– ಹಿಂದುಳಿದ ವರ್ಗದವರ ಸಣ್ಣ ತಪ್ಪನ್ನು ದೊಡ್ಡದು ಮಾಡುತ್ತಾರೆ
– ಇಲ್ಲದ ಹಗರಣ ಸೃಷ್ಟಿಸಿ ಅಧಿಕಾರದಿಂದ ಕೆಳಗಿಳಿಸುತ್ತಾರೆ
– ನಾಯಕನನ್ನು ಉಳಿಸಲು ಸಮಾಜ ಒಂದಾಗಬೇಕು
ಮಂಡ್ಯ/ ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಕುರ್ಚಿ ಗುದ್ದಾಟದಲ್ಲಿ(Karnataka Power Tussle) ತಂದೆಯ ಪರ ನಿಂತ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಜಾತಿ ಅಸ್ತ್ರ (Caste Card) ಪ್ರಯೋಗಿಸಿ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದಿದ್ದಾರೆ.
ಮಂಡ್ಯದ ಕನಕ ಭವನದಲ್ಲಿ ನಡೆದ ಕುರುಬರ (Kuruba) ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಸಿದ್ದರಾಮಯ್ಯನವರನ್ನು (Siddaramaiah) ಸಿಎಂ ಸ್ಥಾನದಲ್ಲಿ ಉಳಿಸಿಕೊಳ್ಳಿ ಎಂದು ಪರೋಕ್ಷವಾಗಿ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಕರೆ ನೀಡಿದ್ದಾರೆ. ಮತ್ತೊಂದು ಕಡೆ ದಲಿತರು (Dalits) ಸಿಎಂ ಆಗಿಲ್ಲ ಎಂಬ ದಾಳವನ್ನೂ ಉರುಳಿಸಿದ್ದಾರೆ.
ಹಿಂದುಳಿದ ವರ್ಗಗಳು ಜಾಗೃತರಾಗಿ ಸಮುದಾಯದ ನಾಯಕರನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿ ತಂದೆಯ ಪರ ಯತೀಂದ್ರ ಬ್ಯಾಟ್ ಬೀಸಿದ್ದಾರೆ. ಇದನ್ನೂ ಓದಿ: ಬಿಜೆಪಿ ತತ್ವ ಸಿದ್ಧಾಂತ ಒಪ್ಪಿ ಯಾರು ಬೇಕಾದ್ರೂ ಬರಬಹುದು – ಡಿಕೆಶಿಗೆ ರೇಣುಕಾಚಾರ್ಯ ಪರೋಕ್ಷ ಆಹ್ವಾನ
ಹಿಂದುಳಿದ ವರ್ಗದವರು ಸಾವಿರಾರು ವರ್ಷದಿಂದ ಅವಕಾಶದಿಂದ ವಂಚಿತರಾಗಿದ್ದಾರೆ. ರಾಜ್ಯದಲ್ಲಿ 25 ಮಂದಿ ಮುಖ್ಯಮಂತ್ರಿಗಳಾಗಿದ್ದಾರೆ. ಅದರಲ್ಲಿ ಹಿಂದುಳಿದ ವರ್ಗದ 5 ಜನ ಮಾತ್ರ ಸಿಎಂ ಆಗಿದ್ದಾರೆ. ಅದರಲ್ಲಿ ದಲಿತರು ಸಿಎಂ ಆಗಿಲ್ಲ. ಸಿದ್ದರಾಮಯ್ಯ ಮತ್ತು ಅರಸು ಅವರು ಮಾತ್ರ 5 ವರ್ಷ ಪೂರೈಸಿದ್ದಾರೆ. ಹಿಂದುಳಿದ ವರ್ಗದವರು ಸಣ್ಣತಪ್ಪು ಮಾಡಿದರೆ ಅದನ್ನು ದೊಡ್ಡದಾಗಿ ಬಿಂಬಿಸುತ್ತಾರೆ. ಇಲ್ಲದ ಹಗರಣವನ್ನು ಸೃಷ್ಟಿಸಿ ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನ ಮಾಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.
ರಾಜಕೀಯ ಶಕ್ತಿ ಇಲ್ಲದಿದ್ದರೆ ಸಮುದಾಯದ ಮೇಲೆ ಬರಲು ಸಾಧ್ಯವಿಲ್ಲ. ಇದಕ್ಕಾಗಿ ನಾವೆಲ್ಲ ಒಗ್ಗಟ್ಟಾಗಬೇಕು. ಸಮುದಾಯವನ್ನು ಉದ್ಧಾರ ಮಾಡುವವರ ಹಿಂದೆ ನಿಂತು ಅವರಿಗೆ ಬೆಂಬಲ ಕೊಡಬೇಕು. ಸಿದ್ದರಾಮಯ್ಯ ಪರ ನಿಂತ ಹಿಂದುಳಿದ ವರ್ಗದವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಹಿಂದುಳಿದ ವರ್ಗದ ಧ್ವನಿಯಾಗಿ ರಾಜಕೀಯ ಪದವಿ ಬೇಕು. ರಾಜಕೀಯ ಪದವಿ ಇದ್ದರೆ ರಾಜಕೀಯವಾಗಿ ಸಮುದಾಯಕ್ಕೆ ಅನುಕೂಲವಾಗುತ್ತದೆ. ಹೀಗಾಗಿ ಜಾಗೃತರಾಗಿ ಸಮುದಾಯದ ಪರ ಇರುವ ನಾಯಕರನ್ನು ಉಳಿಸಿಕೊಳ್ಳಿ ಎಂದು ಕರೆ ನೀಡಿದರು. ಇದನ್ನೂ ಓದಿ: ಸಿದ್ದರಾಮಯ್ಯನವರನ್ನು ಇಳಿಸಿದ್ರೆ ಕಾಂಗ್ರೆಸ್ ವಿರುದ್ಧ ಮತ – ಕುರುಬ ಸಂಘದಿಂದ ಎಚ್ಚರಿಕೆ

