ಕೋಲಾರ: ಮನೆ ಬಳಿಯ ಸಂಪ್‌ಗೆ (Sump) ಬಿದ್ದು ಮಗು (Child) ಸಾವನ್ನಪ್ಪಿದ ಘಟನೆ ಕೋಲಾರದ (Kolar) ಕಾರಂಜಿಕಟ್ಟೆ ಬಡಾವಣೆಯ 10ನೇ ಕ್ರಾಸ್‌ನಲ್ಲಿ ನಡೆದಿದೆ.
ನಗರದ ವಿಕಾಸ್ ಹಾಗೂ ಹಂಸ ದಂಪತಿ ಪುತ್ರ ಯಶಸ್ (3) ಮೃತಪಟ್ಟ ಮಗು. ಮಗು ಅಂಗಳದಲ್ಲಿ ಆಟವಾಡುವಾಗ ಆಕಸ್ಮಿಕವಾಗಿ ಸಂಪ್‌ಗೆ ಬಿದ್ದಿದೆ. ಈ ವೇಳೆ ತಕ್ಷಣ ನೀರಿನಿಂದ ಮಗುವನ್ನು ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅಷ್ಟರಲ್ಲೇ ಮಗು ಮೃತಪಟ್ಟಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ದುರ್ಮರಣ
ಗಲ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರು | ಆಟವಾಡುತ್ತ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು
