CinemaKarnatakaLatestMain PostSandalwood

ದಸರಾ ಧಮಾಕ : ಒಟಿಟಿಗೆ ಬರ್ತಿದೆ ಯೋಗರಾಜ್ ಭಟ್, ಗಣೇಶ್ ಕಾಂಬಿನೇಷನ್ನ ‘ಗಾಳಿಪಟ-2’

ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಯೋಗರಾಜ್ ಭಟ್ರು (Yogaraj Bhatt) ಸಮಾಗಮಾದ ಗಾಳಿಪಟ 2 (Gaalipata 2) ಸಿನಿಮಾ ತೆರೆಮೇಲೆ ಮತ್ತೆ ಮೋಡಿ ಮಾಡಿತ್ತು. ಬಾಕ್ಸಾಫೀಸ್ ನಲ್ಲಿ ಭರ್ಜರಿ ಕಮಾಯಿ ಮಾಡಿದ್ದ ಈ ಚಿತ್ರಕ್ಕೆ ಸಿನಿಮಾ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆಗಸ್ಟ್ 12ರಂದು ರಾಜ್ಯ ಸೇರಿದಂತೆ ಹೊರ ರಾಜ್ಯ ಹಾಗೂ ವಿದೇಶಗಳಲ್ಲಿಯೂ ಹಾರಿದ್ದ ಗಾಳಿಪಟ 2 ಸಿನಿಮಾ ಹೊಸ ದಾಖಲೆ ಬರೆದಿತ್ತು. ಸ್ನೇಹ, ಪ್ರೇಮ, ವಿರಹ, ತ್ಯಾಗ, ಭಾವನೆಯ ಜೊತೆಗೆ ಒಂದಿಷ್ಟು ಮಸಾಲೆ ಸೇರಿಸಿ ಭಟ್ರು ತಯಾರಿಸಿದ್ದ ಸಿನಿಮಾ ಈಗ ಒಟಿಟಿಗೆ (OTT) ಎಂಟ್ರಿ ಕೊಡಲು ಸಜ್ಜಾಗಿದೆ.

ಗೋಲ್ಡನ್‌ ಸ್ಟಾರ್ ಗಣೇಶ್ (Ganesh), ದೂದ್ ಪೇಡ ದಿಗಂತ್ (Diganth) ಹಾಗೂ ನಿರ್ದೇಶಕ ಪವನ್ ಕುಮಾರ್ ನಾಯಕರಾಗಿ ನಟಿಸಿದ್ದ ಈ ಚಿತ್ರದಲ್ಲಿ ನಾಯಕಿಯರಾಗಿ ವೈಭವಿ ಶಾಂಡಿಲ್ಯ, ಸಂಯುಕ್ತ ಮೆನನ್, ಶರ್ಮಿಳಾ ಮಾಂಡ್ರೆ ಕಾಣಿಸಿಕೊಂಡಿದ್ದಾರೆ. ಇನ್ನು ಈ ಚಿತ್ರದಲ್ಲಿ ಗಣೇಶ್‌ ಅವರ ಪುತ್ರ ವಿಹಾನ್‌ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಒಂದೊಳ್ಳೆ ಫ್ಯಾಮಿಲಿ ಎಂಟರ್ ಟೈನರ್ ಆಗಿರುವ ಗಾಳಿಪಟ 2 ಸಿನಿಮಾ ಅಕ್ಟೋಬರ್ 5ರಂದು ದಸರಾ ಹಬ್ಬದ ಸ್ಪೆಷಲ್ ಆಗಿ ಜೀ5 ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಇದನ್ನೂ ಓದಿ:ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಸಿನಿಮಾದ ಟೈಟಲ್ ಲಾಂಚ್ ಗೆ ಮುಹೂರ್ತ ಫಿಕ್ಸ್

ಹಿರಿಯ ನಟ ಅನಂತ್ ನಾಗ್ (Anant Nag) ಕನ್ನಡ ಮೇಷ್ಟ್ರು ಪಾತ್ರದಲ್ಲಿ ಬಣ್ಣ ಹಚ್ಚಿದ್ದು, ಪದ್ಮಜಾ ರಾವ್‌, ಸುಧಾ ಬೆಳವಾಡಿ, ರಂಗಾಯಣ ರಘು ಸೇರಿದಂತೆ ಮುಂತಾದವರು ನಟಿಸುತ್ತಿದ್ದಾರೆ. ಸಂತೋಷ್‌ ರೈ ಪಾತಾಜೆ ಕ್ಯಾಮೆರಾ ವರ್ಕ್, ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದೆ.  ರಮೇಶ್‌ ರೆಡ್ಡಿ ನಿರ್ಮಾಣದಲ್ಲಿ ಮೂಡಿಬಂದಿದ್ದ ಗಾಳಿಪಟ 2 ಸಿನಿಮಾವನ್ನು ಥಿಯೇಟರ್ ನಲ್ಲಿ ಮಿಸ್ ಮಾಡಿಕೊಂಡವರು ಈಗ ಮನೆಯಲ್ಲಿಯೇ ಕುಳಿತು ನೋಡಬಹುದು.

ಈಗಾಗಲೇ ಜೀ5 ಒಟಿಟಿಯಲ್ಲಿ ಕಿಚ್ಚನ ವಿಕ್ರಾಂತ್ ರೋಣ ಸಿನಿಮಾ ಹಂಗಾಮ ಸೃಷ್ಟಿಸಿದ್ದು, ಟಾಪ್ ಟ್ರೇಡಿಂಗ್ ಮೂರನೇ ಸ್ಥಾನ ಪಡೆದುಕೊಂಡಿದೆ. ಕೋಟಿ ಗಟ್ಟಲೆ ಮಿಲಿಯನ್ ವೀವ್ಸ್ ಪಡೆದಿರುವ ವಿಕ್ರಾಂತ್ ರೋಣ ಚಿತ್ರವನ್ನು ಥಿಯೇಟರ್ ನಲ್ಲಿ‌‌ ಮಿಸ್ ಮಾಡಿದವರು ಮನೆಯಲ್ಲಿ ನೋಡಬಹುದು. ಹಾಗಿದ್ರೆ ಮತ್ಯಾಕೆ ತಡ ಜೀ5ಒಟಿಟಿಗೆ ಲಾಗಿನ್ ಆಗಿ. ಎರಡು ಬಹುನಿರೀಕ್ಷಿತ ಕನ್ನಡ ಸಿನಿಮಾ ನೋಡಿ.

Live Tv

Leave a Reply

Your email address will not be published. Required fields are marked *

Back to top button