– ತೈಲ ಬೆಲೆ ಏರಿಕೆಗೆ ಬಿಜೆಪಿ ಕಾರಣ ಎಂದ ಯತೀಂದ್ರ
ಮೈಸೂರು: ತಪ್ಪು ಯಾರೇ ಮಾಡಿದರೂ ತಪ್ಪೇ. ಪೊಲೀಸರು ಸೂರಜ್ ರೇವಣ್ಣ (Suraj Revanna) ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ತಿಳಿಸಿದ್ದಾರೆ.
ಸೂರಜ್ ರೇವಣ್ಣ ಬಂಧನದ ಕುರಿತು ಮೈಸೂರಿನಲ್ಲಿ (Mysuru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೈಂಗಿಕ ದೌರ್ಜನ್ಯದ ಬಗ್ಗೆ ಯುವಕನೊಬ್ಬ ದೂರು ಕೊಟ್ಟಿದ್ದಾನೆ. ಪೊಲೀಸರು ತನಿಖೆ ಮಾಡುತ್ತಿದ್ದಾರೆ. ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ. ಇದರಲ್ಲಿ ಯಾವುದೇ ಷಡ್ಯಂತ್ರ ಇಲ್ಲ ಎಂದರು. ಇದನ್ನೂ ಓದಿ: ಸೂರಜ್ ಪ್ರಕರಣ ರಾಜಕೀಯ ಪ್ರೇರಿತ ಎಂಬುದು ಗೊತ್ತಿಲ್ಲ, ಸಿಐಡಿ ತನಿಖೆ ಮಾಡುತ್ತೆ: ಪರಮೇಶ್ವರ್
ತೈಲ ಬೆಲೆ ಏರಿಕೆಗೆ ಬಿಜೆಪಿ ಕಾರಣ:
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ (Petrol Diesel Price Hike) ವಿಚಾರವಾಗಿ ಪ್ರತಿಕ್ರಿಯಿಸಿ, ಪೆಟ್ರೋಲ್ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ಮಾಡುವುದಕ್ಕೆ ಯಾವುದೇ ನೈತಿಕ ಹಕ್ಕಿಲ್ಲ. ದೇಶದಲ್ಲಿ ತೈಲ ಬೆಲೆ ಏರಿಕೆಯಾಗಲು ಬಿಜೆಪಿಯೇ ಕಾರಣ. ಚುನಾವಣೆ ಸಂದರ್ಭದಲ್ಲಿ ಕಡಿಮೆ ಮಾಡಿದರು. ಇವಾಗ ಬೆಲೆ ಏರಿಕೆ ಮಾಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಸೂರಜ್ ರೇವಣ್ಣ ಪ್ರಕರಣ ಸಿಐಡಿ ತನಿಖೆಗೆ – ರಾಜ್ಯ ಸರ್ಕಾರ ಆದೇಶ
ಚನ್ನಪಟ್ಟಣ ಉಪಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಚನ್ನಪಟ್ಟಣ ಗ್ರೌಂಡ್ ರಿಯಾಲಿಟಿ ನನಗೆ ಗೊತ್ತಿಲ್ಲ. ನಮ್ಮ ಪಕ್ಷದ ವರಿಷ್ಠರು, ಸ್ಥಳೀಯ ಕಾರ್ಯಕರ್ತರು ಕುಳಿತು ಅಭ್ಯರ್ಥಿ ಆಯ್ಕೆ ಮಾಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ತಪ್ಪು ಮಾಡಿದ್ದರೆ ಸೂರಜ್ ಯಾಕೆ ದೂರು ಕೊಡೋಕೆ ಹೋಗ್ತಿದ್ರು? – ಹೆಚ್.ಡಿ ರೇವಣ್ಣ ಪ್ರಶ್ನೆ