ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ (Loksabha Election) ಜೆಡಿಎಸ್ (JDS) ಹಾಗೂ ಬಿಜೆಪಿ (BJP) ಮೈತ್ರಿ ಕುರಿತು ಇದೀಗ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ (B. S Yediyurappa) ಕೂಡ ಸುಳಿವೊಂದನ್ನು ಕೊಟ್ಟಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ- ಜೆಡಿಎಸ್ ಮೈತ್ರಿಗೆ ಅಮಿತ್ ಶಾ ಒಪ್ಪಿದ್ದಾರೆ. ನಾಲ್ಕು ಸ್ಥಾನ ಬಿಟ್ಟುಕೊಡಲು ಅವರು ಹೇಳಿದ್ದಾರೆ. ಜೆಡಿಎಸ್ ಜೊತೆಗಿನ ಮೈತ್ರಿಯಿಂದ ನಮಗೆ ಶಕ್ತಿ ಬರುತ್ತೆ ಎಂದು ಯಡಿಯೂರಪ್ಪ ಹೇಳಿದರು.
Advertisement
Advertisement
ಮೂಲಗಳ ಪ್ರಕಾರ ಕೇಂದ್ರ ಗೃಹ ಸಚಿವ ಅಮಿತ್ ಶಾ (Amitshah) ಅವರನ್ನು ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು (HD Devegowda) ಭೇಟಿ ಮಾಡಿದ್ದಾರೆ. ಇತ್ತೀಚೆಗೆ ಪ್ರಜ್ವಲ್ ರೇವಣ್ಣ ಅವರ ಕೋರ್ಟ್ ಕೇಸ್ ಗೆ ಸಂಬಂಧಿಸಿದಂತೆ ವಕೀಲರ ಭೇಟಿಗೆ ತೆರಳಿದ್ದ ದೇವೇಗೌಡರು, ಇದೇ ವೇಳೆ ರಹಸ್ಯವಾಗಿ ಅಮಿತ್ ಶಾ ಜೊತೆ ಚರ್ಚೆ ನಡೆಸಿದ್ದಾರೆ. ಉಭಯ ನಾಯಕರ ನಡುವೆ ಮೈತ್ರಿ ಬಗ್ಗೆ ಅನೌಪಚಾರಿಕವಾಗಿ ಚರ್ಚೆ ನಡೆದಿದೆ ಎನ್ನಲಾಗಿದೆ. ಇದನ್ನೂ ಓದಿ: ನಿನ್ನನ್ನು ಚಂದ್ರಯಾನ-4ರಲ್ಲಿ ಕಳುಹಿಸುತ್ತೇನೆ: ಮಹಿಳೆ ಮನವಿಗೆ ಖಟ್ಟರ್ ಹಾಸ್ಯ
Advertisement
Advertisement
ಏನು ಚರ್ಚೆ ನಡೆದಿದೆ?: ಹಾಸನ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರದಲ್ಲಿ ಜೆಡಿಎಸ್‍ಗೆ ಹೆಚ್ಚು ಶಕ್ತಿಯಿದೆ. ಈ ಭಾಗದಲ್ಲಿ ಬಿಜೆಪಿ ಕೈ ಜೋಡಿಸಬೇಕು. ಉಳಿದ ಕಡೆ ನಿಮಗೆ ಬೆಂಬಲ ನೀಡುತ್ತೇವೆ ಎಂದು ತಿಳಿಸಿದ್ದಾರೆ. ದೇವೇಗೌಡರ ಬೇಡಿಕೆಗೆ ಒಪ್ಪಿಗೆ ಸಿಕ್ಕಿದರೆ ಸೆ.10ರ ಸಮಾವೇಶದ ಬಳಿಕ ಜೆಡಿಎಸ್ ನಿರ್ಧಾರ ಪ್ರಕಟವಾಗಲಿದೆ.
Web Stories