ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ದೋಷಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಡೀ ರಾತ್ರಿ ನಿದ್ದೆ ಮಾಡಿಲ್ಲ ಎನ್ನಲಾಗಿದೆ.
ನಿನ್ನೆ ತಡರಾತ್ರಿ ವೇಳೆಗೆ ಅಪರಾಧಿ ಕುಲಕರ್ಣಿ ಜೈಲುಪಾಲಾದರು. ಸೆಲ್ ಒಳಗೆ ಹೋಗುತ್ತಿದ್ದಂತೆ ಮತ್ತೆ ಕಣ್ಣೀರು ಹಾಕಿದರು. ನಿನ್ನೆ ಮಧ್ಯಾಹ್ನದಿಂದ ಇಲ್ಲಿವರೆಗೂ ಕುಲಕರ್ಣಿ ಊಟ ಮಾಡಿಲ್ಲ. ಇದನ್ನೂ ಓದಿ: ಯೋಗೇಶ್‌ಗೌಡ ಕೊಲೆ ಕೇಸಲ್ಲಿ ವಿನಯ್ ಕುಲಕರ್ಣಿ ದೋಷಿ – ಇಂದು ಶಿಕ್ಷೆ ಪ್ರಮಾಣ ಪ್ರಕಟ, ಎಲ್ಲರ ಚಿತ್ತ ಕೋರ್ಟ್‌ನತ್ತ
ಇಂದು ಹತ್ತು ಗಂಟೆ ಒಳಗೆ ಎಲ್ಲರಿಗೂ ಸಿಟಿಪಿ ನಂಬರ್ ಅನ್ನು ಜೈಲಾಧಿಕಾರಿಗಳು ನೀಡಿದ್ದಾರೆ. ಎಲ್ಲರನ್ನೂ ಕ್ವಾರಂಟೈನ್ ಸೆಲ್‌ನಲ್ಲಿರಿಸಿದ್ದಾರೆ. ಎಲ್ಲಾ ಅಪರಾಧಿಗಳನ್ನು ಮತ್ತೆ ಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ. ಸಿಬಿಐ ಭದ್ರತೆಯಲ್ಲಿ ಕೋರ್ಟ್‌ಗೆ ಬರಲಿದ್ದಾರೆ.
ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ (Vinay Kulkarni) ಯೋಗೇಶ್‌ಗೌಡ (Yogesh Gowda) ಕೊಲೆ ಕೇಸಲ್ಲಿ ಅಪರಾಧಿಯಾಗಿದ್ದಾರೆ. ಈ ಸಂಬಂಧ ನ್ಯಾಯಾಲಯ ಬುಧವಾರ ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ.

