ಮಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಮಾಜಿ ಪ್ರಾಂಶುಪಾಲ ಡಾ. ಬಿ ಯಶೋವರ್ಮ ಅವರು ವಿಧಿವಶರಾಗಿದ್ದಾರೆ.
66 ವರ್ಷದ ಯಶೋವರ್ಮ ಅವರು ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದ ಹಿನ್ನೆಲೆಯಲ್ಲಿ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಭಾನುವಾರ ಮಧ್ಯರಾತ್ರಿ ಚಿಕಿತ್ಸೆ ಫಲಿಸದೆ ನಿಧರಾಗಿದ್ದಾರೆ. ಇದನ್ನೂ ಓದಿ: ಶಾಲಾ ಪಠ್ಯದಲ್ಲಿ ಕೆಂಪೇಗೌಡ, ಸಿದ್ದರೂಢ ಜಾತ್ರೆ – ಮೋದಿ `ವೋಕಲ್ ಫಾರ್ ಲೋಕಲ್’ ಮಂತ್ರವೂ ಸೇರ್ಪಡೆ
ಯಶೋವರ್ಮ ಅವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಎಸ್‍ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದರು. ಡಾ. ಬಿ.ಯಶೋವರ್ಮ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ ಡಾ. ಹೇಮಾವತಿ ಹೆಗ್ಗಡೆಯವರ ಸಹೋದರರಾಗಿದ್ದಾರೆ.