ಹುಬ್ಬಳ್ಳಿ: ಕಾಂಗ್ರೆಸ್ಸಿನ 20 ಶಾಸಕರಲ್ಲಿ ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನವಿದ್ದು ಅವರು ರಾಜೀನಾಮೆ ಕೊಡಲು ಸಿದ್ಧರಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಾಂಬ್ ಸಿಡಿಸಿದ್ದಾರೆ
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಮತ್ತು ತುಮಕೂರಿನಲ್ಲಿ ಸೋಲುವ ಭಯದಲ್ಲಿ ಸಿಎಂ ಕುಮಾರಸ್ವಾಮಿ ಮತ್ತು ದೇವೇಗೌಡರು ರೆಸಾರ್ಟಿಗೆ ಹೋಗಿದ್ದಾರೆ ಎಂದು ವ್ಯಂಗ್ಯವಾಡಿದರು.
Advertisement
Advertisement
ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದ ಮೇಲೆ ಕಾಂಗ್ರೆಸ್ ಪಕ್ಷದ 20 ಜನ ಶಾಸಕರಿಗೆ ಅಸಮಾಧಾನವಿದ್ದು ಅವರು ಮುಂದಿನ ಕೆಲವು ದಿನಗಳಲ್ಲಿ ರಾಜೀನಾಮೆ ನೀಡುವ ಸಾಧ್ಯತೆ ಇದೆ. ನಮ್ಮ ಪಕ್ಷದಲ್ಲಿ ಆಗಲೇ 104 ಶಾಸಕರು ಇದ್ದೇವೆ. 3 ಜನ ಪಕ್ಷೇತರ ಶಾಸಕರು ನಮಗೆ ಬೆಂಬಲ ನೀಡುತ್ತಾರೆ. ಈಗ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದರೆ ಇದು ನಮ್ಮ ಪಕ್ಷಕ್ಕೆ ಸರ್ಕಾರ ರಚನೆ ಮಾಡಲು ಸಹಾಯ ಆಗಲಿದೆ ಎಂದು ಯಡಿಯೂರಪ್ಪ ದೋಸ್ತಿ ಸರ್ಕಾರದ ಪತನದ ಬಗ್ಗೆ ಭವಿಷ್ಯ ನುಡಿದರು.
Advertisement
ಈ ಬಾರಿ ಮಂಡ್ಯ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರು ಗೆಲ್ಲುತ್ತಾರೆ. ತುಮಕೂರಿನಲ್ಲಿ ದೇವೇಗೌಡರಿಗೆ ಗೆಲ್ಲುವುದು ಕಷ್ಟವಾಗಿದೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸರಿಯಾಗಿಲ್ಲ ಎಂದು ಮೈತ್ರಿ ಸರ್ಕಾರದ ವಿರುದ್ಧ ಕಿಡಿಕಾರಿದರು.