ಚಾಮರಾಜನಗರ: ರಾಜಕೀಯ ವೈರಿಗಳ ಪುತ್ರರಿಂದ ಇಂದು ಜಂಟಿ ಪ್ರಚಾರ ನಡೆಯಲಿದ್ದು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಮತ್ತು ಸಚಿವ ಜಿ.ಟಿ.ದೇವೆಗೌಡ ಪುತ್ರ ಹರೀಶ್ ಗೌಡ ದೋಸ್ತಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದಾರೆ.
ಮೈಸೂರಿನ ಜನತಾ ನಗರದ ಮಹದೇಶ್ವರ ದೇವಾಲಯದಿಂದ ಪ್ರಚಾರ ಆರಂಭಿಸಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಜಿದ್ದಾ ಜಿದ್ದಿನ ಕಣವಾಗಿತ್ತು. ಹೀಗಾಗಿ ಕಳೆದ ಚುನಾವಣೆ ಮುನಿಸು ಮರೆತು ದೋಸ್ತಿ ಅಭ್ಯರ್ಥಿ ಪರ ಜಂಟಿ ಪ್ರಚಾರವನ್ನು ಮಾಡುತ್ತಿದ್ದಾರೆ.
Advertisement
Advertisement
ಈ ಬಾರಿ ಕಾಂಗ್ರೆಸ್ ಜೆಡಿಎಸ್ ಮೈತ್ರಿಯಾಗಿದೆ. ಹೀಗಾಗಿ ನಾವು ನಮ್ಮ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದೇವೆ. ನಮ್ಮ ತಂದೆ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿದ್ದೇವೆ. ಎಲ್ಲರು ಮೈತ್ರಿ ಅಭ್ಯರ್ಥಿ ಪರ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ತಂದೆ ಸಿದ್ದರಾಮಯ್ಯ ಅವರು ವಿರುದ್ಧವಾಗಿ ಸ್ಪರ್ಧೆ ಮಾಡಿದ್ದರು. ಈಗ ಮೈತ್ರಿ ಅಭ್ಯರ್ಥಿ ಪರ ಮಾಡಬೇಕು ಎಂದು ವರಿಷ್ಠರು ತೀರ್ಮಾನ ಮಾಡಿದ್ದಾರೆ. ನಾವು ಎಲ್ಲವನ್ನು ಮರೆತು ಈ ಚುನಾವಣೆಯಲ್ಲಿ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಮೈಸೂರಿನಲ್ಲಿ ಜಿ.ಟಿ.ದೇವೇಗೌಡ ಪುತ್ರ ಹರೀಶ್ ಗೌಡ ಹೇಳಿದ್ದಾರೆ.
Advertisement
Advertisement
ನಾನು ವರುಣ ಮತ್ತು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದೇವೆ. ವರುಣದಲ್ಲಿ ದೃವನಾರಾಯಣ್ ಪರ ಒಳ್ಳೆಯ ಅಭಿಪ್ರಾಯ ಇದೆ. ಮೊದಲು ಮೈತ್ರಿ ವಿಚಾರವಾಗಿ ಸಣ್ಣಪುಟ್ಟ ಗೊಂದಲ ಇತ್ತು. ಇದೀಗ ಜಂಟಿ ಸುದ್ದಿಗೋಷ್ಠಿ ನಡೆಸುವ ಮೂಲಕ ಎಲ್ಲವು ಬಗೆಹರಿದಿದೆ. ಪಕ್ಷಗಳಲ್ಲಿ ಯಾವುದೇ ಗೊಂದಲ ಇಲ್ಲ. 14 ರಂದು ಸಿದ್ದರಾಮಯ್ಯ ಹಾಗೂ ಜಿ.ಟಿ.ದೇವೆಗೌಡರು ಜಂಟಿಯಾಗಿ ಪ್ರಚಾರ ಮಾಡುತ್ತಾರೆ. ಪ್ರಧಾನಿ ಮೋದಿ ಆಗಮನದಿಂದ ಯಾವುದೇ ಬದಲಾವಣೆಯಾಗಲ್ಲ. ಮೋದಿ ಹೇಳುವುದೆಲ್ಲ ಸುಳ್ಳು ಎಂದು ಜನರಿಗೆ ಗೊತ್ತಿದೆ ಎಂದು ಮೈಸೂರಿನಲ್ಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.