ಬೆಂಗಳೂರು: ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿ ಎದುರು ಸಾಮೂಹಿಕ ಯೋಗಾಸನ ಕಾರ್ಯಕ್ರಮ ನಡೆಯಿತು.
ಬಿಜೆಪಿ ಕಚೇರಿ ಎದುರು ರಸ್ತೆಯಲ್ಲೇ ಕಾರ್ಯಕರ್ತರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಯೋಗ ಮಾಡಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯನಾಗಿರೋ ಬಿಎಸ್‍ವೈ ಸೂರ್ಯ ನಮಸ್ಕಾರ ಮಾಡುವಷ್ಟರಲ್ಲಿ ಸುಸ್ತಾದ್ರು. ಹೀಗಾಗಿ ಲಘು ಯೋಗ , ಸೂರ್ಯ ನಮಸ್ಕಾರದ ಮೂರು ಆಸನಗಳ ಬಳಿಕ ಸ್ವಲ್ಪ ಹೊತ್ತು ವಿಶ್ರಾಂತಿ ತೆಗೆದುಕೊಂಡರು.
Advertisement
Advertisement
ಬಳಿಕ ಮಾತನಾಡಿದ ಬಿಎಸ್‍ವೈ, ಸ್ವಾಮಿ ವಿವೇಕಾನಂದರು ಹೇಳಿದಂತೆ ಯೋಗ ಮನಸ್ಸನ್ನು ಶಕ್ತಿಯುತ ಹಾಗು ಶಿಸ್ತುಬದ್ಧಗೊಳಿಸಲಿದೆ. ಯೋಗ ಕೇವಲ ದೈಹಿಕ ವ್ಯಾಯಾಮ ಮಾತ್ರವಲ್ಲ, ಶರೀರ, ಬುದ್ಧಿ, ಮನಸ್ಸು ಸಮತೋಲನ ಸಾಧಿಸುವ ಜೀವನ ವಿಧಾನವಾಗಿದೆ. ನಮ್ಮಲ್ಲಿನ ಶಕ್ತಿಯನ್ನು ಕಂಡುಕೊಳ್ಳುವುದೇ ಯೋಗ. ಪುರಾತನ ಯೋಗ ಪದ್ಧತಿ ನಮ್ಮ ದೇಶದ ಹೆಮ್ಮೆಯಾಗಿದೆ. ದೇಹ ದೇವಾಲಯವಿದ್ದಂತೆ ಅದನ್ನು ಶುದ್ಧಿಯಾಗಿಟ್ಟುಕೊಳ್ಳುವುದೇ ಯೋಗ. ಯೋಗ ಇಂದು ಜಾಗತಿಕ ಮನ್ನಣೆ ಪಡೆದಿದೆ ಅಂದ್ರು.
Advertisement
ಅಂತಾರಾಷ್ಟ್ರೀಯ ಯೋಗ ದಿನ ಎಂದು ವಿಶ್ವಸಂಸ್ಥೆ ಘೊಷಿಸಿದೆ. ಇದರ ಯಶಸ್ಸು ಮೋದಿಗೆ ಸಲ್ಲಬೇಕು. ಯೋಗ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ಆರೋಗ್ಯವಂತರನ್ನಾಗಿ ಮಾಡುವ ಅಗತ್ಯವಿದೆ. ದೈಹಿಕ ಮಾನಸಿಕ ಸದೃಢತೆ ಬೆಳೆಸಿಕೊಳ್ಳಬೇಕು. ಆರೋಗ್ಯ ಪೂರ್ಣ ಸಮಾಜ ನಿರ್ಮಾಣವಾಗಬೇಕು. ಯೋಗ ದಿನಕ್ಕೆ ಯೋಗಾಸನ ಮಾಡುವುದು ಸೀಮಿತವಾಗದೆ ಯೋಗ ನಮ್ಮ ಬದುಕಿನ ದೈನಂದಿನ ಅವಿಭಾಜ್ಯ ಅಂಗವಾಗಬೇಕು ಅಂತ ಸಲಹೆ ನೀಡಿದ್ರು.
Advertisement
Celebrated International Yoga Day at Malleshwaram, Yoga is a way to have a divine lifestyle and also strengthen mind body & soul. I also take the opportunity to thank Shri Narendra Modi for his commendable efforts in taking yoga to the global platform. pic.twitter.com/evskHB08dh
— B.S.Yediyurappa (@BSYBJP) June 21, 2018