– ಈಗಿನ ಪರಿಸ್ಥಿತಿ ನೋಡಿದ್ರೆ ಸಿದ್ದರಾಮಯ್ಯ ಅವ್ರೇ 5 ವರ್ಷ ಸಿಎಂ
ಮೈಸೂರು: 5 ವರ್ಷ ಸಿದ್ದರಾಮಯ್ಯ ಸಿಎಂ ಆಗಿ ಇರಬೇಕು. ರಾಜ್ಯಕ್ಕೆ ಒಳ್ಳೆಯದಾಗುತ್ತೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿದ್ದಾರೆ.
ನವೆಂಬರ್ ಕ್ರಾಂತಿ ವಿಚಾರದ ಬಗ್ಗೆ ಮೈಸೂರಿನಲ್ಲಿ (Mysuru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ರಾಂತಿ ಬಗ್ಗೆ ನಂಗೆ ಗೊತ್ತಿಲ್ಲ. ತಂದೆಯವರು ಕೊಟ್ಟಿರುವ ಮಾಹಿತಿಯ ಪ್ರಕಾರ ಹೈಕಮಾಂಡ್ ಆಗ್ಲಿ ಬೇರೆ ನಾಯಕರಾಗಲಿ ಯಾರು ಕೂಡ ನವೆಂಬರ್ ಆದ ಮೇಲೆ ಅಧಿಕಾರ ಬಿಡಿ ಎಂದು ಹೇಳಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕೃತಿಕಾ ಕೊಲೆ ಕೇಸ್ | ಜುಲೈನಲ್ಲೇ ಕೆಲಸ ಬಿಟ್ಟಿದ್ದ ಕಿಲ್ಲರ್ ಡಾಕ್ಟರ್ – ವಿಕ್ಟೋರಿಯಾ ಆಸ್ಪತ್ರೆ ಸ್ಪಷ್ಟನೆ
ಇವರೆಲ್ಲಾ ಯಾವ ಕ್ರಾಂತಿ ಬಗ್ಗೆ ಮಾತನಾಡುತ್ತಿದ್ದಾರೆ ನನಗೆ ಗೊತ್ತಿಲ್ಲ. ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಈಗಿನ ಪರಿಸ್ಥಿತಿ ನೋಡಿದ್ರೆ ನಮ್ಮ ತಂದೆ 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
.
ಸಿದ್ದರಾಮಯ್ಯ ಅವರಿಗೆ ಶಾಸಕರ ಬೆಂಬಲ ಇದೆ. ಇಲ್ಲ ಅಂದಿದ್ರೆ ಶಾಸಕರು ಸುಮ್ಮನೆ ಇರ್ತಿದ್ರಾ. ಹೈಕಮಾಂಡ್ ಹೋಗಿ ದೂರು ಕೊಡುತ್ತಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ಒಬಿಸಿ ಮೀಸಲಾತಿ ಏರಿಸಿದ್ದ ತೆಲಂಗಾಣಕ್ಕೆ ಭಾರೀ ಹಿನ್ನಡೆ – ಸುಪ್ರೀಂನಲ್ಲಿ ಅರ್ಜಿ ವಜಾ