್ ಗ್ಲಿಂಪ್ಸ್ ರಿಲೀಸ್ ಆಗಿದ್ದು, ಅಭಿಮಾನಿಗಳು ಸಮಂತಾ ಲುಕ್ ಕಂಡು ಫಿದಾ ಆಗಿದ್ದಾರೆ. ಇದು ಕೂಡ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಈ ಮೂಲಕ ಸಮಂತ್ ಮತ್ತೊಂದು ಇನ್ನಿಂಗ್ಸ್ ಶುರು ಮಾಡಲಿದ್ದಾರೆ. ಈ ಗ್ಲಿಂಪ್ಸ್ ಜೊತೆಗೆ ಯಶೋದ ಸಿನಿಮಾದ ಸಣ್ಣ ವಿಡಿಯೋ ತುಣುಕನ್ನು ಕೂಡ ಇಂದು ರಿಲೀಸ್ ಮಾಡಲಾಗಿದ್ದು, ಆ ವಿಡಿಯೋ ಕುತೂಹಲ ಮೂಡಿಸುತ್ತಿದೆ. ಸಮಂತಾ ಅವರ ನಟನೆ ಕೂಡ ಕಾಯುವಿಕೆಗೆ ಸಾಕ್ಷಿಯಾಗಿದೆ. ಈಗಾಗಲೇ ಸಿನಿಮಾದ ಶೇ.80ರಷ್ಟು ಶೂಟಿಂಗ್‌ ಮುಗಿದಿದ್ದು, ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಲ್ಲಿ ತೊಡಗಿದೆ ಚಿತ್ರತಂಡ. ಇದನ್ನೂ ಓದಿ : ಶತ್ರುಘ್ನಾ ಸಿನ್ಹಾ ಮೇಲೆ ಲೈಂಗಿಕ ಹಗರಣ ದಂಧೆ ಆರೋಪ : ನಟಿ ವಿರುದ್ಧ ತಿರುಗಿ ಬಿದ್ದ ಸಿನ್ಹಾ ಕುಟುಂಬ

ಶ್ರೀದೇವಿ ಪ್ರೊಡಕ್ಷನ್‌ನ 14ನೇ ಸಿನಿಮಾ ಇದಾಗಿದ್ದು, ಹರಿ ಮತ್ತು ಹರೀಶ್‌ ಈ ಚಿತ್ರಕ್ಕೆ ನಿರ್ದೇಶನ ಮಾಡಿದರೆ, ಶಿವಲೆಂಕಾ ಕೃಷ್ಣ ಪ್ರಸಾದ್‌ ನಿರ್ಮಿಸಿದ್ದಾರೆ. ಸಿನಿಮಾ ಬಗ್ಗೆ ಹೇಳಿಕೊಳ್ಳುವ ನಿರ್ಮಾಪಕರು, ಫ್ಯಾಮಿಲಿ ಮ್ಯಾನ್‌ 2 ವೆಬ್‌ ಸಿರೀಸ್‌ ಮೂಲಕ ಪ್ಯಾನ್‌ ಇಂಡಿಯಾ ಜನರನ್ನು ಸಮಂತಾ ತಲುಪಿದ್ದಾರೆ. ಆ ಒಂದು ಕಾರಣಕ್ಕೆ ಎಲ್ಲಿಯೂ ಕಾಂಪ್ರಮೈಸ್‌ ಆಗದೇ, ಎಲ್ಲೆಡೆ ಸಲ್ಲುವ ಸಿನಿಮಾ ಮಾಡಿದ್ದೇವೆ. ಈ ಸಿನಿಮಾದಲ್ಲಿನ ಸಮಂತಾ ಅವರ ಡೆಡಿಕೇಷನ್‌ ತೆರೆಮೇಲೆ ಕಾಣಿಸಲಿದೆ. ಅವರ ನಟನೆಯನ್ನು ನೋಡುವುದೇ ಚಂದʼ ಎನ್ನುತ್ತಾರೆ. ಇದನ್ನೂ ಓದಿ : ಸ್ಟಾರ್ ನಟಿ ಪೂಜಾ ಹೆಗಡೆ ನಿದ್ದೆಗೆಡಿಸಿದ ಸಾಲು ಸಾಲು ಸೋಲು

ಚಿತ್ರೀಕರಣದ ಬಗ್ಗೆಯೂ ಮಾಹಿತಿ ನೀಡುವ ಅವರು, ಚಿತ್ರದ ಕ್ಲೈಮ್ಯಾಕ್ಸ್‌ ಹಂತವನ್ನು ಕೊಡೈಕೆನಾಲ್‌ನಲ್ಲಿ ಏಪ್ರಿಲ್‌ನಲ್ಲಿ ಚಿತ್ರೀಕರಿಸಿದ್ದೇವೆ. ಶೇ. 80 ಭಾಗದ ಶೂಟಿಂಗ್‌ ಮುಕ್ತಾಯವಾಗಿದ್ದು, ಹೈದರಾಬಾದ್‌ನಲ್ಲಿ ಕೊನೇ ಶೆಡ್ಯೂಲ್‌ ನಡೆಯುತ್ತಿದೆ. ಜೂನ್‌ 1ಕ್ಕೆ ಶೂಟ್‌ ಮುಗಿಸಲಿದ್ದೇವೆ. ಇಡೀ ಸಿನಿಮಾದಲ್ಲಿ ಗ್ರಾಫಿಕ್ಸ್‌ ಕೆಲಸ ಪ್ರಮುಖ ಪಾತ್ರ ವಹಿಸಲಿದೆ. ನಿರ್ದೇಶಕರ ಕೆಲಸವೂ ಇಂಪ್ರೆಸಿವ್‌ ಆಗಿದೆ ಎಂದರು. ಇದನ್ನೂ ಓದಿ : ಪ್ರಶಾಂತ್ ನೀಲ್ ಭಾರತೀಯ ಸಿನಿಮಾ ರಂಗದ ವೀರಪ್ಪನ್ : ಆರ್.ಜಿ.ವಿ

ಅಂದಹಾಗೆ, ಇದು ಕೇವಲ ತೆಲುಗಿನಲ್ಲಿ ಮಾತ್ರವಲ್ಲದೆ, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಲಿದೆ. ಬಿಡುಗಡೆಗೆ ದಿನಾಂಕವೂ ನಿಗದಿಯಾಗಿದ್ದು, ಆಗಸ್ಟ್‌ 12ಕ್ಕೆ ತೆರೆಗೆ ಬರಲಿದೆ. ಚಿತ್ರದಲ್ಲಿ ಸ್ಟಾರ್‌ ನಟರ ದಂಡೇ ಇದೆ. ವರಲಕ್ಷ್ಮೀ ಶರತ್‌ಕುಮಾರ್‌, ಉನ್ನಿ ಮುಕುಂದನ್‌, ರಾವ್‌ ರಮೇಶ್‌, ಮುರಳಿ ಶರ್ಮಾ, ಸಂಪತ್‌ ರಾಜ್, ಶತ್ರು, ಮಧುರಿಮಾ, ಕಲ್ಪಿಕಾ ಗಣೇಶ್‌, ದಿವ್ಯಾ ಶ್ರೀಪಾದ್‌, ಪ್ರಿಯಾಂಕಾ ಶರ್ಮಾ ಸೇರಿ ಹಲವರಿದ್ದಾರೆ.

Leave a Reply

Your email address will not be published.

Back to top button