ನವದೆಹಲಿ: ಬಿಎಸ್ ಯಡಿಯೂರಪ್ಪ ಅವರೇ ಕರ್ನಾಟಕದ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಸುದ್ದಿಸಂಸ್ಥೆಗೆ ಸಂದರ್ಶನ ನೀಡಿದ ಅವರು, ಮಿಷನ್ 150 ಪೂರ್ಣಗೊಳಿಸಲು ಬಿಎಸ್‍ವೈ ನೇತೃತ್ವದಲ್ಲೇ ಮುಂದಿನ ಚುನಾವಣೆಯನ್ನು ಬಿಜೆಪಿ ಎದುರಿಸಲಿದೆ ಎಂದು ತಿಳಿಸಿದರು.
ಈಶ್ವರಪ್ಪ ಮತ್ತು ಯಡಿಯೂರಪ್ಪ ನಡುವಿನ ಆಂತರಿಕ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಬಿಎಸ್‍ವೈ ಬದಲಾಗಿ ಬೇರೊಬ್ಬ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಸಾಧ್ಯತೆಯಿದೆ ಎನ್ನುವ ಮಾತುಗಳು ಹರಿದಾಡುತಿತ್ತು. ಈಗ ಅಮಿತ್ ಶಾ ಸ್ಪಷ್ಟವಾಗಿ ತಿಳಿಸುವ ಮೂಲಕ ಈ ಎಲ್ಲ ಗೊಂದಲಗಳಿಗೆ ಪೂರ್ಣವಿರಾಮ ಹಾಕಿದ್ದಾರೆ.
ಮತ್ತೊಮ್ಮೆ ಕಮಲವನ್ನು ಅರಳಿಸಲು ಪಕ್ಷ ಸಂಘಟನೆಗಾಗಿ ಶೀಘ್ರದಲ್ಲೇ ಕರ್ನಾಟಕಕ್ಕೆ ಅಮಿತ್ ಶಾ ಬರಲಿದ್ದಾರೆ.