ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಒಮ್ಮತದ ಅಭ್ಯರ್ಥಿ ಯಶವಂತ್ ಸಿನ್ಹಾ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕರೆ ಮಾಡಿ ಬೆಂಬಲ ಕೋರಿದ್ದಾರೆ.
Advertisement
ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಅವರು ರಾಷ್ಟ್ರಪತಿ ಚುನಾವಣೆಗೆ ಸಂಯೋಜಿತ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಸಿನ್ಹಾ ಅವರನ್ನು ಹೆಸರಿಸಿದ್ದರು. ಸೋಮವಾರ ಸಿನ್ಹಾ ಅವರು ಪ್ರತಿಪಕ್ಷಗಳ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಇದನ್ನೂ ಓದಿ: ಸೋನಿಯಾ, ಪವಾರ್, ಮಮತಾ ಬ್ಯಾನರ್ಜಿಗೆ ಕರೆ ಮಾಡಿ ಬೆಂಬಲ ಕೋರಿದ ದ್ರೌಪದಿ ಮುರ್ಮು
Advertisement
Advertisement
ನಾವು ನಮ್ಮ ಪ್ರಚಾರವನ್ನು ಶ್ರದ್ಧೆಯಿಂದ ಪ್ರಾರಂಭಿಸಿದ್ದೇವೆ. ಚುನಾವಣೆಯಲ್ಲಿ ಬೆಂಬಲವನ್ನು ಪಡೆಯಲು ಪ್ರತಿಯೊಬ್ಬರನ್ನು ತಲುಪುತ್ತೇವೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ(ಎನ್‍ಸಿಪಿ) ಮೂಲಗಳು ತಿಳಿಸಿವೆ.ಸಿನ್ಹಾ ಅವರು ಪಿಎಂ ಮೋದಿ ಮತ್ತು ಸಿಂಗ್ ಅವರ ಕಚೇರಿಗಳಿಗೆ ಕರೆ ಮಾಡಿದ್ದಾರೆ. ಅವರ ಬೆಂಬಲ ಕೋರಿ ಸಂದೇಶವನ್ನು ಕಳುಹಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
Advertisement
ಶುಕ್ರವಾರ ನಾಮಪತ್ರ ಸಲ್ಲಿಸಿದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ(ಎನ್‍ಡಿಎ) ಅಧ್ಯಕ್ಷೀಯ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಎಂಎಂ(Jharkhand Mukti Morcha) ಮತ್ತು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನೇತೃತ್ವದ ಜೆಡಿಎಸ್ ಬೆಂಬಲಿತವಾಗಿದೆ ಎಂದು ತಿಳಿದುಬಂದಿದೆ.