ಮುಂಬೈ: ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ.
ಮುಂಜಾನೆ 4 ಗಂಟೆ ವೇಳೆ ಮುಂಬೈನಲ್ಲಿ ಕಪೂರನ್ನು ಬಂಧಿಸಿದ್ದು ಹಣ ಅವ್ಯವಹಾರ ಪ್ರಕರಣ ಸಂಬಂಧ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಆದರೆ ಬಂಧಿತ ರಾಣಾ ಕಪೂರ್ ಅಧಿಕಾರಿಗಳ ಪ್ರಶ್ನೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲವಂತೆ. ಇದನ್ನೂ ಓದಿ: ಯೆಸ್ ಬ್ಯಾಂಕ್‍ನಲ್ಲಿ ಎಸ್‍ಬಿಐ 10 ಸಾವಿರ ಕೋಟಿ ಹೂಡಿಕೆ
Advertisement
Advertisement
ಸದ್ಯದಲ್ಲೇ ಕಪೂರ್‍ನ ಅಧಿಕಾರಿಗಳು ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ. ಇತ್ತ ಯೆಸ್ ಬ್ಯಾಂಕ್ ಗ್ರಾಹಕರಿಗೆ ಕೊಂಚ ರಿಲೀಫ್ ಸಿಕ್ಕಿದೆ. ಬೇರೆ ಬ್ಯಾಂಕ್ ಎಟಿಎಂಗಳಲ್ಲಿ ಹಣ ಡ್ರಾಗೆ ಅವಕಾಶ ಮಾಡಿಕೊಡಲಾಗಿದೆ. ಆದರೆ ಯೆಸ್ ಬ್ಯಾಂಕ್ ಎಟಿಎಂಗಳಲ್ಲಿ ಹಣ ತೆಗೆಯಲು ಮಾತ್ರ ಅವಕಾಶ ಇಲ್ಲ ಎಂದು ಆರ್ ಬಿಐ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಡೋಂಟ್ ವರಿ, ನಿಮ್ಮ ಹಣ ಸೇಫ್ ಆಗಿದೆ- ಯೆಸ್ ಬ್ಯಾಂಕ್ ಠೇವಣಿದಾರರಿಗೆ ಸೀತಾರಾಮನ್ ಅಭಯ
Advertisement
Mumbai: Enforcement Directorate officials along with #YesBank founder Rana Kapoor leave from ED office; He will be produced before a Mumbai court later today pic.twitter.com/Re9VvaDtRe
— ANI (@ANI) March 8, 2020
Advertisement
ಕಾಳಧನ ಸಕ್ರಮ ತಡೆ ಕಾಯ್ದೆ (ಪಿಎಂಎಲ್‍ಎ) ಅಡಿಯಲ್ಲಿ ಕಪೂರ್ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದ್ದು, ದೇಶ ಬಿಟ್ಟು ಹೋಗದಂತೆ ತಡೆಯಲು ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಎಟಿಎಂ ಸ್ಥಗಿತ, ಫೋನ್ ಪೇ ಇಲ್ಲ, ವಿಥ್ ಡ್ರಾಗೆ ಮಿತಿ: ಯೆಸ್ ಬ್ಯಾಂಕ್ ಮೇಲೆ ನಿರ್ಬಂಧ ಹೇರಿದ್ದು ಯಾಕೆ?