ಬೆಂಗಳೂರು: ದೇವರ ಮೇಲೆ ಭರವಸೆ ಇದೆ. ಸತ್ಯಕ್ಕೆ ಯಾವತ್ತೂ ಜಯ ಸಿಗಲಿದೆ ಎಂಬ ನಂಬಿಕೆಯಿದೆ ಎಂದು ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ(Vinay Kulkarni) ಹೇಳಿದ್ದಾರೆ.
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ (Yogesh Gowda Murder Case) ಸಂಬಂಧಿಸಿದಂತೆ ಇಂದು ಅಂತಿಮ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಕೋರ್ಟ್‌ಗೆ ತೆರಳುವ ಮೊದಲು ಪಬ್ಲಿಕ್ ಟಿವಿ ಜೊತೆ ಅವರು ಮಾತನಾಡಿದರು.
ಕೋರ್ಟ್ ಮೇಲೆ ಭರವಸೆ ಇದೆ. ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಮಾಧ್ಯಮದ ಮುಂದೆ ಮಾತನಾಡುವುದು ಸರಿಯಲ್ಲ ಕೋರ್ಟ್ ತೀರ್ಪು ಪ್ರಕಟಿಸಲಿ ಎಂದರು.
ರಾಜಕೀಯ ವಿಚಾರದ ಬಗ್ಗೆ ಮಾತನಾಡುವುದಿಲ್ಲ. 200% ಸತ್ಯಕ್ಕೆ ಯಾವಗಾಲೂ ಜಯ ಸಿಗಲಿದೆ. ಜಯ ಸಿಗಬೇಕಾದರೆ ಕಷ್ಟ ಪಡಬೇಕು ಎಂದು ಹೇಳಿದರು.
2016ರಲ್ಲಿ ನಡೆದಿದ್ದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್‌ಗೌಡ (Yogesh Gowda) ಕೊಲೆ ಪ್ರಕರಣದ ತೀರ್ಪನ್ನು ಇಂದು ಜನಪ್ರತಿನಿಧಿಗಳ ನ್ಯಾಯಾಲಯ ಪ್ರಕಟಿಸಲಿದೆ.

