ಬೆಂಗಳೂರು: ಇಂದು ರಾಜ್ಯದ 6 ಜಿಲ್ಲೆಗಳಳಿಗೆ ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್ ಜಾರಿ ಮಾಡಿದ್ದು ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದೆ.
ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೀದರ್ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ಗಂಟೆಗೆ 30-40ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು ಕೆಲ ಜಿಲ್ಲೆಗಳಲ್ಲಿ ಮಿಂಚು ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಭಾರೀ ಮಳೆ – ಹಲವೆಡೆ ರಸ್ತೆಗಳು ಜಲಾವೃತ
ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಗಿರೀಶ್ ಮಟ್ಟಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಸಮೀರ್ ವಿರುದ್ಧ ಎಫ್‌ಐಆರ್ ದಾಖಲು
ರಾತ್ರಿ ಇಡೀ ಬೆಂಗಳೂರು ನಗರದಾದ್ಯಂತ ಮಳೆಯಾಗಿತ್ತು. ಇಂದು ಬೆಳಗ್ಗೆ ನಗರದ ಹಲವು ಕಡೆ ತುಂತುರು ಮಳೆಯಾಗಿದೆ.