ಹಾವೇರಿ: ಶಿಗ್ಗಾಂವಿ ಕಾಂಗ್ರೆಸ್ (Congress) ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ (Yasir Ahmed Khan Pathan) ಅವರ ಕಾರಿನ ಗಾಜನ್ನು ಟಿಕೆಟ್ ವಂಚಿತ ಅಜ್ಜಂ ಫೀರ್ ಖಾದ್ರಿ (Syed Azeempeer Khadri) ಅಭಿಮಾನಿಗಳು ಒಡೆದು ಹಾಕಿದ್ದಾರೆ.
ಶಿಗ್ಗಾಂವಿ ಕಾಂಗ್ರೆಸ್‍ನಲ್ಲಿ ಬಂಡಾಯದ ಬಿಸಿ ಹೆಚ್ಚಾಗಿದ್ದು, ಹೂಲಗೂರು ಗ್ರಾಮದಲ್ಲಿ ಖಾದ್ರಿ ಅಭಿಮಾನಿಗಳ ಮನವೊಲಿಸಲು ಸಚಿವ ಜಮೀರ್ ಅಹ್ಮದ್ ತೆರಳಿದ್ದರು. ಆದರೆ ಮನವೊಲಿಕೆ ಯತ್ನ ವಿಫಲವಾಗಿದೆ. ಇದರ ಬೆನ್ನಲ್ಲೇ ಅಜ್ಜಂ ಫೀರ್ ಖಾದ್ರಿಯವರು ನಾಮಪತ್ರ ಸಲ್ಲಿಸಿದ್ದಾರೆ.
Advertisement
ನಾಮಪತ್ರ ಸಲ್ಲಿಕೆ ಬಳಿಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಗೂ ಬಿಜೆಪಿ ಅಭ್ಯರ್ಥಿ ಸೋಲಿಸೋದಷ್ಟೆ ನನ್ನ ಗುರಿ ಎಂದು ಹೇಳಿದ್ದಾರೆ.
Advertisement
Advertisement
ಟಿಕೆಟ್ ಹಂಚಿಕೆಯಾಗುತ್ತಿದ್ದಂತೆ ಕಾಂಗ್ರೆಸ್ ರೌಡಿಶೀಟರ್‌ಗೆ ಟಿಕೆಟ್ ನೀಡಿದೆ ಎಂದು ಶಿಗ್ಗಾಂವಿ ಕಾಂಗ್ರೆಸ್ ಟಿಕೆಟ್ ವಂಚಿತ ಅಜ್ಜಂ ಫೀರ್ ಖಾದ್ರಿ ಆಕ್ರೋಶ ವ್ಯಕ್ತಪಡಿಸಿದ್ದರು.
Advertisement
ಶಿಗ್ಗಾಂವಿ ಉಪಚುನಾವಣೆ ( Shiggoan By Election) ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಪ್ರಾಯ ಇಲ್ಲ ಎಂದಿದ್ದರು.
ಹಾವೇರಿ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಟಿಕೆಟ್ ನೀಡಲಾಗಿದೆ. ಅಲ್ಪಸಂಖ್ಯಾತರ ಸಮಾಜಕ್ಕೆ ಟಿಕೆಟ್ ಸಿಕ್ಕಿದೆ. ನಮ್ಮ ಮೇಲೆ ಯಾವುದೇ ಕೇಸ್ ಇಲ್ಲ. ಅಜ್ಜಂ ಫೀರ್ ಖಾದ್ರಿ ಅವರು ಹಿರಿಯರು, ಅವರು ಯಾವ ವಿಚಾರದಲ್ಲಿ ನನ್ನ ಮೇಲೆ ಕೇಸ್ ಇದೆ ಎಂದು ಹೇಳಿದ್ದಾರೆ ನನಗೆ ಗೊತ್ತಿಲ್ಲ ಎಂದಿದ್ದರು.