Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಂದೆಯ ಪರ ಬ್ಯಾಟಿಂಗ್‌ – ಜಾತಿ ಅಸ್ತ್ರ ಪ್ರಯೋಗಿಸಿ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ಯತೀಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಂದೆಯ ಪರ ಬ್ಯಾಟಿಂಗ್‌ – ಜಾತಿ ಅಸ್ತ್ರ ಪ್ರಯೋಗಿಸಿ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ಯತೀಂದ್ರ

Bengaluru City

ತಂದೆಯ ಪರ ಬ್ಯಾಟಿಂಗ್‌ – ಜಾತಿ ಅಸ್ತ್ರ ಪ್ರಯೋಗಿಸಿ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ಯತೀಂದ್ರ

Public TV
Last updated: November 28, 2025 7:40 pm
Public TV
Share
2 Min Read
Yathindra calls on the backward class community to retain Siddaramaiah as CM
SHARE

– ಹಿಂದುಳಿದ ವರ್ಗದವರ ಸಣ್ಣ ತಪ್ಪನ್ನು ದೊಡ್ಡದು ಮಾಡುತ್ತಾರೆ
– ಇಲ್ಲದ ಹಗರಣ ಸೃಷ್ಟಿಸಿ ಅಧಿಕಾರದಿಂದ ಕೆಳಗಿಳಿಸುತ್ತಾರೆ
– ನಾಯಕನನ್ನು ಉಳಿಸಲು ಸಮಾಜ ಒಂದಾಗಬೇಕು

ಮಂಡ್ಯ/ ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಕುರ್ಚಿ ಗುದ್ದಾಟದಲ್ಲಿ(Karnataka Power Tussle) ತಂದೆಯ ಪರ ನಿಂತ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಜಾತಿ ಅಸ್ತ್ರ (Caste Card) ಪ್ರಯೋಗಿಸಿ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದಿದ್ದಾರೆ.

ಮಂಡ್ಯದ ಕನಕ ಭವನದಲ್ಲಿ ನಡೆದ ಕುರುಬರ (Kuruba) ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಸಿದ್ದರಾಮಯ್ಯನವರನ್ನು (Siddaramaiah) ಸಿಎಂ ಸ್ಥಾನದಲ್ಲಿ ಉಳಿಸಿಕೊಳ್ಳಿ ಎಂದು ಪರೋಕ್ಷವಾಗಿ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಕರೆ ನೀಡಿದ್ದಾರೆ. ಮತ್ತೊಂದು ಕಡೆ ದಲಿತರು (Dalits) ಸಿಎಂ ಆಗಿಲ್ಲ ಎಂಬ ದಾಳವನ್ನೂ ಉರುಳಿಸಿದ್ದಾರೆ.

ಹಿಂದುಳಿದ ವರ್ಗಗಳು ಜಾಗೃತರಾಗಿ ಸಮುದಾಯದ ನಾಯಕರನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿ ತಂದೆಯ ಪರ ಯತೀಂದ್ರ ಬ್ಯಾಟ್‌ ಬೀಸಿದ್ದಾರೆ. ಇದನ್ನೂ ಓದಿ: ಬಿಜೆಪಿ ತತ್ವ ಸಿದ್ಧಾಂತ ಒಪ್ಪಿ ಯಾರು ಬೇಕಾದ್ರೂ ಬರಬಹುದು – ಡಿಕೆಶಿಗೆ ರೇಣುಕಾಚಾರ್ಯ ಪರೋಕ್ಷ ಆಹ್ವಾನ

 

ಹಿಂದುಳಿದ ವರ್ಗದವರು ಸಾವಿರಾರು ವರ್ಷದಿಂದ ಅವಕಾಶದಿಂದ ವಂಚಿತರಾಗಿದ್ದಾರೆ. ರಾಜ್ಯದಲ್ಲಿ 25 ಮಂದಿ ಮುಖ್ಯಮಂತ್ರಿಗಳಾಗಿದ್ದಾರೆ. ಅದರಲ್ಲಿ ಹಿಂದುಳಿದ ವರ್ಗದ 5 ಜನ ಮಾತ್ರ ಸಿಎಂ ಆಗಿದ್ದಾರೆ. ಅದರಲ್ಲಿ ದಲಿತರು ಸಿಎಂ ಆಗಿಲ್ಲ. ಸಿದ್ದರಾಮಯ್ಯ ಮತ್ತು ಅರಸು ಅವರು ಮಾತ್ರ 5 ವರ್ಷ ಪೂರೈಸಿದ್ದಾರೆ. ಹಿಂದುಳಿದ ವರ್ಗದವರು ಸಣ್ಣತಪ್ಪು ಮಾಡಿದರೆ ಅದನ್ನು ದೊಡ್ಡದಾಗಿ ಬಿಂಬಿಸುತ್ತಾರೆ. ಇಲ್ಲದ ಹಗರಣವನ್ನು ಸೃಷ್ಟಿಸಿ ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನ ಮಾಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜಕೀಯ ಶಕ್ತಿ ಇಲ್ಲದಿದ್ದರೆ ಸಮುದಾಯದ ಮೇಲೆ ಬರಲು ಸಾಧ್ಯವಿಲ್ಲ. ಇದಕ್ಕಾಗಿ ನಾವೆಲ್ಲ ಒಗ್ಗಟ್ಟಾಗಬೇಕು. ಸಮುದಾಯವನ್ನು ಉದ್ಧಾರ ಮಾಡುವವರ ಹಿಂದೆ ನಿಂತು ಅವರಿಗೆ ಬೆಂಬಲ ಕೊಡಬೇಕು. ಸಿದ್ದರಾಮಯ್ಯ ಪರ ನಿಂತ ಹಿಂದುಳಿದ ವರ್ಗದವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಹಿಂದುಳಿದ ವರ್ಗದ ಧ್ವನಿಯಾಗಿ ರಾಜಕೀಯ ಪದವಿ ಬೇಕು. ರಾಜಕೀಯ ಪದವಿ ಇದ್ದರೆ ರಾಜಕೀಯವಾಗಿ ಸಮುದಾಯಕ್ಕೆ ಅನುಕೂಲವಾಗುತ್ತದೆ. ಹೀಗಾಗಿ ಜಾಗೃತರಾಗಿ ಸಮುದಾಯದ ಪರ ಇರುವ ನಾಯಕರನ್ನು ಉಳಿಸಿಕೊಳ್ಳಿ ಎಂದು ಕರೆ ನೀಡಿದರು. ಇದನ್ನೂ ಓದಿ: ಸಿದ್ದರಾಮಯ್ಯನವರನ್ನು ಇಳಿಸಿದ್ರೆ ಕಾಂಗ್ರೆಸ್‌ ವಿರುದ್ಧ ಮತ – ಕುರುಬ ಸಂಘದಿಂದ ಎಚ್ಚರಿಕೆ

ಸಮಾಜ ನಿಯಂತ್ರಿಸುವ ಉನ್ನತ ಸ್ಥಾನದಲ್ಲಿ ಎಲ್ಲಾ ಸಮುದಾಯಗಳಿಗೆ ಪ್ರಾತಿನಿಧ್ಯ ಸಿಗಬೇಕು. ಕಾರ್ಯಾಂಗ, ನ್ಯಾಯಾಂಗದಲ್ಲಿ ಪ್ರಬಲ ಸಮುದಾಯವರೇ ಇದ್ದಾರೆ. ಮಾಧ್ಯಮದಲ್ಲೂ ಮೇಲ್ವರ್ಗದವರೇ ಇದ್ದಾರೆ. ಉದ್ಯಮಿ, ಕೋಟ್ಯಧಿಪತಿ ಪಟ್ಟಿಯಲ್ಲಿ ಹಿಂದುಳಿದ ವರ್ಗದವರು ಇಲ್ಲ. ನಾವು ಅವರ ಸ್ಥಾನದಲ್ಲಿ ಕುಳಿತಾಗ ನಿಜವಾದ ಸಮಾನತೆ ಸಿಕ್ಕಂತಾಗುತ್ತದೆ. ಇದಕ್ಕಾಗಿ ನಾವು ಜಾಗೃತರಾಗಬೇಕು. ಇದಕ್ಕೆ ನಾವು ಶಿಕ್ಷಣ ಪಡೆದು ಶಿಕ್ಷಿತರಾಗಬೇಕು ಎಂದು ಹೇಳಿದರು.

TAGGED:DK ShivakumarpoliticssiddaramaiahYathindra siddaramaiahಡಿಕೆ ಶಿವಕುಮಾರ್ಯತೀಂದ್ರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Tumakuru Narcotic Pill Sale 6 Arrested
Crime

ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆ ಮಾರಾಟಕ್ಕೆ ಯತ್ನ – 6 ಮಂದಿ ಅರೆಸ್ಟ್

Public TV
By Public TV
38 minutes ago
Noida Workers Protest Arrest
Latest

ನೋಯ್ಡಾ ಹಿಂಸಾತ್ಮಕ ಪ್ರತಿಭಟನೆ ಹಿಂದಿನ ಮಾಸ್ಟರ್‌ಮೈಂಡ್‌ ತಮಿಳುನಾಡಿನಲ್ಲಿ ಅರೆಸ್ಟ್‌

Public TV
By Public TV
41 minutes ago
Vinay Kulkarni 2
Crime

ಯೋಗೇಶ್ ಗೌಡ ಹತ್ಯೆ ಕೇಸ್; ಪರಸ್ಪರ 57 ಬಾರಿ ಮೊಬೈಲ್ ಕರೆ ಮಾಡಿ ಕುಲಕರ್ಣಿ-ಮುತ್ತಗಿ ಮಾತುಕತೆ

Public TV
By Public TV
1 hour ago
Manipal County Road Man Suspect Death
Bengaluru City

ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
1 hour ago
Bengaluru Yelahanka Businessman Arrested for Blackmailing And Raping Female Customs Officer
Bengaluru City

ಪ್ರೀತಿ, ಮದುವೆ ಹೆಸರಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಗಳೊಂದಿಗೆ ದೈಹಿಕ ಸಂಪರ್ಕ – 50 ಜನರಿಗೆ ಕೃಪಾಲನಿ ಬ್ಲ್ಯಾಕ್‌ಮೇಲ್

Public TV
By Public TV
2 hours ago
Crime 2
Crime

ಕೀವ್‌ನ ಸೂಪರ್‌ಮಾರ್ಕೆಟ್‌ನಲ್ಲಿ ಬಂದೂಕುಧಾರಿಯಿಂದ ಗುಂಡಿನ ದಾಳಿ – 6 ಮಂದಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?