Bengaluru City
ಸಮಸ್ಯೆ ಪರಿಹಾರಕ್ಕೆ ಬಿಎಸ್‍ವೈಗೆ ಭಿನ್ನರಿಂದ ಡೆಡ್‍ಲೈನ್ ಫಿಕ್ಸ್

ಬೆಂಗಳೂರು: ಪಕ್ಷದ ಒಳಗಿನ ಎಲ್ಲ ಆಂತರಿಕ ಸಮಸ್ಯೆಯ ಪರಿಹಾರಕ್ಕೆ ಭಿನ್ನರು ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರಿಗೆ ಡೆಡ್‍ಲೈನ್ ನೀಡಿದ್ದಾರೆ.
ತುಮಕೂರು ಜಿಲ್ಲೆಯ ಬಿಜೆಪಿ ಪಕ್ಷದ ವತಿಯಿಂದ ಅರಮನೆ ಮೈದಾನದಲ್ಲಿ ಗುರುವಾರ ಆಯೋಜನೆಗೊಂಡಿದ್ದ ‘ಸಂಘಟನೆ ಉಳಿಸಿ ಸಮಾವೇಶ’ದಲ್ಲಿ ಮೇ 10 ರೊಳಗೆ ಎಲ್ಲ ಸಮಸ್ಯೆ ಪರಿಹರಿಸಬೇಕು. ಪಕ್ಷದ ವರಿಷ್ಠರು ಸಮಸ್ಯೆ ಇತ್ಯರ್ಥ ಪಡಿಸಬೇಕು. ಇಲ್ಲವಾದರೆ ಮೇ 20 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು.
ದೇಶದಲ್ಲಿ ಸರ್ವಾಧಿಕಾರಿ ಧೋರಣೆ ಉಳಿದ ಉದಾಹರಣೆಗಳಿಲ್ಲ. ನಾವೆಲ್ಲರೂ ದೆಹಲಿಗೆ ರೈಲಿನಲ್ಲಿ ಹೋಗಲು ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಬೇಕು. ಭೇಟಿಗೆ ಅವಕಾಶ ಸಿಗದಿದ್ದರೂ ಇರಬಹುದು. ಈಗಿನಿಂದಲೇ ಹಣಜೋಡಿಸಿಕೊಳ್ಳಲು ಪ್ರಯತ್ನಿಸಿ. ನಾವು ಮೆಸೇಜ್ ಕೊಟ್ಟ ತಕ್ಷಣ ಸಿದ್ಧರಾಗಿ ಎಂದು ಕಾರ್ಯಕರ್ತರಿಗೆ ಭಾನುಪ್ರಕಾಶ್ ಕರೆ ನೀಡಿದರು.
ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವರಾದ ಸೊಗಡು ಶಿವಣ್ಣ, ರವೀಂದ್ರನಾಥ್, ಪರಿಷತ್ ಸದಸ್ಯ ಭಾನು ಪ್ರಕಾಶ್, ಸೋಮಣ್ಣ ಬೇವಿನಮರದ, ಮಾಜಿ ಶಾಸಕ ಸಾರ್ವಭೌಮ ಬಗಲಿ, ಮಾಜಿ ಪರಿಷತ್ ಸದಸ್ಯರಾದ ಶಿವಯೋಗಿ ಸ್ವಾಮಿ, ಸಿದ್ದರಾಜು, ಸಿದ್ರಾಮಣ್ಣ ಉಪಸ್ಥಿತರಿದ್ದರು. 25ಕ್ಕೂ ಹೆಚ್ಚು ಮುಖಂಡರು, 500 ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿದ್ದರು.
ಇದನ್ನೂ ಓದಿ: ನಾವು ತಂದೆ, ತಾಯಿಗೆ ಹುಟ್ಟಿದ ಜನ. ನಾವು ಪಕ್ಷ ಬಿಡಲ್ಲ, ಬೇರೆ ಪಕ್ಷ ಕಟ್ಟಲ್ಲ: ಬಿಎಸ್‍ವೈ ವಿರುದ್ಧ ಈಶ್ವರಪ್ಪ ಗುಡುಗು
ಇದನ್ನೂ ಓದಿ: ಬಿಜೆಪಿ ಸಂಘಟನಾ ಸಮಾವೇಶದಲ್ಲಿ ಬಿಎಸ್‍ವೈ-ಈಶ್ವರಪ್ಪ ಬೆಂಬಲಿಗರ ಮಾರಾಮಾರಿ: ವಿಡಿಯೋ ನೋಡಿ
https://www.youtube.com/watch?v=qiwhK7ZPX5U
