ನವದೆಹಲಿ: ಕೇಂದ್ರ ಬಿಜೆಪಿ ಸರ್ಕಾರದ ಆರ್ಥಿಕ ನೀತಿಯನ್ನು ಟೀಕಿಸಿ ಪತ್ರಿಕೆಯೊಂದರಲ್ಲಿ ಲೇಖನ ಬರೆದಿದ್ದ ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ ಶೀಘ್ರದಲ್ಲಿಯೇ ಪ್ರಧಾನಿ ಮೋದಿಯವರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ.
ಬಿಜೆಪಿಯ ವಿರುದ್ಧ ಟೀಕೆಯ ಸಂದರ್ಭದಲ್ಲಿ ಸಿನ್ಹಾ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು 1 ವರ್ಷದ ಹಿಂದೆಯೇ ನಾನು ಸಮಯವನ್ನು ಕೇಳಿದ್ದೆ, ಆದರೆ ಇದೂವರೆಗೂ ನನಗೆ ಭೇಟಿಯಾಗಲು ಸಮಯವನ್ನು ನೀಡಿಲ್ಲ ಎಂದು ಕಿಡಿಕಾರಿದ್ದರು. ಈ ಹಿನ್ನೆಲೆಯಲ್ಲಿ ಮೋದಿ ಹಾಗೂ ಸಿನ್ಹಾ ಅವರ ಭೇಟಿ ಹೆಚ್ಚು ಕುತೂಹಲಕಾರಿಯಾಗಿದೆ.
Advertisement
ಆಕ್ಟೋಬರ್ 14 ರಂದು ಪಾಟ್ನಾ ವಿಶ್ವವಿದ್ಯಾಲಯದ ಶತಮಾನೋತ್ಸವ ಆಚರಣೆಯ ಸಮಾರಂಭ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಯವರು ಭಾಗವಹಿಸಲಿದ್ದಾರೆ. ಇದೇ ಕಾರ್ಯಕ್ರಮಕ್ಕೆ ಸಿನ್ಹಾ ಅವರಿಗೂ ಆಹ್ವಾನವನ್ನು ನೀಡಲಾಗಿದೆ ಎಂದು ಪಾಟ್ನಾ ವಿವಿಯ ಉಪಕುಲಪತಿಗಳಾದ ರಾಸ್ ಬಿಹಾರಿ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಅಂದಹಾಗೇ ಸಿನ್ಹಾರವರು ಇದೇ ವಿವಿಯಿಂದ ತಮ್ಮ ರಾಜ್ಯಶಾಸ್ತ್ರ ವಿಭಾಗದಲ್ಲಿ ಪದವಿಯನ್ನು ಪಡೆದಿದ್ದು, ಬೋಧಕರಾಗಿಯು ಸೇವೆಸಲ್ಲಿದ್ದರು.
Advertisement
ಈ ಕಾರ್ಯಕ್ರಮದಲ್ಲಿ ಸಿನ್ಹಾ ಭಾಗವಹಿಸುತ್ತಾರ ಅಥವಾ ಇಲ್ಲವೇ ಎಂಬುದು ಇನ್ನೂ ನಿರ್ಧಾರವಾಗಿಲ್ಲ ಎಂದು ಮೂಲಗಳು ತಿಳಿಸಿವೆ.
Advertisement
ಇದನ್ನೂ ಓದಿ: ಮೋದಿ ಸರ್ಕಾರವನ್ನು ಟೀಕಿಸಿದ್ರೂ ಯಶವಂತ್ ಸಿನ್ಹಾ ವಿರುದ್ಧ ಶಿಸ್ತು ಕ್ರಮ ಇಲ್ವಂತೆ ಯಾಕೆ?
Advertisement
ಕಳೆದ ಕೆಲವು ದಿನಗಳ ಹಿಂದೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಸಿನ್ಹಾ ಹಲವು ಆರೋಪಗಳನ್ನು ಮಾಡಿದ್ದರು. ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ನೇತೃತ್ವದಲ್ಲಿ ದೇಶದ ಅರ್ಥವ್ಯವಸ್ಥೆ ಹದಗೆಟ್ಟಿದೆ. ಹಣಕಾಸು ಸಚಿವರು ತಮ್ಮ ಕಾರ್ಯವನ್ನು ಉತ್ತಮವಾಗಿ ನಡೆಸುವಲ್ಲಿ ವಿಫಲರಾಗಿದ್ದಾರೆ. ಭಾರತ ಅರ್ಥಿಕ ವ್ಯವಸ್ಥೆ ಒತ್ತಡಕ್ಕೆ ಸಿಲುಕಿದ್ದು ಆಪಾರ ನಷ್ಟದಲ್ಲಿದೆ ಎಂದು ವಿಶ್ಲೇಷಿಸಿದ್ದರು.
ಅಲ್ಲದೇ ಮೋದಿ ತಮ್ಮ ಸಚಿವ ಸಂಪುಟ ಸೇರ್ಪಡೆಗೆ ಸಚಿವರ ಗರಿಷ್ಠ ವಯೋಮಿತಿಯನ್ನು 75ಕ್ಕೆ ಸೀಮಿತಗೊಳಿಸಿದ್ದಕ್ಕೆ , ಈಗಿನ ಸರ್ಕಾರ 75 ದಾಟಿದವರನ್ನು “ಬ್ರೇನ್ ಡೆಡ್ ಎಂದು ಡಿಕ್ಲೇರ್ ಮಾಡಿದೆ”. ಅಲ್ಲದೇ ಹಲವು ಹಿರಿಯ ಬಿಜೆಪಿ ನಾಯಕರನ್ನು ಮೂಲೆ ಗುಂಪು ಮಾಡಿ `ಮಾರ್ಗದರ್ಶಕ ಮಂಡಳಿ’ಯ ಸದಸ್ಯರನ್ನಾಗಿ ನೇಮಿಸಿದ್ದಾರೆ ಎನ್ನುವ ಎಂದು ಲೇವಡಿ ಮಾಡಿದ್ದರು.
ಇದನ್ನೂ ಓದಿ: ಒಂದು ಬಾರಿಯಾದ್ರೂ ದೇಶದ ಜನತೆಗೆ ಮೋದಿ ಉತ್ತರಿಸಲಿ: ಶತೃಘ್ನ ಸಿನ್ಹಾ