ರಾಕಿಂಗ್ ಸ್ಟಾರ್ ಯಶ್ (Rocking Star) ನಟನೆಯ ಬಹುನಿರೀಕ್ಷಿತ ಸಿನಿಮಾ (Toxic) ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ವಿಶ್ವಾದ್ಯಂತ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. 4 ವರ್ಷಗಳ ಬಳಿಕ ಯಶ್ ಅವರನ್ನು ಬೆಳ್ಳಿತೆರೆಯಲ್ಲಿ ಕಂಡ ಅಭಿಮಾನಿಗಳು ಥಿಯೇಟರ್‌ಗಳ ಮುಂದೆ ಹಬ್ಬದ ವಾತಾವರಣ ಸೃಷ್ಟಿಸಿದ್ದಾರೆ.
ಚಿತ್ರವು ವಿಶ್ವಾದ್ಯಂತ 6 ಭಾಷೆಗಳಲ್ಲಿ 12 ಸಾವಿರಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಿದೆ. ಭಾರತದಲ್ಲಿ 5,500ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಸಿನಿಮಾ ತೆರೆಕಂಡಿದ್ದು, ಕರ್ನಾಟಕದಲ್ಲಿ 500ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ರಿಲೀಸ್ ಆಗಿದೆ.
ಬೆಂಗಳೂರಿನ ಸಂತೋಷ್ ಚಿತ್ರಮಂದಿರದಲ್ಲಿ 5 ಶೋಗಳ ಎಲ್ಲಾ ಟಿಕೆಟ್‌ಗಳು ಸೋಲ್ಡ್‌ಔಟ್ ಆಗಿವೆ. ಥಿಯೇಟರ್‌ಗಳ ಮುಂದೆ ಅಭಿಮಾನಿಗಳು ಯಶ್ ಅವರ ಕಟ್‌ಔಟ್‌ಗಳಿಗೆ ಹಾಲಿನ ಅಭಿಷೇಕ ಮಾಡಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಬೆಂಗಳೂರು ನಗರವೊಂದರಲ್ಲೇ 34 ಪ್ರಮುಖ ಕೇಂದ್ರಗಳಲ್ಲಿ ಸಿನಿಮಾಗೆ ಹೌಸ್‌ಫುಲ್ ಓಪನಿಂಗ್ ಸಿಕ್ಕಿದೆ. ಮಲ್ಟಿಪ್ಲೆಕ್ಸ್‌ಗಳಲ್ಲೂ ಶೇ.55ಕ್ಕೂ ಹೆಚ್ಚು ಪ್ರೇಕ್ಷಕರ ಹಾಜರಾತಿ ಕಂಡುಬಂದಿದೆ. ಇದನ್ನೂ ಓದಿ: ʻಟಾಕ್ಸಿಕ್ʼ ಭರ್ಜರಿ ಓಪನಿಂಗ್ – ಇಂದಿನಿಂದ ʻರಾಯʼನ ಅಬ್ಬರ; ಮುಗಿಲುಮುಟ್ಟಿದ ಫ್ಯಾನ್ಸ್ ಸಂಭ್ರಮ
ವಿಶೇಷವಾಗಿ ಕನ್ನಡ ಆವೃತ್ತಿಗೆ ಜಗತ್ತಿನಾದ್ಯಂತ ಉತ್ತಮ ಬೇಡಿಕೆ ವ್ಯಕ್ತವಾಗಿದೆ. ಸಿನಿಮಾ ನೋಡಿ ಹೊರಬಂದ ಪ್ರೇಕ್ಷಕರು ಮತ್ತು ಅಭಿಮಾನಿಗಳು ‘ಟಾಕ್ಸಿಕ್’ ಸಿನಿಮಾಗೆ ಫುಲ್ ಮಾರ್ಕ್ಸ್ ನೀಡುತ್ತಿದ್ದಾರೆ.
ಮೊದಲ ದಿನ ಬೆಂಗಳೂರಿನಲ್ಲಿ ಸುಮಾರು 22 ರೂ. ಕೋಟಿ ಗಳಿಕೆ ಆಗಿದ್ದು, ದೇಶ-ವಿದೇಶದಲ್ಲಿ ಸೇರಿ ಸಿನಿಮಾ 100 ಕೋಟಿ ರೂ.ಗೂ ಹೆಚ್ಚು ಗಳಿಸಿದೆ ಎಂದು ವರದಿಯಾಗಿದೆ.ಇದನ್ನೂ ಓದಿ: ಸಿನಿಮಾ ದೃಶ್ಯಗಳನ್ನು ರೆಕಾರ್ಡ್ ಮಾಡಿ ಹಂಚಿಕೊಳ್ಳಬೇಡಿ: ‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಯಶ್ ಮನವಿ
