ಹುಬ್ಬಳ್ಳಿ: ಯೋಗೇಶ್‍ಗೌಡ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಯೋಗೇಶ್ ಪತ್ನಿ ಮಲ್ಲಮ್ಮರನ್ನು ಕಾಂಗ್ರೆಸ್ ಹೈಜಾಕ್ ಮಾಡಿದೆ ಎಂಬ ಆರೋಪ ಕೇಳಿಬರುತ್ತಿದೆ.
ಗುರುವಾರ ರಾತ್ರೋ ರಾತ್ರಿ ಯೋಗೇಶ್ ಗೌಡ ಪತ್ನಿ ಮಲ್ಲಮ್ಮರನ್ನು ಕಾಂಗ್ರೆಸ್ ನಾಯಕರು ಕರೆದೊಯ್ದಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯ ಸುರೇಶಗೌಡ ಹಾಗೂ ನಾಗರಾಜ ಗೌರಿಯ ಮೂಲಕ ಕಾಂಗ್ರೆಸ್‍ಗೆ ಸೇರ್ಪಡೆಯಾಗುವಂತೆ ಒತ್ತಾಯಿಸಿದ್ದು, ಜೀವ ಬೆದರಿಕೆ ಒಡ್ಡಿ ಕಾಂಗ್ರೆಸ್‍ಗೆ ಸೇರ್ಪಡೆ ಮಾಡಿಕೊಳ್ಳುವ ಯತ್ನ ನಡೆದಿದೆ ಎಂದು ಯೋಗೇಶ್‍ಗೌಡ ಸಹೋದರ ಗುರುನಾಥ ಗೌಡ ಆರೋಪಿಸಿದ್ದಾರೆ.
ಇಂದು ಬೆಳಗ್ಗೆ ಸಿದ್ದರಾಮಯ್ಯ ಸಮ್ಮುಖದಲ್ಲಿ ಮಲ್ಲಮ್ಮರನ್ನು ಕಾಂಗ್ರೆಸ್‍ಗೆ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ. ಆದರೆ ಕಳೆದ 15 ದಿನಗಳಿಂದ ನಿರಂತರವಾಗಿ ಕ್ರಾಂಗೆಸ್‍ಗೆ ಸೇರ್ಪಡೆಯಾಗುವಂತೆ ಒತ್ತಾಯಪಡಿಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.
ಕಳೆದ ವರ್ಷ ಯೋಗೇಶ್‍ಗೌಡ ಹತ್ಯೆಯಾಗಿದ್ದರು. ಈ ಸಂಬಂಧ ಸಚಿವ ವಿನಯ್ ಕುಲಕರ್ಣಿ ಮೇಲೆ ಕೊಲೆ ಆರೋಪ ಕೇಳಿ ಬಂದಿತ್ತು.