ಬೆಂಗಳೂರು: ಮುಖ್ಯಮಂತ್ರಿಯಾಗಲು ಎರಡೂವರೆ ಸಾವಿರ ಕೋಟಿ ಬೇಕು ಎಂಬ ಬಿಜೆಪಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಚಾರವಾಗಿ ತನಿಖೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಯತ್ನಾಳ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯತ್ನಾಳ್ ಅವರು, ಮುಖ್ಯಮಂತ್ರಿಯಾಗಲೂ ಎರಡೂವರೆ ಸಾವಿರ ಕೋಟಿ ಬೇಕು. ಮಂತ್ರಿ ಆಗಲು ನೂರು ಕೋಟಿ ಬೇಕು ಅಂತ ಬಹಿರಂಗವಾಗಿ ಹೇಳಿದ್ದಾರೆ. ಹೀಗಾಗಿ ಇವರ ಈ ಹೇಳಿಕೆ ಬಗ್ಗೆ ರಾಷ್ಟ್ರಮಟ್ಟದಲ್ಲಿ ತನಿಖೆ ಆಗಬೇಕು ಅಂತ ಒತ್ತಾಯಿಸಿದ್ದಾರೆ. ಇದನ್ನೂ ಓದಿ; 2,500 ಕೋಟಿ ಕೊಡಿ ನಿಮ್ಮನ್ನೂ ಸಿಎಂ ಮಾಡ್ತೀವಿ ಅಂದ್ರು: ಬಾಂಬ್ ಸಿಡಿಸಿದ ಯತ್ನಾಳ್
Advertisement
Advertisement
ಬಿಜೆಪಿ ಸರ್ಕಾರದಲ್ಲಿ ಎಲ್ಲಾ ಇಲಾಖೆಯಲ್ಲೂ ರೇಟ್ ಫಿಕ್ಸ್ ಆಗಿದೆ. ಕೆಪಿಎಸ್‍ಸಿ, ಪಿಎಸ್‍ಐ, ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಯಲ್ಲಿ ರೇಟ್ ಫಿಕ್ಸ್ ಆಗಿದೆ. ಈ ಸಮಯದಲ್ಲಿ ಅವರದ್ದೇ ಪಕ್ಷದ ಶಾಸಕರು ಇಂತಹ ದೊಡ್ಡ ಆರೋಪ ಮಾಡಿದ್ದಾರೆ. ಕೂಡಲೇ ಈ ಬಗ್ಗೆ ಕೇಸ್ ದಾಖಲಿಸಿಕೊಂಡು ತನಿಖೆ ಮಾಡಬೇಕು ಎಂದಿದ್ದಾರೆ.
Advertisement
Advertisement
ಯತ್ನಾಳ್ ಸಾಮಾನ್ಯ ವ್ಯಕ್ತಿ ಅಲ್ಲ. ಅವರು ಕೇಂದ್ರದ ಮಾಜಿ ಸಚಿವರು, ಹಾಲಿ ಶಾಸಕರು. ಅವರ ಮಾತನ್ನು ಯಾರು ನಿರಾಕರಣೆ ಮಾಡಬಾರದು. ಯತ್ನಾಳ್ ಹೇಳಿಕೆ ರಾಷ್ಟ್ರೀಯ ಮಟ್ಟದಲ್ಲಿ ತನಿಖೆ ಆಗಬೇಕು. ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗಬೇಕು. ಇದೊಂದು ರಾಷ್ಟ್ರಮಟ್ಟದ ವಿಚಾರ. ಈ ಬಗ್ಗೆ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಮಾತನಾಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಕೂಡಲೇ ಯತ್ನಾಳ್ ಹೇಳಿಕೆ ಬಗ್ಗೆ ತನಿಖೆ ನಡೆಸಬೇಕು ಅಂತ ಆಗ್ರಹ ಮಾಡಿದ್ದಾರೆ. ಇದನ್ನೂ ಓದಿ; ವಿಜಯಪುರ ಹೆಚ್ಚು ಕಡಿಮೆ ಪಾಕಿಸ್ತಾನ ಇದ್ದಂಗೆ ಇದೆ: ಯತ್ನಾಳ್