ಎತ್ತಿನಹೊಳೆ ಯೋಜನೆಯ ಮೊದಲ ಹಂತ ಉದ್ಘಾಟನೆ ಬೆನ್ನಲ್ಲೆ ಕೇಂದ್ರ ಸರ್ಕಾರ ಆಕ್ಷೇಪ

Public TV
1 Min Read
Yettinahole Project Siddaramaiah

ನವದೆಹಲಿ: ಎತ್ತಿನಹೊಳೆ ಯೋಜನೆಯ (Yettinahole Project) ಮೊದಲ ಹಂತ ಉದ್ಘಾಟನೆ ಬೆನ್ನಲ್ಲೆ ಕೇಂದ್ರ ಸರ್ಕಾರ (Union Govt) ಆಕ್ಷೇಪ ವ್ಯಕ್ತಪಡಿಸಿದೆ. ಯೋಜನೆ ಅನುಷ್ಠಾನದ ವೇಳೆ ಪಶ್ಚಿಮ ಘಟ್ಟಕ್ಕೆ ಹಾನಿಯಾದ ಬಗ್ಗೆ ಮಾಹಿತಿ ಇದೆ. ಸೂಕ್ಷ್ಮ ಜೀವರಾಶಿಗಳಿಗೆ ತೊಂದರೆಯಾಗಿದೆ. ಗುಡ್ಡ ಕುಸಿತ ಸಂಭವಿಸುತ್ತಿದೆ. ಆದರೆ ನೀರು ನೀಡುವ ಉದ್ದೇಶ ಪೂರ್ಣ ಪ್ರಮಾಣದಲ್ಲಿ ಈಡೇರಿದಂತೆ ಕಾಣುತ್ತಿಲ್ಲ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ತಾಪಮಾನ ಬದಲಾವಣೆ ಸಚಿವಾಲಯ ಆಕ್ಷೇಪ ವ್ಯಕ್ತಪಡಿಸಿದೆ.

Yettinahole Project

ಈ ಬಗ್ಗೆ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಎನ್.‌ಮಂಜುನಾಥ್‌ಗೆ ಪತ್ರ ಬರೆದಿರುವ ಸಚಿವಾಲಯದ ಡಿಐಜಿ ಪ್ರಣೀತಾ ಪಾಲ್, ಯೋಜನೆಗೆ 1200 ಹೆಕ್ಟೇರ್ ಭೂಮಿ ಬಳಸಿಕೊಳ್ಳಲಾಗುತ್ತಿದೆ. ಇದರಲ್ಲಿ ಅರ್ಧದಷ್ಟು ಅರಣ್ಯ ಭೂಮಿ ಎನ್ನಲಾಗಿದೆ. ಅರಣ್ಯ ನಾಶಕ್ಕೆ ಪರ್ಯಾಯ ಅರಣ್ಯದ ಭರವಸೆ ನೀಡಿತ್ತು. ಈಗ ನೀಡಿರುವ ಮಾಹಿತಿಯ ಪ್ರದೇಶದಲ್ಲಿ ರಸ್ತೆ ಹಾದು ಹೋಗಿದೆ. ಹೀಗಾಗಿ ಈ ಬಗ್ಗೆ ವಾಸ್ತವಾಂಶ ವರದಿ ಸಲ್ಲಿಸಬೇಕು. ಇಡೀ ಯೋಜನೆಯ ಕಾರ್ಯಸಾಧ್ಯತೆ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದೆ. ಇದನ್ನೂ ಓದಿ: ಚೀನಾಗಿಂತ ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚು – ಅಮೆರಿಕದಲ್ಲಿ ರಾಹುಲ್‌ ಗಾಂಧಿ ಭಾಷಣ

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಕಾಲುವೆ ನಿರ್ಮಾಣದ ಬಗ್ಗೆ ವರದಿ, ಕಂಚಿಗಾನಹಳ್ಳಿಯ ಸರ್ವೆ ಸಂಖ್ಯೆ 2, 30 ಹಾಗೂ ಯಲ್ಲಾಪುರ ಗ್ರಾಮದ ಸರ್ವೆ ಸಂಖ್ಯೆ 34, 35 ಮತ್ತು 36ರ ಅರಣ್ಯ ಬಳಕೆ ಬಗ್ಗೆ ವರದಿ ಕೇಳಿದೆ‌. 26 ಎಕರೆ ಅರಣ್ಯ ಬಳಕೆಗೆ ವಿಶ್ವೇಶ್ವರ ಜಲ ನಿಗಮವು 2020 ರಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು. ಒಪ್ಪಿಗೆ ನೀಡುವಂತೆ ರಾಜ್ಯ ಸರ್ಕಾರವು 2024ರ ಜುಲೈ ತಿಂಗಳಲ್ಲಿ ಪತ್ರ ಬರೆದಿತ್ತು. ಈ ಪ್ರಸ್ತಾವದ ಕುರಿತು ಸ್ಪಷ್ಟನೆ ಹಾಗೂ ಹೆಚ್ಚುವರಿ ಮಾಹಿತಿ ಒದಗಿಸುವಂತೆ ರಾಜ್ಯ ಅರಣ್ಯ ಇಲಾಖೆಗೆ ಸಚಿವಾಲಯ ನಿರ್ದೇಶನ ನೀಡಿದೆ.

Share This Article