ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಿಸುತ್ತಿದ್ದಂತೆ ಮಾಜಿ ಶಾಸಕ, ನಟ ಜಗ್ಗೇಶ್ ಟಿಕೆಟ್ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಜಗ್ಗೇಶ್ ಅವರು, ಭೈಎಲೆಕ್ಷನ್ ಬಂತು! 2018ರಲ್ಲಿ ಕಡೆಗಳಿಗೆ ಅಭ್ಯರ್ಥಿಯಾದ ನಾನು ಮಾಜಿ ಶಾಸಕ, ವಿಧಾನ ಪರಿಷತ್ ಸದಸ್ಯ. ತನು, ಮನ, ಧನ ಕಳೆದುಕೊಂಡು 9 ದಿನದಲ್ಲಿ 60,400 ಮತಗಳನ್ನು ಪಡೆದ ಅಭ್ಯರ್ಥಿ ನಾನು. ಮೌನವಾಗಿ ಇರಲೋ… ವಲಸೆ ಬಂದವರಿಗಾಗಿ ನಾನು ಪಕ್ಕ ಸರಿಯಲೋ..? ಇಲ್ಲಾ ಮೌನವಾಗಿ ತ್ಯಾಗಿಯಾಗಲೋ..? ಕಾಡಿನಲ್ಲಿ ಕಳೆದುಹೋದ ಮಗುವಂತಾಗಿರುವೆ ಎಂದು ಬರೆದುಕೊಂಡಿದ್ದಾರೆ.
Advertisement
ಭೈಎಲೆಕ್ಷನ್ ಬಂತು!
2019 ಕಡೆಘಳಿಗೆ ಅಭ್ಯರ್ಥಿಯಾದ ನಾನು ex-Mla/MLC ಆಗಿ! @narendramodi @RSS4India ತನುಮನಧನ ಕಳೆದುಕೊಂಡು! 9ದಿನದಲ್ಲಿ 60,400ಮತ ಪಡೆದ ಅಭ್ಯರ್ಥಿ ನಾನು!
ಮೌನವಾಗಿರಲೋ!ವಲಸೆ ಬಂದವರಿಗಾಗಿ ನಾನು ಪಕ್ಕ ಸರಿಯಲೋ?ಇಲ್ಲಾ ಮೌನವಾಗಿ ತ್ಯಾಗಿಯಾಗಲೋ!ಕಾಡಿನಲ್ಲಿ ಕಳೆದುಹೋದ ಮಗುವಂತಾಗಿರುವೆ!@blsanthosh @BJP4Karnataka
— ನವರಸನಾಯಕ ಜಗ್ಗೇಶ್ (@Jaggesh2) September 21, 2019
Advertisement
ಜಗ್ಗೇಶ್ ಅವರು 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಯಶವಂತಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ 59,308 ಮತಗಳನ್ನು ಪಡೆದು ಸೋತಿದ್ದರು. ಈ ವೇಳೆ ಭರ್ಜರಿ ಪೈಪೋಟಿ ನೀಡಿದ್ದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಸ್.ಟಿ.ಸೋಮಶೇರ್ 1,15,273 ಮತಗಳನ್ನು ಪಡೆದು ಗೆಲವು ಸಾಧಿಸಿದ್ದರು. ಜೆಡಿಎಸ್‍ನ ಅಭ್ಯರ್ಥಿ 1,04,562 ಮತಗಳನ್ನು ಗಳಿಸಿ ಪರಾಭವಗೊಂಡಿದ್ದರು.
Advertisement
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಎಸ್.ಟಿ.ಸೋಮಶೇಖರ್ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಆದರೆ ಸ್ಪೀಕರ್ ರಮೇಶ್ ಕುಮಾರ್ ಅವರು ಸೋಮಶೇರ್ ಅವರನ್ನು ಅನರ್ಹಗೊಳಿಸಿರುವ ಪ್ರಕರಣ ಸುಪ್ರೀಂಕೋರ್ಟ್ ನಲ್ಲಿದೆ.
Advertisement
ಒಂದು ವೇಳೆ ಸುಪ್ರೀಂಕೋರ್ಟ್ ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದರೆ ಯಶವಂತಪು ಕ್ಷೇತ್ರದ ಬಿಜೆಪಿ ಎಸ್.ಟಿ.ಸೋಮಶೇಖರ್ ಅವರಿಗೆ ಹೋಗುತ್ತದೆ. ಇದರಿಂದ ತಮ್ಮ ಸ್ಪರ್ಧೆಗೆ ಹಿನ್ನಡೆಯಾಗುತ್ತದೆ ಎನ್ನುವುದು ಜಗ್ಗೇಶ್ ಅವರ ವಿಚಾರವಾಗಿದೆ. ಟಿಕೆಟ್ ತಪ್ಪುತ್ತದೆ ಎನ್ನುವ ಆತಂಕವನ್ನು ಜಗ್ಗೇಶ್ ವ್ಯಕ್ತಪಡಿಸಿದ್ದಾರೆ ಎಂದು ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.