ಬೆಂಗಳೂರು: (Bengaluru Rain) ರಾಜಧಾನಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ವರುಣಾರ್ಭಟ ಮುಂದುವರಿದಿದೆ. ನಗರದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಗರದಲ್ಲಿ ನಿನ್ನೆ ತಡರಾತ್ರಿಯಿಂದ ಮಳೆಯಾಗುತ್ತಿದೆ. ಇಂದು ಬೆಳಗ್ಗೆ ಕೂಡ ಭಾರೀ ಮಳೆಯಾಯಿತು. ಇನ್ನೂ ಎರಡು-ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಫುಟ್‌ಪಾತ್ ಮೇಲೆ ಚಲಾಯಿಸಿದ ಚಾಲಕ – ಅಪಘಾತಕ್ಕೆ ನಿವೃತ್ತ ಯೋಧ ಬಲಿ
Advertisement
Advertisement
ಹವಾಮಾನ ಇಲಾಖೆ ಮುನ್ಸೂಚನೆಯಂತೆ ನಗರದ ಹಲವೆಡೆ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಮಲ್ಲೇಶ್ವರಂ ಸೇರಿದಂತೆ ನಗರದ ವಿವಿಧೆಡೆ ಮಳೆಯಾಗಿದ್ದು, ಜನ ಪರದಾಡುವಂತಾಯಿತು.
Advertisement
Advertisement
ಸೆಪ್ಟೆಂಬರ್ ಮಹಾಮಳೆಗೆ ಬೆಂಗಳೂರಿಗರು ರೋಸಿ ಹೋಗಿದ್ದಾರೆ. ಇನ್ನೊಂದಡೆ ಬಿಬಿಎಂಪಿಯಿಂದ ರಾಜಕಾಲುವೆ ಒತ್ತುವರಿ ತೆರವು ವಿಳಂಬವಾಗುತ್ತಿದೆ. ಇದರಿಂದ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಪರಿಣಾಮವಾಗಿ ಬೆಂಗಳೂರಿನ ಜನತೆ ಮಳೆಯ ಆತಂಕದಲ್ಲಿ ದಿನದೂಡುತ್ತಿದ್ದಾರೆ. ಇದನ್ನೂ ಓದಿ: 20 ವರ್ಷ ಆಡಳಿತ ನಡೆಸಿದ್ದ ಕಾಂಗ್ರೆಸ್‍ಗೆ ಮೀಸಲಾತಿ ಹೆಚ್ಚಿಸಲಾಗಿಲ್ಲ: ಮುನಿರತ್ನ