Bengaluru RuralDistrictsKarnatakaLatestMain Post

ಕಾಂಗ್ರೆಸ್‌ಗೆ ಅಡ್ರೆಸ್ ಎಲ್ಲಿದೆ, ಅದರ ನಾಯಕರು ಯಾರು?: ಯಡಿಯೂರಪ್ಪ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್‌ಗೆ ಅಡ್ರೆಸ್ ಎಲ್ಲಿದೆ? ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡುಗು. ಅದರ ನಾಯಕ ಯಾರು? ಹೀಗೆಂದು ಮಾಜಿ ಸಿಎಂ ಯಡಿಯೂರಪ್ಪ ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ, ಇಡೀ ದೇಶದಲ್ಲಿ ನರೇಂದ್ರ ಮೋದಿಯವರಿಂದ ಬಿಜೆಪಿ ಗಾಳಿ ಬೀಸುತ್ತಿದೆ. ಕಾಂಗ್ರೆಸ್ ಎಲ್ಲಿದೆ? ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ 403 ಸೀಟುಗಳಲ್ಲಿ ಕಾಂಗ್ರೆಸ್ 397 ಮಂದಿ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ. ಹೀಗಾಗಿ ಕಾಂಗ್ರೆಸ್ ಗೆ ಎಲ್ಲಿದೆ ಅಡ್ರೆಸ್ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಮಸೀದಿ, ಮಂದಿರಗಳು ನಿಯಮ ಉಲ್ಲಂಘನೆ ಮಾಡಿದ್ರೆ ಕಠಿಣ ಕ್ರಮದ ಎಚ್ಚರಿಕೆ: ಪ್ರವೀಣ್ ಸೂದ್

ಮುಳುಗುತ್ತಿದೆ ಕಾಂಗ್ರೆಸ್‌ನ ಹಡುಗು. ಯಾರಿದ್ದಾರೆ ಅವರಿಗೆ ನಾಯಕರು? ಆದರೆ ಕರ್ನಾಟಕದಲ್ಲಿ ಸ್ವಲ್ಪ ಉಸಿರಾಡುತ್ತಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆ ಬಳಿಕ ಕಾಂಗ್ರೆಸ್ ನೆಲಸಮ ಆಗಲಿದೆ. ಅದಕ್ಕಾಗಿ ಕಾರ್ಯಕರ್ತರು ಹೋರಾಟ ಮಾಡಬೇಕು. ಕಾಂಗ್ರೆಸ್ ಮುಕ್ತ ಕರ್ನಾಟಕ, ಭಾರತ ಮಾಡಲು ಸಿದ್ಧರಾಗಿ ಎಂದು ಬಿಎಸ್‌ವೈ ಕರೆ ನೀಡಿದರು. ಇದನ್ನೂ ಓದಿ: ಕರ್ನಾಟಕದಲ್ಲೂ ಬುಲ್ಡೋಜರ್ ಕಾನೂನು ಬರಲಿ: ಸಚಿವ ಆರ್.ಅಶೋಕ್

ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಮನೆ ಮನೆಗೆ ತಲುಪಿಸಿದರೆ ಸಾಕು. ಈ ದೇಶ ಈಗ ಭ್ರಷ್ಟಾಚಾರ ಮುಕ್ತವಾಗಿದೆ. ಮೋದಿ ದೇಶಕ್ಕೆ, ಸಾಮಾಜಿಕ, ಆರ್ಥಿಕ, ಕೃಷಿಕರಿಗೆ ಭದ್ರತೆ ನೀಡಿದ್ದಾರೆ. ಮಹಿಳಾ ಸಬಲೀಕರಣದ ಬಗ್ಗೆ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರ ಯೋಜನೆಗಳನ್ನು ಜನರಿಗೆ ತಲುಪಿಸೋಣ ಎಂದರು.

Leave a Reply

Your email address will not be published.

Back to top button