ಸಿದ್ದರಾಮಯ್ಯ ಆರೋಪಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ: ಬಿಎಸ್‍ವೈ

Public TV
1 Min Read
BSY 1

ದಾವಣಗೆರೆ: ಸಿದ್ದರಾಮಯ್ಯ ಆರೋಪಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಅವರು ಹರಿಹಾಯ್ದಿದ್ದಾರೆ.

Siddaramaiah 1

ಈ ಬಾರಿ ಉಪ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಬಹಳಷ್ಟು ಕಸರತ್ತು ನಡೆಸುತ್ತಿದ್ದು, ಮೂರು ಪಕ್ಷದ ನಾಯಕರುಗಳು ಪಕ್ಷದ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.  ಇದನ್ನೂ ಓದಿ: ಕಾಂಗ್ರೆಸ್ ಸದಸ್ಯತ್ವ ಬೇಕಾದ್ರೆ ಷರತ್ತು ಅನ್ವಯ

ಈ ಮಧ್ಯೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಎಸ್‍ವೈ ಅವರು, ಹಾನಗಲ್, ಸಿಂದಗಿಯಲ್ಲಿ ದೊಡ್ಡ ಅಂತರದಲ್ಲಿ ನಾವು ಗೆಲ್ಲುತ್ತೇವೆ. ಸಿದ್ದರಾಮಯ್ಯ ಏನೇ ಆರೋಪ ಮಾಡಿದರೂ ಗೆಲ್ಲುವುದಿಲ್ಲ. ಅವರ ಆರೋಪಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಕೊನೆಯಲ್ಲಿ ಫಲಿತಾಂಶ ಬಿಜೆಪಿ ಪರವಾಗಿ ಬರುತ್ತದೆ ಎಂದು ಹೇಳಿದ್ದಾರೆ.

modi

ನಮ್ಮೆಲ್ಲ ನಾಯಕರು ಎರಡು ಕ್ಷೇತ್ರದಲ್ಲಿ ಠಿಕಾಣಿ ಹೂಡಿದ್ದಾರೆ. ಎರಡು ಕ್ಷೇತ್ರದಲ್ಲಿ ದೊಡ್ಡ ಸಭೆ ನಡೆದಿದೆ. ಸಂಪೂರ್ಣವಾಗಿ ಜನ ಮೋದಿ ಅವರ ಪಕ್ಷಕ್ಕೆ ಬೆಂಬಲಿಸಲು ತೀರ್ಮಾನಿಸಿದ್ದಾರೆ. ಸಿದ್ದರಾಮಯ್ಯರ ಅಪಪ್ರಚಾರಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ವಿಪಕ್ಷ ಅಂದ ಮೇಲೆ ಅಪಪ್ರಚಾರ ನಡೆಸುವುದು ಸ್ವಾಭಾವಿಕ. ಆದರೆ ಸಿದ್ದರಾಮಯ್ಯ ಏನೇ ಮಾತಾನಾಡಿದರೂ, ಫಲಿತಾಂಶ ಬಂದ ಮೇಲೆ ಅವರಿಗೆ ಗೊತ್ತಾಗುತ್ತದೆ ಎಂದು ನುಡಿದಿದ್ದಾರೆ.  ಇದನ್ನೂ ಓದಿ: ಠಾಣೆ ಮೆಟ್ಟಿಲೇರಿದ ಕಸ ಫೈಟ್ – ಪ್ರೊಡ್ಯೂಸರ್ ಪುತ್ರ, ಪತ್ನಿ ವಿರುದ್ಧ FIR

Share This Article