ಧಾರವಾಡ: ಬಿಜೆಪಿ ಮುಖಂಡ ಯೋಗೀಶ್ ಗೌಡನ (Yogesh Gowda) ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ (Vinay Kulakarni) ಜನಪ್ರತಿನಿಧಿಗಳ ನ್ಯಾಯಾಲಯ (Representatives Court) ಮತ್ತೆ ಶಾಕ್ ಕೊಟ್ಟಿದೆ.
ಜಿಲ್ಲಾ ಪಂಚಾಯಿತಿ ಸದಸ್ಯನಾಗಿದ್ದ ಬಿಜೆಪಿ ಮುಖಂಡ ಯೋಗೀಶ್ ಗೌಡನ ಕೊಲೆ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಿನಯ್ ಕುಲಕರ್ಣಿ ಧಾರವಾಡ (Dharwad) ಜಿಲ್ಲೆ ಭೇಟಿಗೆ ಕೋರ್ಟ್ ಅನುಮತಿ ನಿರಾಕರಿಸಿದೆ. ಇದನ್ನೂ ಓದಿ: ಹಣ ಪಾವತಿಸದ ವಿಮಾ ಕಂಪನಿಗೆ ಗ್ರಾಹಕರ ಆಯೋಗದಿಂದ 35 ಸಾವಿರ ರೂ. ದಂಡ
Advertisement
Advertisement
ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ (Hubballi-Dharwad Mayoral Elections) ಜೂನ್ 20 ರಂದು ಧಾರವಾಡಕ್ಕೆ ತೆರಳಿ ಮತದಾನ ಮಾಡುವುದಕ್ಕೆ ಅನುಮತಿ ಕೋರಿದ್ದರು. ಆದರೆ ಕೋರ್ಟ್ ಅನುಮತಿ ನಿರಾಕರಿಸಿದೆ. ಈ ಹಿಂದೆಯೂ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿತ್ತು.
Advertisement
ಕೊಲೆ ಪ್ರಕರಣದ ಸಾಕ್ಷಿಯ ತಾಯಿ ನಗರ ಪಾಲಿಕೆ ಸದಸ್ಯರು, ಆದ್ರೆ ಶಾಸಕರಾದ ಮೇಲೆ ವಿನಯ್ ಕುಲಕರ್ಣಿ ಮತ್ತಷ್ಟು ಪ್ರಭಾವಿಯಾಗಿದ್ದಾರೆ. ಆದ್ದರಿಂದ ಅನುಮತಿ ನೀಡದಂತೆ CBI ಎಸ್ಪಿಪಿ ಗಂಗಾಧರ ಶೆಟ್ಟಿ ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ನಂತರ ನ್ಯಾಯಾಧೀಶ ಬಿ. ಜಯಂತಕುಮಾರ್ ಅನುಮತಿ ನಿರಾಕರಿಸಿ ಆದೇಶ ಪ್ರಕಟಿಸಿದರು. ಇದನ್ನೂ ಓದಿ: ಹುಬ್ಬಳ್ಳಿ ಧಾರವಾಡ ಮೇಯರ್ ಚುನಾವಣೆ – ಗದ್ದುಗೆ ಹಿಡಿಯಲು ಕೈ ಕಸರತ್ತು, ಬೆಂಗಳೂರಿನಲ್ಲಿ ಸಭೆ
Advertisement
ಅರ್ಜಿ ಹಾಕಿದ್ದು ಯಾಕೆ?
ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧಿಸಿತ್ತು. ಜಾಮೀನು ಮಂಜೂರು ಮಾಡುವಾಗ ಧಾರವಾಡ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್ ಷರತ್ತು ವಿಧಿಸಿತ್ತು. ಆದರೆ ಅನಿವಾರ್ಯ ಇದ್ದಾಗ ಮಾತ್ರ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಿತ್ತು. ಆದರೆ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಗೆದ್ದಿದ್ದ ವಿನಯ್ ಕುಲಕರ್ಣಿ ಮೇಯರ್ ಚುನಾವಣೆಯಲ್ಲಿ ಮತದಾನ ಮಾಡಲು ಅನುಮತಿ ಕೋರಿ ಅರ್ಜಿ ಸಲ್ಲಿಸಿ ಪ್ರವೇಶಕ್ಕೆ ಮನವಿ ಮಾಡಿದ್ದರು.
ಏನಿದು ಕೇಸ್?
2017ರ ಜೂನ್ 15ರಂದು ಬಿಜೆಪಿ ಮುಖಂಡ ಯೋಗೇಶ್ ಗೌಡನ ಕೊಲೆಯಾಗಿತ್ತು. ಅಂದು ಬೆಳಗ್ಗೆ ಧಾರವಾಡ ನಗರದ ಸಪ್ತಾಪುರ ಜಿಮ್ಗೆ ಎಂಟ್ರಿ ಕೊಟ್ಟಿದ್ದ ದುಷ್ಕರ್ಮಿಗಳು ಯೋಗೇಶ್ ಗೌಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದಿದ್ದರು. ಈ ದೃಶ್ಯವು ಜಿಮ್ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳನ್ನಾಧರಿಸಿ ಪೊಲೀಸರು ಮಾಜಿ ಸಚಿವ, ಸ್ಥಳೀಯ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು. ಹೀಗಾಗಿ ಕೊಲೆಯ ಹಿಂದೆ ವಿನಯ್ ಕುಲಕರ್ಣಿ ಅವರ ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿತ್ತು.
ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಆರೋಪಿಗಳು ಯೋಗಿಶ್ ಗೌಡನ ಸಹೋದರನ ಜೊತೆ ರಾಜಿ ಮಾಡಿಕೊಳ್ಳಲು ಮುಂದಾಗಿದ್ದರು. ಇತ್ತ ವಿನಯ್ ಕುಲಕರ್ಣಿಯವರ ಹೆಸರನ್ನು ಕೈ ಬಿಡಲು ಅಧಿಕಾರಿಗಳು ಪ್ಲ್ಯಾನ್ ಮಾಡಿಕೊಳ್ಳುತ್ತಿದ್ದಾರೆ ಎಂದು ಯೋಗೇಶ್ ಗೌಡ ತಾಯಿ ಆರೋಪಿಸಿದ್ದರು.
ಅಂದಿನ ರಾಜ್ಯ ಸರ್ಕಾರ 2019 ಸೆಪ್ಟೆಂಬರ್ 9ರಂದು ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆಯನ್ನು ಅಧಿಕೃತವಾಗಿ ಸಿಬಿಐಗೆ ಹಸ್ತಾಂತರಿಸಿತ್ತು. ತನಿಖೆ ಆರಂಭಿಸಿರುವ ಸಿಬಿಐ ಪ್ರಕರಣದ ಆರೋಪಿಗಳಾದ ಬಸವರಾಜ ಶಿವಪ್ಪ, ವಿಕ್ರಮ್ ಬಳ್ಳಾರಿ, ಕೀರ್ತಿ ಕುಮಾರ್ ಕುರಹಟ್ಟಿ, ಸಂದೀಪ್ ಸೌದತ್ತಿ, ವಿನಾಯಕ ಕಾಟಗಿ ಹಾಗೂ ಮಹಾಬಲೇಶ್ವರ ಹೊನಗಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿತ್ತು.