ಬೆಂಗಳೂರು: ಯೋಗ ಕೇವಲ ವ್ಯಾಯಾಮವಲ್ಲ, ಯೋಗ ವಿಜ್ಞಾನದ ನಾಲ್ಕನೇ ಆಯಾಮ. ಯೋಗವು ಆರೋಗ್ಯಕರ ದೇಹದಲ್ಲಿ ಆರೋಗ್ಯಕರ ಮನಸ್ಸಿನ ಗುರಿಯನ್ನು ಹೊಂದಿರುವ ಜೀವನ ಕಲೆಯಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು.
ಗುರುವಾರ ನಗರದ ಪ್ರಶಾಂತಿ ಕುಟೀರದಲ್ಲಿ ಸ್ವಾಮಿ ವಿವೇಕಾನಂದ ಅನುಸಂಧಾನ ಡೀಮ್ಡ್ ವಿಶ್ವವಿದ್ಯಾನಿಲಯ ಆಯೋಜಿಸಿದ್ದ ಯೋಗ ಸಂಶೋಧನೆ ಕುರಿತು 24ನೇ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದರು. ಇಡೀ ಜಗತ್ತು ಕೋವಿಡ್ ಸಾಂಕ್ರಾಮಿಕ ರೋಗದಿಂದ ಬಳಲುತ್ತಿದೆ. ಈ ಮಾರಣಾಂತಿಕ ರೋಗವನ್ನು ಗುಣಪಡಿಸಲು ಯಾವುದೇ ಔಷಧಿ ವ್ಯವಸ್ಥೆಯು ಸಂಪೂರ್ಣವಾಗಿ ಸಹಾಯ ಮಾಡುವುದಿಲ್ಲ. ಆದ್ದರಿಂದ ರೋಗಿಗಳ ಚಿಕಿತ್ಸೆಗೆ ಸಮಗ್ರ ವಿಧಾನದ ಅವಶ್ಯಕತೆಯಿದೆ. ಇದನ್ನೂ ಓದಿ: ತಮಿಳು ಭಾಷೆಯನ್ನು ಕೇಂದ್ರದ ಅಧಿಕೃತ ಭಾಷೆಯಾಗಿ ಘೋಷಿಸಿ: ಸ್ಟಾಲಿನ್
Advertisement
Advertisement
ಈ ನಿಟ್ಟಿನಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ಭಾರತ ಸರ್ಕಾರದ ಆಯುಷ್ ಸಚಿವಾಲಯವು ಆಯುರ್ವೇದ ಮತ್ತು ಯೋಗಕ್ಕೆ ವಿಶೇಷ ಒತ್ತು ನೀಡುವ ಮೂಲಕ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಗಳನ್ನು ಪುನರುಜ್ಜೀವನಗೊಳಿಸುವ ಮೂಲಕ ಸಮಗ್ರ ಆರೋಗ್ಯವನ್ನು ಉತ್ತೇಜಿಸುತ್ತಿದೆ ಎಂದು ಹೇಳಿದರು.
Advertisement
ಪ್ರಸ್ತುತ ವಾತಾವರಣದಲ್ಲಿ, ಆಯುರ್ವೇದದಂತಹ ವೈದ್ಯಕೀಯ ವ್ಯವಸ್ಥೆಯ ಮೂಲಕ ಮಾತ್ರ ಸಾಧಿಸಬಹುದಾದ ಏಕೈಕ ಆಯ್ಕೆಯೆಂದರೆ ಸಮಗ್ರ ಔಷಧ. ಇಂದರಿಂದ ನಾವು ಯೋಗದ ಮಹತ್ವವನ್ನು ಅರ್ಥಮಾಡಿಕೊಳ್ಳಬೇಕಾಗಿದೆ. ಕೆಲವು ವರ್ಷಗಳ ಹಿಂದೆ, ಯೋಗಕ್ಕೆ ಆಯುರ್ವೇದ ರೂಪದಲ್ಲಿ ಮಾತ್ರ ಪ್ರಾಮುಖ್ಯತೆ ನೀಡಲಾಯಿತು. ಆದರೆ ಪ್ರಸ್ತುತ ಕಾಲದಲ್ಲಿ ವೈಜ್ಞಾನಿಕವಾಗಿಯೂ ಸಹ ಯೋಗಕ್ಕೆ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
Advertisement
ಜಾಗತಿಕ ಕೊರೊನಾ ಸಾಂಕ್ರಾಮಿಕದಲ್ಲಿ, ವೈದ್ಯರು ಸಹ ಯೋಗ ಮಾಡಲು ರೋಗಿಯನ್ನು ಪೆÇ್ರೀತ್ಸಾಹಿಸುತ್ತಿರುವುದು ಕಂಡುಬಂದಿದೆ. ಯೋಗ ಮಾಡುವುದರಿಂದ ನಮ್ಮ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ದೇಹವು ರೋಗ ಮುಕ್ತವಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ನಮ್ಮ ಇಂಡಸ್ಟ್ರಿ ಏನು, ನಮ್ಮ ಗೌರವ ಏನು ಎಲ್ಲರಿಗೂ ಗೊತ್ತು: ತೆಲಗು ನಿರ್ದೇಶಕನಿಗೆ ಶಿವಣ್ಣ ತಿರುಗೇಟು
ರಾಜ್ಯಸಭಾ ಸಂಸದರಾದ ಡಾ.ವಿನಯ್ ಸಹಸ್ರಬುದ್ಧೆ, ವಿಶ್ವಗುರು ಮಹಾಮಂಡಲೇಶ್ವರ ಪರಮಹಂಸ ಸ್ವಾಮಿ ಮಹೇಶ್ವರಾನಂದ, ಕುಲಪತಿ ಡಾ.ಎಚ್.ಆರ್.ನಾಗೇಂದ್ರ, ನಿರ್ದೇಶಕರಾದ ಡಾ.ಮಂಜುನಾಥ್, ಬಿ.ಆರ್.ರಾಮಕೃಷ್ಣ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.